ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕರ್ನಾಟಕದ ಬೆಂಗಳೂರಿನಲ್ಲಿ ಗೋಡೆ ಕುಸಿದು ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಪಿ ಎಂ ಎನ್‌ ಆರ್‌ ಎಫ್‌ ನಿಂದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ

प्रविष्टि तिथि: 29 APR 2026 11:22PM by PIB Bengaluru

ಕರ್ನಾಟಕದ ಬೆಂಗಳೂರಿನಲ್ಲಿ ಗೋಡೆ ಕುಸಿದು ಸಂಭವಿಸಿದ ದುರದೃಷ್ಟಕರ ಘಟನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿಗಳು ಮೃತರ ಕುಟುಂಬಗಳಿಗೆ ತಮ್ಮ ಸಂತಾಪ ಸೂಚಿಸಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. 

ಮೃತರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್‌ ಆರ್‌ ಎಫ್) ನಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ನೀಡುವುದಾಗಿ ಶ್ರೀ ಮೋದಿ ಅವರು ಪ್ರಕಟಿಸಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ: 

"ಕರ್ನಾಟಕದ ಬೆಂಗಳೂರಿನಲ್ಲಿ ಗೋಡೆ ಕುಸಿದು ಸಂಭವಿಸಿದ ದುರ್ಘಟನೆ ದುರದೃಷ್ಟಕರ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ."

“ಮೃತರ ವಾರಾಸುದಾರರಿಗೆ ಪಿ ಎಂ ಎನ್ ಆರ್ ಎಫ್ ನಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು: ಪ್ರಧಾನಮಂತ್ರಿ"

 

*****


(रिलीज़ आईडी: 2256857) आगंतुक पटल : 44
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Telugu , Malayalam