ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನೆದರ್ಲ್ಯಾಂಡ್ಸ್ ಪ್ರಧಾನಮಂತ್ರಿ ಅವರೊಂದಿಗೆ ಮಾತುಕತೆ ನಡೆಸಿದ ಪ್ರಧಾನಮಂತ್ರಿ 

प्रविष्टि तिथि: 30 MAR 2026 9:34PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನೆದರ್ಲ್ಯಾಂಡ್ಸ್ ಪ್ರಧಾನಮಂತ್ರಿ ರಾಬ್ ಜೆಟ್ಟನ್ ಅವರೊಂದಿಗೆ ಮಾತನಾಡಿದರು. “ನಾವು ಭಾರತ-ನೆದರ್ಲ್ಯಾಂಡ್ಸ್ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದ್ದೇವೆ. ಸೆಮಿಕಂಡಕ್ಟರ್‌ಗಳು, ಬೃಹತ್ ಜಲ ಯೋಜನೆಗಳು, ಗ್ರೀನ್ ಹೈಡ್ರೋಜನ್ (ಹಸಿರು ಹೈಡ್ರೋಜನ್) ಮತ್ತು ಪ್ರತಿಭೆಗಳ ಸಂಚಲನದಂತಹ ಕ್ಷೇತ್ರಗಳಲ್ಲಿ ನಮ್ಮ ಪಾಲುದಾರಿಕೆಯ ಸಾಮರ್ಥ್ಯವನ್ನು ಉಲ್ಲೇಖಿಸಲಾಗಿದೆ” ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಆದಷ್ಟು ಬೇಗ ಮರುಸ್ಥಾಪಿಸುವ ಅಗತ್ಯವನ್ನು ಶ್ರೀ ಮೋದಿ ಅವರು ಪುನರುಚ್ಚರಿಸಿದರು.

ಶ್ರೀ ಮೋದಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“ಇಂದು ನೆದರ್ಲ್ಯಾಂಡ್ಸ್ ಪ್ರಧಾನಮಂತ್ರಿ ರಾಬ್ ಜೆಟ್ಟನ್ ಅವರೊಂದಿಗೆ ಮಾತನಾಡಿ ಸಂತಸವಾಯಿತು. ನಾವು ಭಾರತ-ನೆದರ್ಲ್ಯಾಂಡ್ಸ್ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದೆವು.

ಈ ಸಂದರ್ಭದಲ್ಲಿ ಸೆಮಿಕಂಡಕ್ಟರ್‌ಗಳು, ಬೃಹತ್ ಜಲ ಯೋಜನೆಗಳು, ಗ್ರೀನ್ ಹೈಡ್ರೋಜನ್ ಮತ್ತು ಪ್ರತಿಭೆಗಳ ಸಂಚಲನದಂತಹ ಕ್ಷೇತ್ರಗಳಲ್ಲಿ ನಮ್ಮ ಪಾಲುದಾರಿಕೆಯ ಸಾಮರ್ಥ್ಯದ ಕುರಿತು ಉಲ್ಲೇಖಿಸಲಾಯಿತು.

ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆಯೂ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು ಮತ್ತು ಆ ಪ್ರದೇಶದಲ್ಲಿ ಶಾಂತಿ ಹಾಗೂ ಸ್ಥಿರತೆಯನ್ನು ಶೀಘ್ರವಾಗಿ ಮರುಸ್ಥಾಪಿಸುವ ಅಗತ್ಯದ ಕುರಿತು ಮಾತನಾಡಲಾಯಿತು.”

@MinPres

 

*****


(रिलीज़ आईडी: 2257841) आगंतुक पटल : 25
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam