ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ
azadi ka amrit mahotsav

ಪಶ್ಚಿಮ ಏಷ್ಯಾದ ಇತ್ತೀಚಿನ ಬೆಳವಣಿಗೆಗಳ ಕುರಿತು ಅಂತರ-ಸಚಿವಾಲಯದ ಮಾಧ್ಯಮಗೋಷ್ಠಿ


ರಸಗೊಬ್ಬರ ಲಭ್ಯತೆಯು ಸುಸ್ಥಿರವಾಗಿದೆ; ಪೂರೈಕೆಯು ಅಗತ್ಯಕ್ಕಿಂತ ಹೆಚ್ಚಾಗಿಯೇ ಮುಂದುವರಿದಿದೆ

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಪರಿಸ್ಥಿತಿಯ ನಂತರ ಲಭ್ಯತೆಗಾಗಿ ಒಟ್ಟು ಸುಮಾರು 84 ಲಕ್ಷ ಮೆಟ್ರಿಕ್‌ ಟನ್‌ ರಸಗೊಬ್ಬರಗಳನ್ನು ಸೇರಿಸಲಾಗಿದೆ

ಎಲ್‌ ಪಿ ಜಿ ವಿತರಕರಲ್ಲಿ ಯಾವುದೇ ದಾಸ್ತಾನು ಕೊರತೆಯ ವರದಿಯಾಗಿಲ್ಲ; ನಿನ್ನೆ ಆನ್‌ಲೈನ್ ಎಲ್‌ ಪಿ ಜಿ ಸಿಲಿಂಡರ್ ಬುಕಿಂಗ್ ಶೇ. 99 ಕ್ಕೆ ಏರಿಕೆಯಾಗಿದೆ

ಏಪ್ರಿಲ್ 2026 ರ ತಿಂಗಳಿನಿಂದ ಇದುವರೆಗೆ 23.58 ಲಕ್ಷಕ್ಕೂ ಹೆಚ್ಚು - 5 ಕೆಜಿ ಎಫ್ ಟಿ ಎಲ್ ಸಿಲಿಂಡರ್ ಗಳು ಮಾರಾಟವಾಗಿವೆ

ಮಾರ್ಚ್ 2026 ರಿಂದ ಸುಮಾರು 6.12 ಲಕ್ಷ ಪಿ ಎನ್‌ ಜಿ ಸಂಪರ್ಕಗಳಿಗೆ ಅನಿಲ ಒದಗಿಸಲಾಗಿದೆ ಮತ್ತು ಹೆಚ್ಚುವರಿ 2.67 ಲಕ್ಷ ಸಂಪರ್ಕಗಳಿಗೆ ಮೂಲಸೌಕರ್ಯ ಸೃಷ್ಟಿಸಲಾಗಿದೆ, ಇದರೊಂದಿಗೆ ಸುಮಾರು 6.79 ಲಕ್ಷ ಗ್ರಾಹಕರು ಹೊಸ ಸಂಪರ್ಕಗಳಿಗಾಗಿ ನೋಂದಾಯಿಸಿಕೊಂಡಿದ್ದಾರೆ

ಪಶ್ಚಿಮ ಏಷ್ಯಾ ಪ್ರದೇಶದಲ್ಲಿರುವ ಎಲ್ಲಾ ಭಾರತೀಯ ನಾವಿಕರು ಸುರಕ್ಷಿತವಾಗಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ ಭಾರತೀಯ ಧ್ವಜ ಹೊತ್ತ ಹಡಗುಗಳಿಗೆ ಸಂಬಂಧಿಸಿದ ಯಾವುದೇ ಘಟನೆಗಳು ವರದಿಯಾಗಿಲ್ಲ

ಈ ಪ್ರದೇಶದಿಂದ ಭಾರತದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ವಿಮಾನಗಳು ಕಾರ್ಯನಿರ್ವಹಿಸುತ್ತಿರುವುದರಿಂದ ಒಟ್ಟಾರೆ ವಿಮಾನಯಾನ ಪರಿಸ್ತಿತಿ ಸುಧಾರಿಸುತ್ತಿದೆ

ಪ್ರಕಟಣಾ ದಿನಾಂಕ: 04 MAY 2026 6:33PM by PIB Bengaluru

ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆಗಳ ಬಗ್ಗೆ ಭಾರತ ಸರ್ಕಾರವು ನಿಯಮಿತ ನವೀಕರಣಗಳ ಮೂಲಕ ನಾಗರಿಕರಿಗೆ ಮಾಹಿತಿ ನೀಡುವ ಪ್ರಯತ್ನಗಳನ್ನು ಮುಂದುವರಿಸಿದೆ. ಈ ನಿಟ್ಟಿನಲ್ಲಿ, ಇಂದು ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಮಾಧ್ಯಮ ಗೋಷ್ಠಿಯನ್ನು ಆಯೋಜಿಸಲಾಗಿತ್ತು, ಅಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ಬಂದರುಗಳು, ಹಡಗು ಮತ್ತು ಜಲಮಾರ್ಗಗಳು ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯಗಳ ಅಧಿಕಾರಿಗಳು ಇಂಧನ ಲಭ್ಯತೆ, ಕಡಲ ಕಾರ್ಯಾಚರಣೆಗಳು, ಪ್ರದೇಶದಲ್ಲಿರುವ ಭಾರತೀಯ ಪ್ರಜೆಗಳಿಗೆ ನೆರವು ಮತ್ತು ಪ್ರಮುಖ ವಲಯಗಳಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯವು ರಸಗೊಬ್ಬರ ದಾಸ್ತಾನು ಸ್ಥಿತಿ ಮತ್ತು ಲಭ್ಯತೆಯ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿತು.

ರಸಗೊಬ್ಬರ ದಾಸ್ತಾನು ಸ್ಥಿತಿ ಮತ್ತು ಲಭ್ಯತೆ

ದೇಶದಲ್ಲಿ ರಸಗೊಬ್ಬರಗಳ ಒಟ್ಟಾರೆ ದಾಸ್ತಾನು ಸ್ಥಿತಿ (ಲಕ್ಷ ಮೆಟ್ರಿಕ್ ಟನ್ ಗಳಲ್ಲಿ):

ಉತ್ಪನ್ನ

ಇಂದಿನ ದಾಸ್ತಾನು

ಕಳೆದ ವರ್ಷ ಇದೇ ದಿನದ ದಾಸ್ತಾನು

ಯೂರಿಯಾ

74.48

74.03

ಡಿಎಪಿ

22.47

15.22

ಎನ್‌ಪಿಕೆಎಸ್

59.53

46.26

ಎಸ್‌ಎಸ್‌ಪಿ

26.71

26.63

ಎಂಒಪಿ

12.52

12.84

ಒಟ್ಟು

195.71

174.98

  • ಖಾರಿಫ್ 2026 ಕ್ಕಾಗಿ, ರಸಗೊಬ್ಬರ ಅಗತ್ಯವನ್ನು ಡಿಎ ಮತ್ತು ಎಫ್‌ ಡಬ್ಲ್ಯೂ ವತಿಯಿಂದ 390.54 ಲಕ್ಷ ಮೆಟ್ರಿಕ್ ಟನ್  ಎಂದು ಅಂದಾಜಿಸಲಾಗಿದೆ, ಇಂದಿನ ದಾಸ್ತಾನು ಸುಮಾರು 195.71 ಲಕ್ಷ ಮೆಟ್ರಿಕ್ ಟನ್  (ಶೇ. 50 ಕ್ಕಿಂತ ಹೆಚ್ಚು) ಆಗಿದ್ದು, ಇದು ಸಾಮಾನ್ಯ ಮಟ್ಟವಾದ ಸುಮಾರು ಶೇ. 33 ಕ್ಕಿಂತ ಗಣನೀಯವಾಗಿ ಹೆಚ್ಚಾಗಿದೆ. ಇದು ಸರ್ಕಾರದ ಸುಧಾರಿತ ಯೋಜನೆ, ಮುಂಗಡ ದಾಸ್ತಾನು ಮತ್ತು ಸಮರ್ಥ ಲಾಜಿಸ್ಟಿಕ್ಸ್ ನಿರ್ವಹಣೆಯನ್ನು ಪ್ರತಿಬಿಂಬಿಸುತ್ತದೆ.
  • ರಾಜ್ಯಗಳಲ್ಲಿ ಪೂರೈಕೆ ಸ್ಥಿತಿಯು ಬಲವಾಗಿ ಮುಂದುವರಿದಿದೆ. 2026ರ ಮೇ 1 ರಿಂದ ಮೇ 3 ರವರೆಗಿನ ಅವಧಿಗೆ, ಲಭ್ಯತೆಯು ಅಗತ್ಯಕ್ಕಿಂತ ಗಣನೀಯವಾಗಿ ಹೆಚ್ಚಿದೆ. ಯೂರಿಯಾ 2.66 ಲಕ್ಷ ಮೆಟ್ರಿಕ್ ಟನ್ ಅಗತ್ಯವಿದ್ದು, 62.28 ಲಕ್ಷ ಮೆಟ್ರಿಕ್ ಟನ್  ಲಭ್ಯತೆಯಿದೆ, ಡಿಎಪಿ 0.85 ಲಕ್ಷ ಮೆಟ್ರಿಕ್ ಟನ್  ಅಗತ್ಯವಿದ್ದು, 20.32 ಲಕ್ಷ ಮೆಟ್ರಿಕ್ ಟನ್  ಲಭ್ಯತೆಯಿದೆ, ಎಂಒಪಿ 0.22 ಲಕ್ಷ ಮೆಟ್ರಿಕ್ ಟನ್  ಅಗತ್ಯವಿದ್ದರೆ, 7.60 ಲಕ್ಷ ಮೆಟ್ರಿಕ್ ಟನ್  ಲಭ್ಯವಿದೆ, ಎನ್‌ ಪಿ ಕೆ 1.16 ಲಕ್ಷ ಮೆಟ್ರಿಕ್ ಟನ್  ಅಗತ್ಯವಿದ್ದು, 49.71 ಲಕ್ಷ ಮೆಟ್ರಿಕ್ ಟನ್  ಲಭ್ಯತೆಯಿದೆ ಮತ್ತು ಎಸ್‌ ಎಸ್‌ ಪಿ 0.55 ಲಕ್ಷ ಮೆಟ್ರಿಕ್ ಟನ್  ಅಗತ್ಯವಿದ್ದು, 24.60 ಲಕ್ಷ ಮೆಟ್ರಿಕ್ ಟನ್  ಲಭ್ಯವಿದೆ. ಇದು ಪ್ರಸ್ತುತ ಖಾರಿಫ್ ಹಂಗಾಮಿಗೆ ಬಲವಾದ ಆರಂಭಿಕ ಸ್ಥಿತಿಯನ್ನು ಸ್ಪಷ್ಟವಾಗಿ ಸೂಚಿಸುತ್ತದೆ.

ಪ್ರಮುಖ ರಸಗೊಬ್ಬರಗಳ ಎಂ ಆರ್ಪಿಪ್ರಮುಖ ರಸಗೊಬ್ಬರಗಳ ಎಂ ಆರ್ಪಿ ಯಲ್ಲಿ ಯಾವುದೇ ಬದಲಾವಣೆಯಿಲ್ಲ:

ಉತ್ಪನ್ನ

ಬೆಲೆ (ಪ್ರತಿ ಚೀಲಕ್ಕೆ ರೂ.)

ಯೂರಿಯಾ

266.5

ಡಿಎಪಿ

1350

ಟಿ ಎಸ್‌ ಪಿ

1300

ಬಿಕ್ಕಟ್ಟಿನ ನಂತರ ರಸಗೊಬ್ಬರಗಳ ದೇಶೀಯ ಉತ್ಪಾದನೆ ಮತ್ತು ಆಮದು:

ಉತ್ಪನ್ನ

ಬಿಕ್ಕಟ್ಟಿನ ನಂತರದ ದೇಶೀಯ ಉತ್ಪಾದನೆ

ಬಿಕ್ಕಟ್ಟಿನ ನಂತರ ಭಾರತೀಯ ಬಂದರು ತಲುಪಿದ ಆಮದು

ಯೂರಿಯಾ

40.72

9.98

ಡಿಎಪಿ

5.39

0.76

ಎನ್‌ ಪಿ ಕೆ ಎಸ್

13.65

3.54

ಎಸ್‌ ಎಸ್‌ ಪಿ

7.95

0

ಎಂಒಪಿ

0

2.41

ಒಟ್ಟು

67.71

16.69

  • ಬಿಕ್ಕಟ್ಟಿನ ಪರಿಸ್ಥಿತಿಯ ನಂತರ ಒಟ್ಟು ಸುಮಾರು 84 ಲಕ್ಷ ಮೆಟ್ರಿಕ್ ಟನ್  ರಸಗೊಬ್ಬರಗಳನ್ನು ಲಭ್ಯತೆಗೆ ಸೇರಿಸಲಾಗಿದೆ.
  • ಪ್ರಸ್ತುತ ಏಪ್ರಿಲ್-26 ರಲ್ಲಿ, ಯೂರಿಯಾ ಉತ್ಪಾದನೆಯು ಸುಮಾರು 20.98 ಲಕ್ಷ ಮೆಟ್ರಿಕ್ ಟನ್  ತಲುಪಿದ್ದು, ಇದು ಏಪ್ರಿಲ್-25 ರ 21.89 ಲಕ್ಷ ಮೆಟ್ರಿಕ್ ಟನ್  ಗೆ ಸಮನಾಗಿದೆ.
  • ಜಾಗತಿಕ ಯೂರಿಯಾ ಟೆಂಡರ್ – ಫೆಬ್ರವರಿ ಅಂತ್ಯದಿಂದ ಇಂದಿನವರೆಗೆ ಭಾರತವು ಒಟ್ಟು 38.07 ಲಕ್ಷ ಮೆಟ್ರಿಕ್ ಟನ್ (13.07 RCF + 25 ಲಕ್ಷ ಮೆಟ್ರಿಕ್ ಟನ್  IPL) ಯೂರಿಯಾವನ್ನು ಪಡದುಕೊಂಡಿದೆ.
  • ಭಾರತವು ಸುಮಾರು 6 ಲಕ್ಷ ಮೆಟ್ರಿಕ್ ಟನ್  ಎನ್‌ ಪಿ ಕೆ ಎಸ್ ಅನ್ನು ಮೇ ಮತ್ತು ಜೂನ್‌ ನಲ್ಲಿ ಭಾರತೀಯ ಬಂದರುಗಳಿಗೆ ತಲುಪಲು ಈಗಾಗಲೇ ಕಾಯ್ದಿರಿಸಿದೆ.
  • ಡಿಎಪಿ, ಟಿ ಎಸ್ಪಿ ಮತ್ತು ಅಮೋನಿಯಂ ಸಲ್ಫೇಟ್ಗಾಗಿ ಜಾಗತಿಕ ಟೆಂಡರ್ – ಭಾರತೀಯ ರಸಗೊಬ್ಬರ ಕಂಪನಿಗಳು 12 ಲಕ್ಷ ಮೆಟ್ರಿಕ್ ಟನ್ ಡಿಎಪಿ ಮತ್ತು 4 ಲಕ್ಷ ಮೆಟ್ರಿಕ್ ಟನ್ ಟಿ ಎಸ್‌ ಪಿ ಮತ್ತು 3 ಲಕ್ಷ ಮೆಟ್ರಿಕ್ ಟನ್ ಅಮೋನಿಯಂ ಸಲ್ಫೇಟ್ ಖರೀದಿಗಾಗಿ ಶುಕ್ರವಾರ ಅಂದರೆ 24.04.2026 ರಂದು ಜಂಟಿ ಜಾಗತಿಕ ಟೆಂಡರ್ ಹೊರಡಿಸಿವೆ. ಇವು ಗರಿಷ್ಠ ಹಂಗಾಮಿನಲ್ಲಿ ಸಾಕಷ್ಟು ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತವೆ.
  • ಯೂರಿಯಾ ಮತ್ತು ಪಿ & ಕೆ ರಸಗೊಬ್ಬರಗಳ ಉತ್ಪಾದನೆಗೆ ಅಗತ್ಯವಾದ ಕಚ್ಚಾ ಸಾಮಗ್ರಿಗಳ ಲಭ್ಯತೆಯನ್ನು ರಸಗೊಬ್ಬರ ಇಲಾಖೆಯು ನಿಯಮಿತವಾಗಿ ಪರಿಶೀಲಿಸುತ್ತಿದೆ.
  • ರಸಗೊಬ್ಬರಗಳ ಸಾಕಷ್ಟು ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಇದುವರೆಗೆ 7 ಬಾರಿ ಇಜಿಒಎಸ್ ಸಭೆ ನಡೆದಿದೆ ಮತ್ತು ಲಭ್ಯತೆಯಲ್ಲಿ ಎದುರಾದ ಹೆಚ್ಚಿನ ಸವಾಲುಗಳನ್ನು ಇಜಿಒಎಸ್ ಪರಿಹರಿಸಿದೆ.
  • ಭಾರತದ ರಸಗೊಬ್ಬರ ಭದ್ರತೆಯು ಪ್ರಬಲವಾಗಿ, ಸ್ಥಿರವಾಗಿ ಮತ್ತು ಉತ್ತಮವಾಗಿ ನಿರ್ವಹಿಸಲ್ಪಟ್ಟಿದೆ, ಎಲ್ಲಾ ಪ್ರಮುಖ ರಸಗೊಬ್ಬರಗಳ ಲಭ್ಯತೆಯು ಅಗತ್ಯಕ್ಕಿಂತ ನಿರಂತರವಾಗಿ ಹೆಚ್ಚಿದೆ.

ಇಂಧನ ಪೂರೈಕೆ ಮತ್ತು ಲಭ್ಯತೆ

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಪ್ರಸ್ತುತ ಇಂಧನ ಪೂರೈಕೆ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದು, ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಎಲ್‌ ಪಿ ಜಿ ಯ ಅಬಾಧಿತ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ವಿವರಿಸಿದೆ:

ಸಾರ್ವಜನಿಕ ಸಲಹೆ ಮತ್ತು ನಾಗರಿಕರ ಜಾಗೃತಿ

  • ಪೆಟ್ರೋಲ್, ಡೀಸೆಲ್ ಮತ್ತು ಎಲ್‌ ಪಿ ಜಿ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿರುವುದರಿಂದ ನಾಗರಿಕರು ಪೆಟ್ರೋಲ್, ಡೀಸೆಲ್ ಮತ್ತು ಎಲ್‌ ಪಿ ಜಿ ಯನ್ನು ಗಾಬರಿಯಿಂದ ಖರೀದಿಸುವುದನ್ನು ತಪ್ಪಿಸಲು ಸಲಹೆ ನೀಡಲಾಗಿದೆ.
  • ವದಂತಿಗಳ ಬಗ್ಗೆ ಜಾಗರೂಕರಾಗಿರಿ ಮತ್ತು ಸರಿಯಾದ ಮಾಹಿತಿಗಾಗಿ ಅಧಿಕೃತ ಮೂಲಗಳನ್ನು ಅವಲಂಬಿಸಿ.
  • ಎಲ್‌ ಪಿ ಜಿ ಗ್ರಾಹಕರು ಡಿಜಿಟಲ್ ಬುಕಿಂಗ್ ಪ್ಲಾಟ್‌ಫಾರ್ಮ್‌ ಗಳನ್ನು ಬಳಸಲು ಮತ್ತು ವಿತರಕರನ್ನು ಭೇಟಿ ಮಾಡುವುದನ್ನು ತಪ್ಪಿಸಲು ವಿನಂತಿಸಲಾಗಿದೆ.
  • ನಾಗರಿಕರು ಪಿ ಎನ್‌ ಜಿ ಮತ್ತು ಎಲೆಕ್ಟ್ರಿಕ್ ಅಥವಾ ಇಂಡಕ್ಷನ್ ಕುಕ್‌ಟಾಪ್‌ ಗಳಂತಹ ಪರ್ಯಾಯ ಇಂಧನಗಳನ್ನು ಬಳಸಲು ಪ್ರೋತ್ಸಾಹಿಸಲಾಗುತ್ತಿದೆ.
  • ಪ್ರಸ್ತುತ ಪರಿಸ್ಥಿತಿಯಲ್ಲಿ ನಾಗರಿಕರು ತಮ್ಮ ದೈನಂದಿನ ಬಳಕೆಯಲ್ಲಿ ಇಂಧನ ಸಂರಕ್ಷಿಸಲು ಅಗತ್ಯ ಪ್ರಯತ್ನಗಳನ್ನು ಮಾಡಲು ವಿನಂತಿಸಲಾಗಿದೆ.

ಸರ್ಕಾರದ ಸನ್ನದ್ಧತೆ ಮತ್ತು ಪೂರೈಕೆ ನಿರ್ವಹಣಾ ಕ್ರಮಗಳು

  • ಚಾಲ್ತಿಯಲ್ಲಿರುವ ಭೌಗೋಳಿಕ ರಾಜಕೀಯ ಪರಿಸ್ಥಿತಿಯ ಹೊರತಾಗಿಯೂ, ಗೃಹಬಳಕೆ ಎಲ್‌ ಪಿ ಜಿ, ಗೃಹಬಳಕೆ ಪಿ ಎನ್‌ ಜಿ ಮತ್ತು ಸಿ ಎನ್‌ ಜಿ (ಸಾರಿಗೆ) ಗೆ ಶೇ. 100 ರಷ್ಟು ಪೂರೈಕೆಯನ್ನು ಸರ್ಕಾರ ಖಚಿತಪಡಿಸಿದೆ.
  • ವಾಣಿಜ್ಯ ಎಲ್‌ ಪಿ ಜಿಗಾಗಿ, ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಆದ್ಯತೆ ನೀಡಲಾಗಿದೆ. ಇದಲ್ಲದೆ ಫಾರ್ಮಾ, ಉಕ್ಕು, ಆಟೋಮೊಬೈಲ್, ಬೀಜ, ಕೃಷಿ ಇತ್ಯಾದಿಗಳಿಗೂ ಆದ್ಯತೆ ನೀಡಲಾಗಿದೆ. ಹೆಚ್ಚುವರಿಯಾಗಿ, ವಲಸೆ ಕಾರ್ಮಿಕರಿಗೆ 5 ಕೆಜಿ ಎಫ್ ಟಿ ಎಲ್ ಪೂರೈಕೆಯನ್ನು 2026ರ ಮಾರ್ಚ್ 2 ಮತ್ತು 3 ರ ಸರಾಸರಿ ದೈನಂದಿನ ಪೂರೈಕೆಯ ಆಧಾರದ ಮೇಲೆ ದ್ವಿಗುಣಗೊಳಿಸಲಾಗಿದೆ.
  • ಸರ್ಕಾರವು ಪೂರೈಕೆ ಮತ್ತು ಬೇಡಿಕೆ ಎರಡೂ ಕಡೆಗಳಲ್ಲಿ ಈಗಾಗಲೇ ಹಲವಾರು ತರ್ಕಬದ್ಧ ಕ್ರಮಗಳನ್ನು ಜಾರಿಗೆ ತಂದಿದೆ, ಇದರಲ್ಲಿ ರಿಫೈನರಿ ಉತ್ಪಾದನೆಯನ್ನು ಹೆಚ್ಚಿಸುವುದು, ಬುಕಿಂಗ್ ಅವಧಿಯನ್ನು ನಗರ ಪ್ರದೇಶಗಳಲ್ಲಿ 21 ರಿಂದ 25 ದಿನಗಳಿಗೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 45 ದಿನಗಳವರೆಗೆ ಹೆಚ್ಚಿಸುವುದು ಮತ್ತು ಪೂರೈಕೆಗಾಗಿ ಆದ್ಯತೆಯ ವಲಯಗಳನ್ನು ನಿರ್ಧರಿಸುವುದು ಸೇರಿದೆ.
  • ಎಲ್‌ ಪಿ ಜಿ ಬೇಡಿಕೆಯ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಸೀಮೆಎಣ್ಣೆ ಮತ್ತು ಕಲ್ಲಿದ್ದಲಿನಂತಹ ಪರ್ಯಾಯ ಇಂಧನಗಳನ್ನು ಲಭ್ಯವಾಗುವಂತೆ ಮಾಡಲಾಗಿದೆ.
  • ಸಣ್ಣ ಮತ್ತು ಮಧ್ಯಮ ಗ್ರಾಹಕರಿಗೆ ವಿತರಿಸಲು ರಾಜ್ಯಗಳಿಗೆ ಹೆಚ್ಚುವರಿ ಕಲ್ಲಿದ್ದಲನ್ನು ಪೂರೈಸುವಂತೆ ಕಲ್ಲಿದ್ದಲು ಸಚಿವಾಲಯವು ಕೋಲ್ ಇಂಡಿಯಾ ಮತ್ತು ಸಿಂಗರೇಣಿ ಕಾಲಿಯರೀಸ್‌ ಗೆ ನಿರ್ದೇಶನ ನೀಡಿದೆ.
  • ಗೃಹಬಳಕೆ ಮತ್ತು ವಾಣಿಜ್ಯ ಗ್ರಾಹಕರಿಗೆ ಹೊಸ ಪಿ ಎನ್‌ ಜಿ ಸಂಪರ್ಕಗಳನ್ನು ಸುಲಭಗೊಳಿಸಲು ರಾಜ್ಯಗಳಿಗೆ ಸಲಹೆ ನೀಡಲಾಗಿದೆ.

ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಸಂಯೋಜಿತ ಪ್ರಯತ್ನಗಳು ಮತ್ತು ಸಾಂಸ್ಥಿಕ ಕಾರ್ಯವಿಧಾನಗಳು

  • ಅಗತ್ಯ ಸರಕುಗಳ ಕಾಯ್ದೆ, 1955 ಮತ್ತು ಎಲ್‌ ಪಿ ಜಿ ನಿಯಂತ್ರಣ ಆದೇಶ, 2000 ರ ಅಡಿಯಲ್ಲಿ ಪೂರೈಕೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಂಗ್ರಹಣೆ ಹಾಗೂ ಕಾಳಸಂತೆಯ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ನೀಡಲಾಗಿದೆ.
  • ಪೆಟ್ರೋಲ್, ಡೀಸೆಲ್ ಮತ್ತು ಎಲ್‌ ಪಿ ಜಿ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವಲ್ಲಿ ಮತ್ತು ನಿಯಂತ್ರಿಸುವಲ್ಲಿ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳು ಪ್ರಾಥಮಿಕ ಪಾತ್ರ ವಹಿಸಬೇಕು. ಭಾರತ ಸರ್ಕಾರವು ಹಲವು ಪತ್ರಗಳು ಮತ್ತು ವೀಡಿಯೊ ಕಾನ್ಫರೆನ್ಸ್‌ ಗಳ ಮೂಲಕ ಇದನ್ನು ಪುನರುಚ್ಚರಿಸಿದೆ.
  • ಭಾರತ ಸರ್ಕಾರವು 27.03.2026 ಮತ್ತು 02.04.2026 ರ ಪತ್ರಗಳ ಮೂಲಕ ಸಾಕಷ್ಟು ಇಂಧನ ಲಭ್ಯತೆಯ ಬಗ್ಗೆ ನಾಗರಿಕರಿಗೆ ಭರವಸೆ ನೀಡಲು ಸಕ್ರಿಯ ಸಾರ್ವಜನಿಕ ಸಂವಹನದ ಅಗತ್ಯವನ್ನು ಒತ್ತಿಹೇಳಿದೆ. ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳೊಂದಿಗೆ ನಿಯಮಿತ ಪರಿಶೀಲನಾ ಸಭೆಗಳನ್ನು ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ, 02.04.2026 ರಂದು (ಪೆಟ್ರೋಲಿಯಂ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ) ಮತ್ತು 06.04.2026 ರಂದು (ಪೆಟ್ರೋಲಿಯಂ ಕಾರ್ಯದರ್ಶಿಗಳ ಜೊತೆಗೆ ವಾರ್ತಾ ಮತ್ತು ಪ್ರಸಾರ ಹಾಗೂ ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ) ಸಭೆಗಳನ್ನು ನಡೆಸಲಾಯಿತು, ಇದರಲ್ಲಿ ಈ ಕೆಳಗಿನವುಗಳಿಗೆ ಒತ್ತು ನೀಡಲಾಯಿತು:
    • ದೈನಂದಿನ ಪತ್ರಿಕಾಗೋಷ್ಠಿಗಳನ್ನು ನಡೆಸುವುದು ಮತ್ತು ನಿಯಮಿತ ಸಾರ್ವಜನಿಕ ಸಲಹೆಗಳನ್ನು ಹೊರಡಿಸುವುದು.
    • ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ/ತಪ್ಪು ಮಾಹಿತಿಯನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡುವುದು ಮತ್ತು ನಿಭಾಯಿಸುವುದು.
    • ಜಿಲ್ಲಾ ಆಡಳಿತದಿಂದ ದೈನಂದಿನ ಜಾರಿ ಕಾರ್ಯಾಚರಣೆಗಳನ್ನು ತೀವ್ರಗೊಳಿಸುವುದು ಮತ್ತು ತೈಲ ಕಂಪನಿಗಳ ಸಹಯೋಗದೊಂದಿಗೆ ದಾಳಿ ಮತ್ತು ತಪಾಸಣೆಗಳನ್ನು ಮುಂದುವರಿಸುವುದು.
    • ತಮ್ಮ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಒಳಗೆ ವಾಣಿಜ್ಯ ಎಲ್‌ ಪಿ ಜಿ ಹಂಚಿಕೆ ಆದೇಶಗಳನ್ನು ಹೊರಡಿಸುವುದು.
    • ರಾಜ್ಯಗಳಿಗೆ ಹಂಚಿಕೆಯಾದ ಹೆಚ್ಚುವರಿ ಸೀಮೆಎಣ್ಣೆ ಹಂಚಿಕೆ ಆದೇಶಗಳನ್ನು ಹೊರಡಿಸುವುದು.
    • ಪಿ ಎನ್‌ ಜಿ ಅಳವಡಿಕೆ ಮತ್ತು ಪರ್ಯಾಯ ಇಂಧನಗಳನ್ನು ಉತ್ತೇಜಿಸುವುದು.
    • ವಿಶೇಷವಾಗಿ ದೇಶೀಯ ಅಗತ್ಯಗಳಿಗಾಗಿ ಎಲ್‌ ಪಿ ಜಿ ಪೂರೈಕೆಗೆ ಆದ್ಯತೆ ನೀಡುವುದು ಮತ್ತು ಪೂರೈಕೆ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು 5 ಕೆಜಿ ಎಫ್ ಟಿ ಎಲ್ ಸಿಲಿಂಡರ್‌ ಗಳ ಉದ್ದೇಶಿತ ವಿತರಣೆಯನ್ನು ಅಳವಡಿಸಿಕೊಳ್ಳುವುದು.
  • ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಸಂಗ್ರಹಣೆ ಮತ್ತು ಕಾಳಸಂತೆಯನ್ನು ತಡೆಯಲು ನಿಯಂತ್ರಣ ಕೊಠಡಿಗಳು ಮತ್ತು ಜಿಲ್ಲಾ ಮೇಲ್ವಿಚಾರಣಾ ಸಮಿತಿಗಳನ್ನು ಸ್ಥಾಪಿಸಿವೆ.
  • ಅನೇಕ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿವೆ.

ಜಾರಿ ಮತ್ತು ಮೇಲ್ವಿಚಾರಣಾ ಕ್ರಮಗಳು

  • ಎಲ್‌ ಪಿ ಜಿ ಸಂಗ್ರಹಣೆ ಮತ್ತು ಕಾಳಸಂತೆಯನ್ನು ತಡೆಯಲು ದೇಶಾದ್ಯಂತ ಜಾರಿ ಕ್ರಮಗಳು ಮುಂದುವರಿದಿವೆ. ನಿನ್ನೆ ದೇಶಾದ್ಯಂತ 1570 ಕ್ಕೂ ಹೆಚ್ಚು ದಾಳಿಗಳನ್ನು ನಡೆಸಲಾಗಿದೆ.
  • ಸಾರ್ವಜನಿಕ ವಲಯದ ತೈಲ ಕಂಪನಿಗಳು ಆಕಸ್ಮಿಕ ತಪಾಸಣೆಗಳನ್ನು ಬಲಪಡಿಸಿವೆ ಮತ್ತು 349 ಎಲ್‌ ಪಿ ಜಿ ವಿತರಕರಿಗೆ ದಂಡ ವಿಧಿಸಿವೆ, ಹಾಗೂ ನಿನ್ನೆಯವರೆಗೆ 74 ಎಲ್‌ ಪಿ ಜಿ ವಿತರಕರನ್ನು ಅಮಾನತುಗೊಳಿಸಲಾಗಿದೆ.

ಎಲ್ಪಿ ಜಿ ಪೂರೈಕೆ

ಗೃಹಬಳಕೆ ಎಲ್ಪಿ ಜಿ ಪೂರೈಕೆ ಸ್ಥಿತಿ:

  • ಪ್ರಚಲಿತ ಭೌಗೋಳಿಕ ರಾಜಕೀಯ ಪರಿಸ್ಥಿತಿಯಿಂದ ಎಲ್‌ ಪಿ ಜಿ ಪೂರೈಕೆಗೆ ಧಕ್ಕೆಯುಂಟಾಗುತ್ತಲೇ ಇದೆ.
  • ಮನೆಗಳಿಗೆ ಎಲ್‌ ಪಿ ಜಿ ಪೂರೈಕೆಗೆ ಆದ್ಯತೆ ನೀಡಲಾಗಿದೆ.
  • ಎಲ್‌ ಪಿ ಜಿ ವಿತರಕರಲ್ಲಿ ಯಾವುದೇ ದಾಸ್ತಾನು ಕೊರತೆ ವರದಿಯಾಗಿಲ್ಲ.
  • ನಿನ್ನೆ ಆನ್‌ಲೈನ್ ಎಲ್‌ ಪಿ ಜಿ ಸಿಲಿಂಡರ್ ಬುಕಿಂಗ್ ಶೇ. 99 ಕ್ಕೆ ಏರಿಕೆಯಾಗಿದೆ.
  • ದುರುಪಯೋಗ ತಡೆಯಲು ಡೆಲಿವರಿ ಅಥೆಂಟಿಕೇಶನ್ ಕೋಡ್ (ಡಿಎಸಿ) ಆಧಾರಿತ ವಿತರಣೆಗಳು ಸುಮಾರು ಶೇ. 94 ಕ್ಕೆ ಏರಿಕೆಯಾಗಿವೆ. ಡಿಎಸಿ ಗ್ರಾಹಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಬರುತ್ತದೆ.
  • ಮನೆಗಳಿಗೆ ಎಲ್‌ ಪಿ ಜಿ ಸಿಲಿಂಡರ್‌ ಗಳ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ಎಲ್‌ ಪಿ ಜಿ ವಿತರಕರು ಭಾನುವಾರವೂ ಕಾರ್ಯನಿರ್ವಹಿಸಿದ್ದಾರೆ.

ವಾಣಿಜ್ಯ ಎಲ್ಪಿ ಜಿ ಪೂರೈಕೆ ಮತ್ತು ಹಂಚಿಕೆ ಕ್ರಮಗಳು:

  • ಒಟ್ಟು ವಾಣಿಜ್ಯ ಎಲ್‌ ಪಿ ಜಿ ಹಂಚಿಕೆಯನ್ನು ಬಿಕ್ಕಟ್ಟಿನ ಪೂರ್ವದ ಮಟ್ಟದ ಸುಮಾರು ಶೇ. 70 ಕ್ಕೆ ಹೆಚ್ಚಿಸಲಾಗಿದೆ, ಇದರಲ್ಲಿ ಶೇ. 10 ರಷ್ಟು ಸುಧಾರಣೆ-ಸಂಬಂಧಿತ ಹಂಚಿಕೆ ಸೇರಿದೆ.
  • ಭಾರತ ಸರ್ಕಾರವು 06.04.2026 ರ ಪತ್ರದ ಮೂಲಕ, ಪ್ರತಿ ರಾಜ್ಯದಲ್ಲಿ ವಲಸೆ ಕಾರ್ಮಿಕರಿಗೆ ವಿತರಿಸಲು ಲಭ್ಯವಿರುವ 5 ಕೆಜಿ ಎಫ್ ಟಿ ಎಲ್ ಸಿಲಿಂಡರ್‌ ಗಳ ದೈನಂದಿನ ಪ್ರಮಾಣವನ್ನು 2-3 ಮಾರ್ಚ್ 2026 ರ ಸರಾಸರಿ ಪೂರೈಕೆಯ ಆಧಾರದ ಮೇಲೆ ದ್ವಿಗುಣಗೊಳಿಸಿದೆ. ಈ 5 ಕೆಜಿ ಎಫ್ ಟಿ ಎಲ್ ಸಿಲಿಂಡರ್ ಗಳು ತೈಲ ಕಂಪನಿಗಳ ಸಹಾಯದೊಂದಿಗೆ ಕೇವಲ ವಲಸೆ ಕಾರ್ಮಿಕರಿಗೆ ಪೂರೈಸಲು ರಾಜ್ಯ ಸರ್ಕಾರಗಳ ವಿಲೇವಾರಿಯಲ್ಲಿವೆ.
  • ಏಪ್ರಿಲ್ 2026 ರ ತಿಂಗಳಿನಿಂದ ಇದುವರೆಗೆ 23.58 ಲಕ್ಷಕ್ಕೂ ಹೆಚ್ಚು - 5 ಕೆಜಿ ಎಫ್ ಟಿ ಎಲ್ ಸಿಲಿಂಡರ್ ಗಳು ಮಾರಾಟವಾಗಿವೆ.
  • 3 ಏಪ್ರಿಲ್ 2026 ರಿಂದ, ಪಿ ಎಸ್‌ ಯು ಒಎಂಸಿಗಳು ಸುಮಾರು 10,170 ಜಾಗೃತಿ ಶಿಬಿರಗಳನ್ನು ಆಯೋಜಿಸಿದ್ದು, ಅಲ್ಲಿ ಸುಮಾರು 1,76,500 - 5 ಕೆಜಿ ಎಫ್ ಟಿ ಎಲ್ ಸಿಲಿಂಡರ್ ಗಳು ಮಾರಾಟವಾಗಿವೆ.
  • ಐಒಸಿಎಲ್, ಎಚ್‌ ಪಿ ಸಿ ಎಲ್ ಮತ್ತು ಬಿ ಪಿ ಸಿ ಎಲ್‌ ನ ಕಾರ್ಯನಿರ್ವಾಹಕ ನಿರ್ದೇಶಕರ ಮೂವರು ಸದಸ್ಯರ ಸಮಿತಿಯು ರಾಜ್ಯ ಅಧಿಕಾರಿಗಳು ಮತ್ತು ಉದ್ಯಮ ಸಂಸ್ಥೆಗಳೊಂದಿಗೆ ಸಮಾಲೋಚಿಸಿ ರಾಜ್ಯಗಳಲ್ಲಿ ವಾಣಿಜ್ಯ ಎಲ್‌ ಪಿ ಜಿ ಮಾರಾಟದ ಯೋಜನೆಯನ್ನು ಅಂತಿಮಗೊಳಿಸುತ್ತದೆ.
  • ಏಪ್ರಿಲ್ 2026 ರ ತಿಂಗಳಿನಿಂದ ಒಟ್ಟು 2,15,332 ಮೆಟ್ರಿಕ್ ಟನ್ (113.33 ಲಕ್ಷಕ್ಕೂ ಹೆಚ್ಚು 19 ಕೆಜಿ ಎಲ್‌ ಪಿ ಜಿ ಸಿಲಿಂಡರ್‌ ಗಳಿಗೆ ಸಮಾನ) ವಾಣಿಜ್ಯ ಎಲ್‌ ಪಿ ಜಿ ಮಾರಾಟವಾಗಿದೆ.
  • ಏಪ್ರಿಲ್ 2026 ರ ತಿಂಗಳಿನಿಂದ ಒಟ್ಟು 11,106 ಮೆಟ್ರಿಕ್ ಟನ್ ಆಟೋ ಎಲ್‌ ಪಿ ಜಿಯನ್ನು ಪಿ ಎಸ್‌ ಯು ಒಎಂಸಿಗಳು ಮಾರಾಟ ಮಾಡಿವೆ.

ನೈಸರ್ಗಿಕ ಅನಿಲ ಪೂರೈಕೆ ಮತ್ತು ಪಿ ಎನ್ಜಿ ವಿಸ್ತರಣಾ ಉಪಕ್ರಮಗಳು

  • ಡಿ-ಪಿ ಎನ್‌ ಜಿ ಮತ್ತು ಸಿ ಎನ್‌ ಜಿ-ಸಾರಿಗೆಯ ಗ್ರಾಹಕರಿಗೆ ಆದ್ಯತೆ ನೀಡಲಾಗಿದ್ದು, ಶೇ. 100 ರಷ್ಟು ಪೂರೈಕೆ ಮಾಡಲಾಗುತ್ತಿದೆ.
  • ರಸಗೊಬ್ಬರ ಘಟಕಗಳಿಗೆ ಒಟ್ಟಾರೆ ಅನಿಲ ಹಂಚಿಕೆಯನ್ನು ಅವುಗಳ ಆರು ತಿಂಗಳ ಸರಾಸರಿ ಬಳಕೆಯ ಸುಮಾರು ಶೇ. 98 ರಷ್ಟು ಹೆಚ್ಚಿಸಲಾಗಿದೆ.
  • ಹೆಚ್ಚುವರಿಯಾಗಿ, ಸಿಜಿಡಿ ನೆಟ್‌ವರ್ಕ್‌ ಗಳ ಮೂಲಕ ಪೂರೈಕೆ ಸೇರಿದಂತೆ ಇತರ ಕೈಗಾರಿಕಾ ಮತ್ತು ವಾಣಿಜ್ಯ ವಲಯಗಳಿಗೆ ಅನಿಲ ಪೂರೈಕೆಯನ್ನು ಶೇ. 80 ರವರೆಗೆ ಹೆಚ್ಚಿಸಲಾಗಿದೆ.
  • ವಾಣಿಜ್ಯ ಎಲ್‌ ಪಿ ಜಿ ಲಭ್ಯತೆಯ ಬಗೆಗಿನ ಕಾಳಜಿಗಳನ್ನು ಹೋಗಲಾಡಿಸಲು ಹೋಟೆಲ್‌ ಗಳು, ರೆಸ್ಟೋರೆಂಟ್‌ ಗಳು ಮತ್ತು ಕ್ಯಾಂಟೀನ್‌ ಗಳಂತಹ ವಾಣಿಜ್ಯ ಸಂಸ್ಥೆಗಳಿಗೆ ಪಿ ಎನ್‌ ಜಿ ಸಂಪರ್ಕಗಳನ್ನು ಆದ್ಯತೆಯ ಮೇಲೆ ನೀಡಲು ಸಿಜಿಡಿ ಸಂಸ್ಥೆಗಳಿಗೆ ಸೂಚಿಸಲಾಗಿದೆ.
  • ಐಜಿಎಲ್‌, ಎಂಜಿಎಲ್‌, ಗೇಲ್‌ ಗ್ಯಾಸ್‌ ಮತ್ತು ಬಿಪಿಸಿಎಲ್‌ ಸೇರಿದಂತೆ ಸಿಜಿಡಿ ಕಂಪನಿಗಳು ಗೃಹಬಳಕೆ ಮತ್ತು ವಾಣಿಜ್ಯ ಪಿ ಎನ್‌ ಜಿ ಸಂಪರ್ಕಗಳಿಗೆ ಪ್ರೋತ್ಸಾಹಕಗಳನ್ನು ನೀಡುತ್ತಿವೆ.
  • ಸಿಜಿಡಿ ನೆಟ್‌ವರ್ಕ್‌ ಗಳ ವಿಸ್ತರಣೆಗೆ ಅಗತ್ಯವಿರುವ ಅನುಮೋದನೆಗಳನ್ನು ತ್ವರಿತಗೊಳಿಸಲು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಸಚಿವಾಲಯಗಳಿಗೆ ವಿನಂತಿಸಲಾಗಿದೆ.
  • ಭಾರತ ಸರ್ಕಾರವು 18.03.2026 ರ ಪತ್ರದ ಮೂಲಕ ರಾಜ್ಯಗಳು ಎಲ್‌ ಪಿ ಜಿ ಯಿಂದ ಪಿ ಎನ್‌ ಜಿ ಗೆ ದೀರ್ಘಕಾಲೀನ ಪರಿವರ್ತನೆಗೆ ಸಹಾಯ ಮಾಡಿದರೆ ವಾಣಿಜ್ಯ ಎಲ್‌ ಪಿ ಜಿ ಯ ಹೆಚ್ಚುವರಿ ಶೇ. 10 ರಷ್ಟು ಹಂಚಿಕೆಯನ್ನು ನೀಡುವುದಾಗಿ ತಿಳಿಸಿದೆ.
  • 22 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಪಿ ಎನ್‌ ಜಿ ವಿಸ್ತರಣಾ ಸುಧಾರಣೆಗಳಿಗೆ ಸಂಬಂಧಿಸಿದ ಹೆಚ್ಚುವರಿ ವಾಣಿಜ್ಯ ಎಲ್‌ ಪಿ ಜಿ ಹಂಚಿಕೆಯನ್ನು ಪಡೆಯುತ್ತಿವೆ.
  • ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು 24.03.2026 ರ ಪತ್ರದ ಮೂಲಕ ಸಿಜಿಡಿ ಮೂಲಸೌಕರ್ಯಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಆದ್ಯತೆಯ ಮೇಲೆ ಪ್ರಕ್ರಿಯೆಗೊಳಿಸಲು 3 ತಿಂಗಳ ವಿಶೇಷ ಅವಧಿಗೆ 'ಕಡಿಮೆ ಸಮಯದೊಂದಿಗೆ ಸಿಜಿಡಿ ಮೂಲಸೌಕರ್ಯಕ್ಕಾಗಿ ತ್ವರಿತ ಅನುಮೋದನೆ ಚೌಕಟ್ಟನ್ನು' ಅಳವಡಿಸಿಕೊಂಡಿದೆ.
  • ಭಾರತ ಸರ್ಕಾರವು 24.03.2026 ರ ಗೆಜೆಟ್ ಮೂಲಕ ಅಗತ್ಯ ಸರಕುಗಳ ಕಾಯ್ದೆ, 1955 ರ ಅಡಿಯಲ್ಲಿ 'ನೈಸರ್ಗಿಕ ಅನಿಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ವಿತರಣೆ (ಪೈಪ್‌ಲೈನ್‌ ಗಳ ಹಾಕುವುದು, ನಿರ್ಮಾಣ, ಕಾರ್ಯಾಚರಣೆ ಮತ್ತು ವಿಸ್ತರಣೆ ಮತ್ತು ಇತರ ಸೌಲಭ್ಯಗಳ ಮೂಲಕ) ಆದೇಶ, 2026' ಅನ್ನು ಹೊರಡಿಸಿದೆ. ಈ ಆದೇಶವು ದೇಶಾದ್ಯಂತ ಪೈಪ್‌ಲೈನ್‌ ಗಳನ್ನು ಹಾಕಲು ಮತ್ತು ವಿಸ್ತರಿಸಲು ಸುವ್ಯವಸ್ಥಿತ ಮತ್ತು ಸಮಯಬದ್ಧ ಚೌಕಟ್ಟನ್ನು ಒದಗಿಸುತ್ತದೆ, ಅನುಮೋದನೆಗಳು ಮತ್ತು ಭೂಮಿ ಲಭ್ಯತೆಯಲ್ಲಿನ ವಿಳಂಬಗಳನ್ನು ನಿವಾರಿಸುತ್ತದೆ ಮತ್ತು ವಸತಿ ಪ್ರದೇಶಗಳು ಸೇರಿದಂತೆ ನೈಸರ್ಗಿಕ ಅನಿಲ ಮೂಲಸೌಕರ್ಯದ ವೇಗದ ಅಭಿವೃದ್ಧಿಯನ್ನು ಸಾಧ್ಯವಾಗಿಸುತ್ತದೆ. ಇದು ಪಿ ಎನ್‌ ಜಿ ನೆಟ್‌ವರ್ಕ್ ಬೆಳವಣಿಗೆಯನ್ನು ವೇಗಗೊಳಿಸಲು, ಕೊನೆಯ ಹಂತದ ಸಂಪರ್ಕವನ್ನು ಹೆಚ್ಚಿಸಲು ಮತ್ತು ಸ್ವಚ್ಛ ಇಂಧನಗಳತ್ತ ಪರಿವರ್ತನೆಯನ್ನು ಬೆಂಬಲಿಸಲು ನಿರೀಕ್ಷಿಸಲಾಗಿದೆ.
  • ಪಿ ಎನ್‌ ಜಿ ಆರ್‌ ಬಿ ಸಂಸ್ಥೆಯು ಡಿ-ಪಿ ಎನ್‌ ಜಿ ಸಂಪರ್ಕಗಳನ್ನು ತ್ವರಿತಗೊಳಿಸಲು ಸಿಜಿಡಿ ಘಟಕಗಳಿಗೆ ನಿರ್ದೇಶನ ನೀಡಿದೆ. ಅಲ್ಲದೆ, ಪಿ ಎನ್‌ ಜಿ ವಿಸ್ತರಣೆಯಲ್ಲಿ ವೇಗವನ್ನು ಕಾಪಾಡಿಕೊಳ್ಳಲು 'ರಾಷ್ಟ್ರೀಯ ಪಿ ಎನ್‌ ಜಿ ಅಭಿಯಾನ 2.0' ಅನ್ನು 30.06.2026 ರವರೆಗೆ ವಿಸ್ತರಿಸಲಾಗಿದೆ.
  • ಸ್ವಚ್ಛ, ಹೆಚ್ಚು ಸುರಕ್ಷಿತ ಮತ್ತು ಸ್ವಾವಲಂಬಿ ಇಂಧನ ಭವಿಷ್ಯವನ್ನು ಪ್ರೋತ್ಸಾಹಿಸಲು ಭಾರತ ಸರ್ಕಾರವು ಮಾದರಿ ಕರಡು ರಾಜ್ಯ ಸಿಬಿಜಿ ನೀತಿಯನ್ನು ಸಿದ್ಧಪಡಿಸಿದೆ. ಈ ಮಾದರಿ ನೀತಿಯು ಸಿಬಿಜಿ ಅಭಿವೃದ್ಧಿಗಾಗಿ ರಾಜ್ಯಗಳು ತಮ್ಮದೇ ಆದ ಹೂಡಿಕೆದಾರ ಸ್ನೇಹಿ ವ್ಯವಸ್ಥೆಯನ್ನು ರಚಿಸಲು ಸಮಗ್ರ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸುತ್ತದೆ. ಇದನ್ನು ಅಳವಡಿಸಿಕೊಳ್ಳುವ ರಾಜ್ಯಗಳಿಗೆ ವಾಣಿಜ್ಯ ಎಲ್‌ ಪಿ ಜಿ ಯ ಮುಂದಿನ ಹಂತದ ಹಂಚಿಕೆಯಲ್ಲಿ ಆದ್ಯತೆ ನೀಡಲಾಗುವುದು.
  • ಪರಿಸರ ಸಚಿವಾಲಯವು 07.04.2026 ರ ಆದೇಶದ ಮೂಲಕ ಸಿಜಿಡಿ ಮೂಲಸೌಕರ್ಯಕ್ಕಾಗಿ 15 ದಿನಗಳೊಳಗೆ ಸ್ಥಾಪನೆಗೆ ಒಪ್ಪಿಗೆ ಅಥವಾ ಕಾರ್ಯಾಚರಣೆಗೆ ಒಪ್ಪಿಗೆ ನೀಡಲು ಸಿಪಿಸಿಬಿ ಗೆ ಸೂಚಿಸಿದೆ.
  • ಮಾರ್ಚ್ 2026 ರಿಂದ ಸುಮಾರು 6.12 ಲಕ್ಷ ಪಿ ಎನ್‌ ಜಿ ಸಂಪರ್ಕಗಳಿಗೆ ಅನಿಲ ಒದಗಿಸಲಾಗಿದೆ ಮತ್ತು 2.67 ಲಕ್ಷ ಹೆಚ್ಚುವರಿ ಸಂಪರ್ಕಗಳಿಗೆ ಮೂಲಸೌಕರ್ಯ ಸೃಷ್ಟಿಸಲಾಗಿದೆ, ಒಟ್ಟು 8.79 ಲಕ್ಷ ಸಂಪರ್ಕಗಳನ್ನು ತಲುಪಿದೆ. ಇದಲ್ಲದೆ ಸುಮಾರು 6.79 ಲಕ್ಷ ಗ್ರಾಹಕರು ಹೊಸ ಸಂಪರ್ಕಗಳಿಗಾಗಿ ನೋಂದಾಯಿಸಿಕೊಂಡಿದ್ದಾರೆ.
  • 03.05.2026 ರವರೆಗೆ 43,760 ಕ್ಕೂ ಹೆಚ್ಚು ಪಿ ಎನ್‌ ಜಿ ಗ್ರಾಹಕರು MYPNGD.in ವೆಬ್‌ಸೈಟ್ ಮೂಲಕ ತಮ್ಮ ಎಲ್‌ ಪಿ ಜಿ ಸಂಪರ್ಕಗಳನ್ನು ಬಿಟ್ಟುಕೊಟ್ಟಿದ್ದಾರೆ.

ಕಚ್ಚಾ ತೈಲ ಸ್ಥಿತಿ ಮತ್ತು ರಿಫೈನರಿ ಕಾರ್ಯಾಚರಣೆಗಳು

  • ಎಲ್ಲಾ ರಿಫೈನರಿಗಳು ಸಾಕಷ್ಟು ಕಚ್ಚಾ ತೈಲ ದಾಸ್ತಾನುಗಳೊಂದಿಗೆ ಹೆಚ್ಚಿನ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ, ಅದೇ ಸಮಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ ನ ಸಾಕಷ್ಟು ದಾಸ್ತಾನುಗಳನ್ನು ನಿರ್ವಹಿಸಲಾಗುತ್ತಿದೆ.
  • ಮನೆಬಳಕೆಯನ್ನು ಬೆಂಬಲಿಸಲು ರಿಫೈನರಿಗಳಿಂದ ಗೃಹಬಳಕೆ ಎಲ್‌ ಪಿ ಜಿ ಉತ್ಪಾದನೆಯನ್ನು ಹೆಚ್ಚಿಸಲಾಗಿದೆ.
  • ದೇಶೀಯ ಮಾರುಕಟ್ಟೆಗೆ ಪೆಟ್ರೋಕೆಮಿಕಲ್ ಫೀಡ್‌ಸ್ಟಾಕ್ ಪೂರೈಕೆಯ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಅಂತರ-ಸಚಿವಾಲಯ ಜಂಟಿ ಕಾರ್ಯ ಗುಂಪು ಅನ್ನು ಸ್ಥಾಪಿಸಲಾಗಿದೆ. ತರುವಾಯ, ಭಾರತ ಸರ್ಕಾರವು 01.04.2026 ರ ಆದೇಶದ ಮೂಲಕ ಪೆಟ್ರೋಕೆಮಿಕಲ್ ಕಾಂಪ್ಲೆಕ್ಸ್‌ ಗಳು ಸೇರಿದಂತೆ ತೈಲ ಸಂಸ್ಕರಣಾಗಾರ ಕಂಪನಿಗಳು ಉನ್ನತ ತಂತ್ರಜ್ಞಾನ ಕೇಂದ್ರ ನಿರ್ಧರಿಸಿದಂತೆ ನಿರ್ಣಾಯಕ ವಲಯಗಳಿಗೆ ಕೆಲವು ಕನಿಷ್ಠ ಪ್ರಮಾಣದ ಸಿ3 ಮತ್ತು ಸಿ4 ಸ್ಟ್ರೀಮ್‌ ಗಳನ್ನು ಲಭ್ಯವಾಗುವಂತೆ ಮಾಡಲು ಅನುಮತಿ ನೀಡಿದೆ.
  • ಔಷಧೀಯ ಇಲಾಖೆ, ರಾಸಾಯನಿಕಗಳು ಮತ್ತು ಪೆಟ್ರೋಕೆಮಿಕಲ್ಸ್ ಇಲಾಖೆ, ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆಯಿಂದ ಸ್ವೀಕರಿಸಿದ ವಿನಂತಿಗಳ ಆಧಾರದ ಮೇಲೆ, ಎಲ್‌ ಪಿ ಜಿ ಪೂಲ್‌ ನಿಂದ ದಿನಕ್ಕೆ 1000 ಮೆಟ್ರಿಕ್‌ ಟನ್‌ ಗೆ ಔಷಧ ಮತ್ತು ರಾಸಾಯನಿಕ ವಲಯದ ಕಂಪನಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
  • ಏಪ್ರಿಲ್ 9, 2026 ರಿಂದ, ಮುಂಬೈ, ಕೊಚ್ಚಿ, ವೈಜಾಗ್, ಚೆನ್ನೈ, ಮಥುರಾ ಮತ್ತು ಗುಜರಾತ್ ಸಂಸ್ಕರಣಾಗಾರಗಳು 10,750 ಮೆಟ್ರಿಕ್ ಟನ್ ಗಿಂತ ಹೆಚ್ಚು ಪ್ರೊಪಿಲೀನ್ ಮತ್ತು 1670 ಮೆಟ್ರಿಕ್ ಟನ್ ಗಿಂತ ಹೆಚ್ಚು ಬ್ಯುಟೈಲ್ ಅಕ್ರಿಲೇಟ್ ಅನ್ನು ರಾಸಾಯನಿಕ, ಔಷಧ ಮತ್ತು ಬಣ್ಣ ಉದ್ಯಮಕ್ಕೆ ಮಾರಾಟ ಮಾಡಿವೆ.

ಚಿಲ್ಲರೆ ಇಂಧನ ಲಭ್ಯತೆ ಮತ್ತು ಬೆಲೆ ಕ್ರಮಗಳು

  • ದೇಶಾದ್ಯಂತ ಎಲ್ಲಾ ಚಿಲ್ಲರೆ ಮಾರಾಟ ಮಳಿಗೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ.
  • ಪಶ್ಚಿಮ ಏಷ್ಯಾ ಬಿಕ್ಕಟ್ಟು ಕಚ್ಚಾ ತೈಲ ಬೆಲೆಗಳಲ್ಲಿ ಅಸಹಜ ಏರಿಕೆಗೆ ಕಾರಣವಾಗಿದೆ; ಆದರೂ ಗ್ರಾಹಕರನ್ನು ರಕ್ಷಿಸಲು ಭಾರತ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ₹10 ರಷ್ಟು ಇಳಿಸಿದೆ.
  • 30.04.2026 ರ ಗೆಜೆಟ್ ಅಧಿಸೂಚನೆಯಂತೆ ಡೀಸೆಲ್ ಮೇಲಿನ ರಫ್ತು ಸುಂಕವನ್ನು ಪ್ರತಿ ಲೀಟರ್‌ ಗೆ ₹55.50 ರಿಂದ ₹23 ಕ್ಕೆ ಮತ್ತು ಎಟಿಎಫ್ ಮೇಲಿನ ಸುಂಕವನ್ನು ₹42 ರಿಂದ ₹33 ಕ್ಕೆ ಇಳಿಸಲಾಗಿದೆ.
  • ದೇಶದ ಎಲ್ಲಾ ಪೆಟ್ರೋಲ್ ಪಂಪ್‌ ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ ನ ಸಾಕಷ್ಟು ದಾಸ್ತಾನು ಲಭ್ಯವಿದೆ. ಪೆಟ್ರೋಲ್ ಮತ್ತು ಡೀಸೆಲ್‌ ನ ನಿಯಮಿತ ಚಿಲ್ಲರೆ ಬೆಲೆಗಳಲ್ಲಿ ಯಾವುದೇ ಬದಲಾವಣೆಯಿಲ್ಲ ಮತ್ತು ಬೆಲೆ ಏರಿಕೆಯಾಗಿಲ್ಲ.

ಸೀಮೆಎಣ್ಣೆ ಲಭ್ಯತೆ ಮತ್ತು ವಿತರಣಾ ಕ್ರಮಗಳು

  • ನಿಯಮಿತ ಹಂಚಿಕೆಯ ಹೊರತಾಗಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ 48,000 ಕೆಎಲ್ ಸೀಮೆಎಣ್ಣೆಯನ್ನು ನೀಡಲಾಗಿದೆ.
  • 18 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಸೀಮೆಎಣ್ಣೆ ಹಂಚಿಕೆ ಆದೇಶಗಳನ್ನು ಹೊರಡಿಸಿವೆ, ಹಿಮಾಚಲ ಪ್ರದೇಶ ಮತ್ತು ಲಡಾಖ್ ಯಾವುದೇ ಅವಶ್ಯಕತೆಯಿಲ್ಲ ಎಂದು ತಿಳಿಸಿವೆ.

ಕಡಲ ಸುರಕ್ಷತೆ ಮತ್ತು ಹಡಗು ಕಾರ್ಯಾಚರಣೆಗಳು

ಬಂದರುಗಳು, ಹಡಗು ಮತ್ತು ಜಲಮಾರ್ಗ ಸಚಿವಾಲಯವು ಪರ್ಷಿಯನ್ ಕೊಲ್ಲಿಯಲ್ಲಿ ಚಾಲ್ತಿಯಲ್ಲಿರುವ ಕಡಲ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದು, ಭಾರತೀಯ ಹಡಗುಗಳು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದೆ:

  • ಕಡಲ ಕಾರ್ಯಾಚರಣೆಗಳನ್ನು ಖಚಿತಪಡಿಸಿಕೊಳ್ಳಲು ಸಚಿವಾಲಯವು ವಿದೇಶಾಂಗ ಸಚಿವಾಲಯ, ಭಾರತೀಯ ಮಿಷನ್‌ ಗಳು ಮತ್ತು ಪಾಲುದಾರರೊಂದಿಗೆ ಸಮನ್ವಯ ಸಾಧಿಸುತ್ತಿದೆ.
  • ಪ್ರದೇಶದಲ್ಲಿರುವ ಎಲ್ಲಾ ಭಾರತೀಯ ನಾವಿಕರು ಸುರಕ್ಷಿತವಾಗಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ.
  • ಹಡಗು ನಿರ್ದೇಶನಾಲಯ ನಿಯಂತ್ರಣ ಕೊಠಡಿಯು ಇದುವರೆಗೆ 8,414 ಕರೆಗಳು ಮತ್ತು 18,064 ಕ್ಕೂ ಹೆಚ್ಚು ಇಮೇಲ್‌ ಗಳನ್ನು ನಿರ್ವಹಿಸಿದೆ. ಕಳೆದ 24 ಗಂಟೆಗಳಲ್ಲಿ 41 ಕರೆಗಳು ಮತ್ತು 99 ಇಮೇಲ್‌ ಗಳು ಬಂದಿವೆ.
  • ಇದುವರೆಗೆ 2,976 ಭಾರತೀಯ ನಾವಿಕರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಅನುಕೂಲ ಮಾಡಿಕೊಡಲಾಗಿದೆ, ಇದರಲ್ಲಿ ಕಳೆದ 24 ಗಂಟೆಗಳಲ್ಲಿ 23 ಮಂದಿ ಸೇರಿದ್ದಾರೆ.
  • ಭಾರತದಾದ್ಯಂತ ಬಂದರು ಕಾರ್ಯಾಚರಣೆಗಳು ಸಹಜವಾಗಿದ್ದು, ಯಾವುದೇ ದಟ್ಟಣೆ ವರದಿಯಾಗಿಲ್ಲ.

ಈ ಪ್ರದೇಶದಲ್ಲಿ ಭಾರತೀಯ ಪ್ರಜೆಗಳ ಸುರಕ್ಷತೆ

ಗಲ್ಫ್ ಮತ್ತು ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಬೆಳವಣಿಗೆಗಳನ್ನು ವಿದೇಶಾಂಗ ಸಚಿವಾಲಯವು ಮೇಲ್ವಿಚಾರಣೆ ಮಾಡುತ್ತಿದೆ. ಈ ಪ್ರದೇಶದಲ್ಲಿ ಭಾರತೀಯ ಸಮುದಾಯದ ಸುರಕ್ಷತೆ, ಭದ್ರತೆ ಮತ್ತು ಕಲ್ಯಾಣವನ್ನು ಖಚಿತಪಡಿಸಿಕೊಳ್ಳಲು ಗಮನಹರಿಸುತ್ತಿದೆ:

  • ಮಾಹಿತಿ ಹಂಚಿಕೆ ಮತ್ತು ಪ್ರಯತ್ನಗಳ ಉತ್ತಮ ಸಮನ್ವಯಕ್ಕಾಗಿ ವಿದೇಶಾಂಗ ಸಚಿವಾಲಯವು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದೆ.
  • ಭಾರತೀಯ ರಾಯಭಾರ ಕಚೇರಿಗಳು ಮತ್ತು ದೂತಾವಾಸಗಳು ಸಕಾಲಿಕ ಸಹಾಯವನ್ನು ಒದಗಿಸಲು ದಿನದ 24 ಗಂಟೆಗಳ ಕಾಲ ಸಹಾಯವಾಣಿಗಳನ್ನು ಕಾರ್ಯನಿರ್ವಹಿಸುವುದನ್ನು ಮುಂದುವರೆಸಿವೆ ಮತ್ತು ನಮ್ಮ ನಾಗರಿಕರಿಗೆ ಪೂರ್ವಭಾವಿಯಾಗಿ ಸಹಾಯ ಮಾಡುತ್ತಿವೆ. ಅವರು ಸ್ಥಳೀಯ ಸರ್ಕಾರಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆ.
  • ಸ್ಥಳೀಯ ಸರ್ಕಾರದ ಮಾರ್ಗಸೂಚಿಗಳು, ವಿಮಾನ ಮತ್ತು ಪ್ರಯಾಣದ ಸಂದರ್ಭಗಳು, ಕಾನ್ಸುಲರ್ ಸೇವೆಗಳು ಮತ್ತು ಸಮುದಾಯಕ್ಕಾಗಿ ಕೈಗೊಳ್ಳಲಾಗುತ್ತಿರುವ ವಿವಿಧ ಕಲ್ಯಾಣ ಕ್ರಮಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಒಳಗೊಂಡಂತೆ ಸಲಹೆಗಳನ್ನು ನೀಡಲಾಗುತ್ತಿದೆ.
  • ಭಾರತೀಯ ರಾಯಭಾರ ಕಚೇರಿಗಳು ನಿವಾಸಿ ಭಾರತೀಯ ಸಮುದಾಯದೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿವೆ. ಅವರ ಕಾಳಜಿಗಳನ್ನು ಪರಿಹರಿಸಲು ಭಾರತೀಯ ಸಮುದಾಯ ಸಂಘಗಳು, ಸಂಸ್ಥೆಗಳು, ವೃತ್ತಿಪರ ಗುಂಪುಗಳು ಮತ್ತು ಭಾರತೀಯ ಕಂಪನಿಗಳೊಂದಿಗೆ ನಿಯಮಿತವಾಗಿ ಸಂವಹನ ನಡೆಸುತ್ತಿವೆ.
  • ಈ ಪ್ರದೇಶದಲ್ಲಿನ ಭಾರತೀಯ ನಾವಿಕರ ಕಲ್ಯಾಣಕ್ಕೆ ಸರ್ಕಾರವು ಹೆಚ್ಚಿನ ಆದ್ಯತೆಯನ್ನು ನೀಡಿದೆ. ಭಾರತೀಯ ರಾಯಭಾರ ಕಚೇರಿಗಳು ಸ್ಥಳೀಯ ಅಧಿಕಾರಿಗಳು ಮತ್ತು ಸಂಸ್ಥೆಗಳೊಂದಿಗೆ ಸಮನ್ವಯ, ಕಾನ್ಸುಲರ್ ಸಹಾಯವನ್ನು ವಿಸ್ತರಿಸುವುದು ಮತ್ತು ಭಾರತಕ್ಕೆ ಮರಳಲು ವಿನಂತಿಗಳಿಗೆ ಸಹಾಯ ಮಾಡುವುದು ಸೇರಿದಂತೆ ಎಲ್ಲಾ ಸಹಾಯವನ್ನು ಅವರಿಗೆ ನೀಡುತ್ತಿವೆ.
  • ಈ ಪ್ರದೇಶದಿಂದ ಭಾರತದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ವಿಮಾನಗಳು ಕಾರ್ಯನಿರ್ವಹಿಸುವುದರೊಂದಿಗೆ ಒಟ್ಟಾರೆ ವಿಮಾನ ಪರಿಸ್ಥಿತಿ ಸುಧಾರಿಸುತ್ತಿದೆ.
  • ಯುಎಇ ವಾಯುಪ್ರದೇಶ ಮುಕ್ತವಾಗಿದೆ. ಭಾರತೀಯ ಮತ್ತು ಯುಎಇ ವಿಮಾನಯಾನ ಸಂಸ್ಥೆಗಳು ಯುಎಇಯಿಂದ ಭಾರತದ ವಿವಿಧ ಸ್ಥಳಗಳಿಗೆ ವಿಮಾನಗಳನ್ನು ನಿರ್ವಹಿಸುತ್ತಿವೆ.
  • ಸೌದಿ ಅರೇಬಿಯಾ ಮತ್ತು ಒಮಾನ್‌ ನ ವಿವಿಧ ವಿಮಾನ ನಿಲ್ದಾಣಗಳಿಂದ ಭಾರತದ ವಿವಿಧ ಸ್ಥಳಗಳಿಗೆ ವಿಮಾನಗಳು ಕಾರ್ಯನಿರ್ವಹಿಸುತ್ತವೆ.
  • ಕತಾರ್ ವಾಯುಪ್ರದೇಶ ಭಾಗಶಃ ಮುಕ್ತವಾಗಿದೆ. ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸ್‌ ಪ್ರೆಸ್, ಇಂಡಿಗೊ ಮತ್ತು ಕತಾರ್ ಏರ್‌ವೇಸ್ ಕತಾರ್‌ ನಿಂದ ಭಾರತದ ವಿವಿಧ ಸ್ಥಳಗಳಿಗೆ ವಿಮಾನಗಳನ್ನು ನಿರ್ವಹಿಸುತ್ತಿವೆ.
  • ಕುವೈತ್ ವಾಯುಪ್ರದೇಶ ಮುಕ್ತವಾಗಿದೆ. ಜಜೀರಾ ಏರ್‌ವೇಸ್ ಮತ್ತು ಕುವೈತ್ ಏರ್‌ವೇಸ್ ಕುವೈತ್‌ನಿಂದ ಭಾರತಕ್ಕೆ ವಿಮಾನಗಳನ್ನು ನಿರ್ವಹಿಸುತ್ತಿವೆ.
  • ಬಹ್ರೇನ್ ವಾಯುಪ್ರದೇಶ ಮುಕ್ತವಾಗಿದೆ. ಏರ್ ಇಂಡಿಯಾ ಎಕ್ಸ್‌ ಪ್ರೆಸ್, ಇಂಡಿಗೊ ಮತ್ತು ಗಲ್ಫ್ ಏರ್‌ವೇಸ್ ಬಹ್ರೇನ್‌ ನಿಂದ ಭಾರತದ ವಿವಿಧ ಸ್ಥಳಗಳಿಗೆ ವಿಮಾನಗಳನ್ನು ನಿರ್ವಹಿಸುತ್ತಿವೆ.
  • ಇರಾಕ್ ವಾಯುಪ್ರದೇಶವು ಮುಕ್ತವಾಗಿದೆ, ಈ ಪ್ರದೇಶದ ಸ್ಥಳಗಳಿಗೆ ಸೀಮಿತ ವಿಮಾನ ಕಾರ್ಯಾಚರಣೆಗಳೊಂದಿಗೆ, ಇದನ್ನು ಭಾರತಕ್ಕೆ ಮುಂದಿನ ಪ್ರಯಾಣಕ್ಕಾಗಿ ಬಳಸಬಹುದು.
  • ಇರಾನ್ ವಾಯುಪ್ರದೇಶವು ಸರಕು ಮತ್ತು ಚಾರ್ಟರ್ಡ್ ವಿಮಾನಗಳಿಗೆ ಭಾಗಶಃ ಮುಕ್ತವಾಗಿದೆ. ಇರಾನ್‌ ಗೆ ಪ್ರಯಾಣಿಸುವುದನ್ನು ತಪ್ಪಿಸಲು ನಾವು ಭಾರತೀಯ ಪ್ರಜೆಗಳಿಗೆ ಸಲಹೆ ನೀಡಿದ್ದೇವೆ ಮತ್ತು ಈಗಾಗಲೇ ಅಲ್ಲಿರುವವರು ನಮ್ಮ ರಾಯಭಾರ ಕಚೇರಿಯ ಬೆಂಬಲದೊಂದಿಗೆ ಭೂ ಗಡಿ ಮಾರ್ಗಗಳ ಮೂಲಕ ಹೊರಹೋಗುವಂತೆ ಸೂಚಿಸಲಾಗಿದೆ. ಇಲ್ಲಿಯವರೆಗೆ, ಟೆಹ್ರಾನ್‌ ನಲ್ಲಿರುವ ನಮ್ಮ ರಾಯಭಾರ ಕಚೇರಿಯು 2,504 ಭಾರತೀಯ ಪ್ರಜೆಗಳಿಗೆ ಭೂ ಗಡಿ ಮಾರ್ಗಗಳ ಮೂಲಕ ಇರಾನ್‌ ನಿಂದ ಹೊರಹೋಗಲು ಅನುಕೂಲ ಮಾಡಿಕೊಟ್ಟಿದೆ.
  • ಇಸ್ರೇಲ್ ವಾಯುಪ್ರದೇಶವು ಮುಕ್ತವಾಗಿದೆ ಮತ್ತು ಈ ಪ್ರದೇಶದ ಸ್ಥಳಗಳಿಗೆ ಸೀಮಿತ ವಿಮಾನ ಕಾರ್ಯಾಚರಣೆಗಳು ಪುನರಾರಂಭಗೊಂಡಿವೆ, ಇದನ್ನು ಭಾರತಕ್ಕೆ ಮುಂದಿನ ಪ್ರಯಾಣಕ್ಕಾಗಿ ಬಳಸಬಹುದು.

 

*****


(ಪ್ರಕಟಣೆ ಐ.ಡಿ.: 2257918) ವಿಸಿಟರ್ ಕೌಂಟರ್ : 11
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Bengali , Gujarati , Tamil , Telugu , Malayalam