ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ


ಪಿ.ಎಂ.ಎನ್‌.ಆರ್‌.ಎಫ್‌ ನಿಂದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ

प्रविष्टि तिथि: 23 APR 2026 2:34PM by PIB Bengaluru

ಪ್ರಧಾನಮಂತ್ರಿ ಅವರು, ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ  ಶೋಕ ವ್ಯಕ್ತಪಡಿಸಿದ್ದಾರೆ. ಈ ದುರಂತ ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪಗಳನ್ನು  ಸೂಚಿಸಿರುವ ಪ್ರಧಾನಮಂತ್ರಿ ಅವರು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.

ಮೃತರ ಪ್ರತಿ ಸಂಬಂಧಿಕರಿಗೆ ಪಿ.ಎಂ.ಎನ್‌.ಆರ್‌.ಎಫ್‌ ನಿಂದ ತಲಾ 2 ಲಕ್ಷ ರೂ. ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ನೀಡಲಾಗುವುದು ಎಂದು ಪ್ರಧಾನಮಂತ್ರಿ ಘೋಷಿಸಿದರು.

ಪ್ರಧಾನಮಂತ್ರಿ ಅವರು ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

“ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿ ತೀವ್ರ ದುಃಖಿತನಾಗಿದ್ದೇನೆ. ಮೃತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.

ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಹತ್ತಿರದ ಸಂಬಂಧಿಕರಿಗೆ ಪಿ.ಎಂ.ಎನ್.ಆರ್.ಎಫ್ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು: PM @narendramodi’’

 

*****


(रिलीज़ आईडी: 2254862) आगंतुक पटल : 43
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Bengali-TR , Assamese , Punjabi , Gujarati , Odia , Telugu , Malayalam