ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಪದ್ಮ ಪ್ರಶಸ್ತಿಗಳು-2027ಕ್ಕೆ ನಾಮನಿರ್ದೇಶನಗಳನ್ನು ಸಲ್ಲಿಸಲು 2026ರ ಜುಲೈ 31 ರವರೆಗೆ ಕಾಲಾವಕಾಶ

ಪ್ರಕಟಣಾ ದಿನಾಂಕ: 27 APR 2026 3:00PM by PIB Bengaluru

2027ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಕಟಿಸಲಾಗುವ 2027ನೇ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ/ಶಿಫಾರಸುಗಳನ್ನು ಸಲ್ಲಿಸುವ ಪ್ರಕ್ರಿಯೆ 2026ರ ಮಾರ್ಚ್ 15ರಿಂದ ಆರಂಭವಾಗಿದೆ.  ನಾಮನಿರ್ದೇಶನಗಳನ್ನು ಸಲ್ಲಿಸಲು ಕೊನೆಯ ದಿನಾಂಕ 2026ರ ಜುಲೈ 31. ಪದ್ಮ ಪ್ರಶಸ್ತಿಗಳಿಗಾಗಿ ನಾಮನಿರ್ದೇಶನ/ಶಿಫಾರಸುಗಳನ್ನು ಆನ್‌ ಲೈನ್ ನಲ್ಲಿ ರಾಷ್ಟ್ರೀಯ ಪುರಸ್ಕಾರ ಪೋರ್ಟಲ್  (https://awards.gov.in ) ಮೂಲಕ ಮಾತ್ರ ಸ್ವೀಕರಿಸಲಾಗುವುದು.

ಪದ್ಮ ಪ್ರಶಸ್ತಿಗಳಲ್ಲಿ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಸೇರಿದ್ದು, ಇವು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾಗಿವೆ. 1954 ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವುದು.  ಈ ಪ್ರಶಸ್ತಿಯು 'ಅಪ್ರತಿಮ ಕೆಲಸ ಕಾರ್ಯ'ವನ್ನು ಗುರುತಿಸುವ ಪ್ರಯತ್ನವಾಗಿದೆ ಮತ್ತು ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಾಮಾಜಿಕ ಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಮುಂತಾದ ಎಲ್ಲಾ ಕ್ಷೇತ್ರಗಳು/ವಿಭಾಗಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು/ಸೇವೆಗಾಗಿ ನೀಡಲಾಗುತ್ತದೆ. ಯಾವುದೇ ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗದ ಭೇದವಿಲ್ಲದೆ ಎಲ್ಲಾ ವ್ಯಕ್ತಿಗಳು ಈ ಪ್ರಶಸ್ತಿಗಳಿಗೆ ಅರ್ಹರು. ವೈದ್ಯರು ಮತ್ತು ವಿಜ್ಞಾನಿಗಳನ್ನು ಹೊರತುಪಡಿಸಿ, ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಕೆಲಸ ಮಾಡುವವರು ಸೇರಿದಂತೆ ಸರ್ಕಾರಿ ನೌಕರರು ಪದ್ಮ ಪ್ರಶಸ್ತಿಗಳಿಗೆ ಅರ್ಹರಲ್ಲ.

ಪದ್ಮ ಪ್ರಶಸ್ತಿಗಳನ್ನು "ಜನರ ಪದ್ಮ"ವನ್ನಾಗಿ ಪರಿವರ್ತಿಸಲು ಸರ್ಕಾರ ಬದ್ಧವಾಗಿದೆ. ಆದ್ದರಿಂದ, ಎಲ್ಲಾ ನಾಗರಿಕರು ಸ್ವಯಂ ನಾಮನಿರ್ದೇಶನ ಸೇರಿದಂತೆ ನಾಮನಿರ್ದೇಶನಗಳು/ಶಿಫಾರಸುಗಳನ್ನು ಮಾಡುವಂತೆ ಕೋರಲಾಗಿದೆ. ಮಹಿಳೆಯರು, ಸಮಾಜದ ದುರ್ಬಲ ವರ್ಗಗಳು, ಎಸ್‌ಸಿ ಮತ್ತು ಎಸ್‌ಟಿಗಳು, ದಿವ್ಯಾಂಗರು ಮತ್ತು ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವವರಲ್ಲಿ ತಮ್ಮ ಶ್ರೇಷ್ಠತೆ ಮತ್ತು ಸಾಧನೆಗಳನ್ನು ನಿಜವಾಗಿಯೂ ಗುರುತಿಸಲು ಅರ್ಹ ಪ್ರತಿಭಾನ್ವಿತ ವ್ಯಕ್ತಿಗಳನ್ನು ಗುರುತಿಸಲು ಸಂಘಟಿತ ಪ್ರಯತ್ನಗಳನ್ನು ಮಾಡಲಾಗುವುದು.

ನಾಮನಿರ್ದೇಶನಗಳು/ಶಿಫಾರಸುಗಳು ಮೇಲೆ ತಿಳಿಸಲಾದ ಪೋರ್ಟಲ್‌ನಲ್ಲಿ ಲಭ್ಯವಿರುವ ಸ್ವರೂಪದಲ್ಲಿ ನಿರ್ದಿಷ್ಟಪಡಿಸಿದ ಎಲ್ಲಾ ಸಂಬಂಧಿತ ವಿವರಗಳನ್ನು ಒಳಗೊಂಡಿರಬೇಕು, ಅದರಲ್ಲಿ ನಿರೂಪಣಾ ರೂಪದಲ್ಲಿ ಉಲ್ಲೇಖ (ಗರಿಷ್ಠ 800 ಪದಗಳು) ಸೇರಿರಬೇಕು, ಅದು ಶಿಫಾರಸು ಮಾಡಲಾದ ವ್ಯಕ್ತಿಯ ಆಯಾ ಕ್ಷೇತ್ರ/ವಿಭಾಗದ ವಿಶಿಷ್ಟ ಮತ್ತು ಅಸಾಧಾರಣ ಸಾಧನೆ/ ಸೇವೆಯನ್ನು ಸ್ಪಷ್ಟವಾಗಿ ಬಹಿರಂಗಪಡಿಸುವಂತಿರಬೇಕು.

ಈ ಕುರಿತಾದ ವಿವರಗಳು ಗೃಹ ಸಚಿವಾಲಯದ ವೆಬ್‌ಸೈಟ್‌ನಲ್ಲಿ (https://mha.gov.in) ನಲ್ಲಿ ‘ಪ್ರಶಸ್ತಿಗಳು ಮತ್ತು ಪದಕಗಳು’ ಶೀರ್ಷಿಕೆಯಡಿ ಮತ್ತು  ಪದ್ಮ ಪ್ರಶಸ್ತಿಗಳ ಪೋರ್ಟಲ್‌ನಲ್ಲಿ (https://padmaawards.gov.in) ಇವೆ. ಈ ಪ್ರಶಸ್ತಿಗಳಿಗೆ ಸಂಬಂಧಿಸಿದ ಕಾನೂನುಗಳು ಮತ್ತು ನಿಯಮಗಳು https://padmaawards.gov.in/AboutAwards.aspx ನಲ್ಲಿ ಲಭ್ಯವಿದೆ.

 

*****


(ಪ್ರಕಟಣೆ ಐ.ಡಿ.: 2255901) ವಿಸಿಟರ್ ಕೌಂಟರ್ : 25