ಪ್ರಧಾನ ಮಂತ್ರಿಯವರ ಕಛೇರಿ
ಮಧ್ಯಪ್ರದೇಶದ ಧಾರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
ಪಿ ಎಂ ಎನ್ ಆರ್ ಎಫ್ ನಿಂದ ಪರಿಹಾರ ಪ್ರಕಟಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
29 APR 2026 11:25PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಧ್ಯಪ್ರದೇಶದ ಧಾರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಪ್ರಧಾನಿಯವರು ತಮ್ಮ ಹೃತ್ಪೂರ್ವಕ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಮೃತರ ಹತ್ತಿರದ ಸಂಬಂಧಿಕರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ನಿಧಿಯಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಾಳುಗಳಿಗೆ 50 ಸಾವಿರ ರೂಪಾಯಿಗಳ ಪರಿಹಾರ ನೀಡುವುದಾಗಿ ಶ್ರೀ ನರೇಂದ್ರ ಮೋದಿ ಘೋಷಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
“ಮಧ್ಯಪ್ರದೇಶದ ಧಾರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿ ಸಂಭವಿಸಿದ ಸುದ್ದಿ ಕೇಳಿ ತೀವ್ರ ನೋವುಂಟಾಗಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾನು ಹೃದಯಪೂರ್ವಕ ಸಂತಾಪ ಸೂಚಿಸುತ್ತೇನೆ ಮತ್ತು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
ಮೃತರ ಹತ್ತಿರದ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಮತ್ತು ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು: ಪ್ರಧಾನಮಂತ್ರಿ’’
*****
(ಪ್ರಕಟಣೆ ಐ.ಡಿ.: 2256858)
ವಿಸಿಟರ್ ಕೌಂಟರ್ : 9