ಪ್ರಧಾನ ಮಂತ್ರಿಯವರ ಕಛೇರಿ
ಉಧಂಪುರದಲ್ಲಿ ನಡೆದ ಬಸ್ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಶೋಕ ವ್ಯಕ್ತಪಡಿಸಿದ ಪ್ರಧಾನಮಂತ್ರಿ
ಪರಿಹಾರ ಘೋಷಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
20 APR 2026 1:02PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ತಮ್ಮ ಆಪ್ತರನ್ನು ಕಳೆದುಕೊಂಡವರಿಗೆ ಪ್ರಧಾನಮಂತ್ರಿಯವರು ತಮ್ಮ ಹೃತ್ಪೂರ್ವಕ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿ ಅವರು ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು.
ಪ್ರಧಾನಮಂತ್ರಿಗಳ ಕಚೇರಿ ತನ್ನ X ಪೋಸ್ಟ್ ನಲ್ಲಿ ಹೀಗೆ ತಿಳಿಸಿದೆ;
“ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ಕೇಳಿ ದುಃಖವಾಯಿತು. ತಮ್ಮ ಆಪ್ತರನ್ನು ಮತ್ತು ಆತ್ಮೀಯರನ್ನು ಕಳೆದುಕೊಂಡವರಿಗೆ ನಾನು ಹೃತ್ಪೂರ್ವಕ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ.
ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಪ್ರತಿಯೊಬ್ಬರ ಹತ್ತಿರದ ಸಂಬಂಧಿಕರಿಗೆ ಪಿಎಂಎನ್ ಆರ್ ಎಫ್ ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು: PM @narendramodi’’
*****
(ಪ್ರಕಟಣೆ ಐ.ಡಿ.: 2253701)
ವಿಸಿಟರ್ ಕೌಂಟರ್ : 9
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Telugu
,
Malayalam