ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ
azadi ka amrit mahotsav

ಅಲ್ಪಸಂಖ್ಯಾತ ಸಮುದಾಯಗಳಿಗೆ ಎಲ್ಲರನ್ನು ಒಳಗೊಳ್ಳುವ ಅಭಿವೃದ್ಧಿ ಮತ್ತು ಕಲ್ಯಾಣ ಯೋಜನೆಗಳ ಪರಿಣಾಮಕಾರಿ ಅನುಷ್ಠಾನವು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಮೊದಲ ಆದ್ಯತೆಯಾಗಿದೆ

ಪ್ರಕಟಣಾ ದಿನಾಂಕ: 30 APR 2026 1:39PM by PIB Bengaluru

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಡಾ. ಶ್ರೀವತ್ಸ ಕೃಷ್ಣ ಅವರು ಇಂದು ಪಿ.ಎಂ.ಜಿ.ವಿ.ಕೆ, ಪಿ.ಎಂ. ವಿಕಾಸ್, (PMJVK, PM VIKAS), ವಿದ್ಯಾರ್ಥಿವೇತನಗಳು, ಉಮೀದ್ (UMEED) ಮತ್ತು ಸಾಮಾಜಿಕ-ಆರ್ಥಿಕ ಸಬಲೀಕರಣ ಹಾಗು ಮೂಲಸೌಕರ್ಯ ಅಭಿವೃದ್ಧಿಯನ್ನು ಗುರಿಯಾಗಿರಿಸಿಕೊಂಡ ಸಚಿವಾಲಯದ ವಿವಿಧ ಪ್ರಮುಖ ಯೋಜನೆಗಳ ಅನುಷ್ಠಾನ ಮತ್ತು ಪ್ರಗತಿಯ ಕುರಿತು ಕರ್ನಾಟಕ ಸರ್ಕಾರದೊಂದಿಗೆ ಸಮಗ್ರ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ, ಕರ್ನಾಟಕ ಸರ್ಕಾರದ ಕಾರ್ಯದರ್ಶಿ ಡಾ. ಶಾಮ್ಲಾ ಇಕ್ಬಾಲ್ ಅವರು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಯೋಜನೆಗಳ ಅಡಿಯಲ್ಲಿ ರಾಜ್ಯ ಸರ್ಕಾರವು ಕೈಗೊಳ್ಳುತ್ತಿರುವ ಉಪಕ್ರಮಗಳ ವಿವರವಾದ ಅವಲೋಕನವನ್ನು ಮಂಡಿಸಿದರು. ಯೋಜನೆಯ ಅನುಷ್ಠಾನವನ್ನು ವೇಗಗೊಳಿಸುವುದು, ಜನರ ಸಂಪರ್ಕವನ್ನು ಸುಧಾರಿಸುವುದು ಮತ್ತು ಯೋಜನೆಗಳ ಪ್ರಯೋಜನಗಳು ಸಕಾಲಿಕ ಮತ್ತು ಪಾರದರ್ಶಕ ರೀತಿಯಲ್ಲಿ ತಳಮಟ್ಟವನ್ನು ತಲುಪುವುದನ್ನು ಖಚಿತಪಡಿಸಿಕೊಳ್ಳುವ ಬಗ್ಗೆ ಚರ್ಚೆಗಳು ನಡೆದವು.

ಡಾ. ಶ್ರೀವತ್ಸ ಕೃಷ್ಣ ಅವರು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಚಾಲ್ತಿಯಲ್ಲಿರುವ  ಯೋಜನೆಗಳನ್ನು ತ್ವರಿತಗೊಳಿಸುವಂತೆ ನಿರ್ದೇಶನ ನೀಡಿದರು ಮತ್ತು ಸಚಿವಾಲಯದ ವಿವಿಧ ಯೋಜನೆಗಳ ಅಡಿಯಲ್ಲಿ ಹೊಸ ಯೋಜನೆಗಳಿಗೆ ನವೀನ ಮತ್ತು ಪರಿಣಾಮಕಾರಿ ಪ್ರಸ್ತಾವನೆಗಳೊಂದಿಗೆ ಮುಂದೆ ಬರಲು ರಾಜ್ಯ ಸರ್ಕಾರವನ್ನು ಪ್ರೋತ್ಸಾಹಿಸಿದರು. ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಮೂಲಸೌಕರ್ಯ ಮತ್ತು ಕಲ್ಯಾಣ ಉಪಕ್ರಮಗಳ ಮೂಲಕ ಸಮಗ್ರ ಬೆಳವಣಿಗೆಯನ್ನು ಸಾಧಿಸಲು ಮತ್ತು ಅಲ್ಪಸಂಖ್ಯಾತ ಸಮುದಾಯಗಳನ್ನು ಸಬಲೀಕರಣಗೊಳಿಸಲು ಕೇಂದ್ರ ಮತ್ತು ರಾಜ್ಯದ ನಡುವಿನ ಸಮನ್ವಯದ ಮಹತ್ವವನ್ನು ಅವರು ಒತ್ತಿ ಹೇಳಿದರು.

ಜಂಟಿ ಕಾರ್ಯದರ್ಶಿ ಶ್ರೀ ರಾಮ್ ಸಿಂಗ್ ಮತ್ತು ಶ್ರೀ ಶ್ಯಾಮ ಪ್ರಸಾದ್ ರಾಯ್, ನಿರ್ದೇಶಕರಾದ ಶ್ರೀಮತಿ ನೇಹಾ ಗಿರಿ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಹಾಗು ಕರ್ನಾಟಕ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

 

*****


(ಪ್ರಕಟಣೆ ಐ.ಡಿ.: 2256913) ವಿಸಿಟರ್ ಕೌಂಟರ್ : 27
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Punjabi