ಪ್ರಧಾನ ಮಂತ್ರಿಯವರ ಕಛೇರಿ
ದೆಹಲಿಯ ಶಹದಾರಾ ಜಿಲ್ಲೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಪಿ.ಎಂ.ಎನ್.ಆರ್.ಎಫ್.ನಿಂದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
03 MAY 2026 7:06PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ಶಹದಾರಾ ಜಿಲ್ಲೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಅವರು ಸಂತಾಪ ಸೂಚಿಸಿದರು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.
ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದರು.
ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ:
"ದೆಹಲಿಯ ಶಹದಾರಾ ಜಿಲ್ಲೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಜೀವಹಾನಿ ಅತ್ಯಂತ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ನೀಡಲಾಗುವುದು: ಪ್ರಧಾನಮಂತ್ರಿ"
*****
(ಪ್ರಕಟಣೆ ಐ.ಡಿ.: 2257760)
ವಿಸಿಟರ್ ಕೌಂಟರ್ : 7
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Telugu
,
Malayalam