ಪ್ರಧಾನ ಮಂತ್ರಿಯವರ ಕಛೇರಿ
ಮಧ್ಯಪ್ರದೇಶದ ಜಬಲ್ ಪುರದಲ್ಲಿ ದೋಣಿ ಮುಳುಗಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಪಿ.ಎಂ.ಎನ್.ಆರ್.ಎಫ್.ನಿಂದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ
प्रविष्टि तिथि:
01 MAY 2026 12:59PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಜಬಲ್ ಪುರದಲ್ಲಿ ದೋಣಿ ಮುಳುಗಿ ಸಂಭವಿಸಿದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಅವರು ಸಂತಾಪ ಸೂಚಿಸಿದರು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ಅವರು ಹೇಳಿದರು.
ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದರು.
ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ:
"ಮಧ್ಯಪ್ರದೇಶದ ಜಬಲ್ ಪುರದಲ್ಲಿ ದೋಣಿ ಮುಳುಗಿ ಸಂಭವಿಸಿದ ಜೀವಹಾನಿ ಅತ್ಯಂತ ನೋವಿನಿಂದ ಕೂಡಿದೆ. ಈ ದುರಂತ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ.
ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಮಂತ್ರಿ"
*****
(रिलीज़ आईडी: 2257329)
आगंतुक पटल : 70
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Tamil
,
Telugu
,
Malayalam