ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

2026ರ ರಾಷ್ಟ್ರೀಯ ಫ್ಲೋರೆನ್ಸ್ ನೈಟಿಂಗೇಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದ ಭಾರತದ ರಾಷ್ಟ್ರಪತಿ


ನರ್ಸಿಂಗ್ ಸಿಬ್ಬಂದಿ ಸೇವೆಯ ಅತ್ಯುನ್ನತ ಮಾನದಂಡಗಳನ್ನು ಮತ್ತು ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

ಪ್ರಕಟಣಾ ದಿನಾಂಕ: 12 MAY 2026 12:58PM by PIB Bengaluru

ಅಂತಾರಾಷ್ಟ್ರೀಯ ದಾದಿಯರ ದಿನದ ಸಂದರ್ಭದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಮೇ 2026ರ 12) ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ನರ್ಸಿಂಗ್ ಸಿಬ್ಬಂದಿಗೆ 2026ರ ನ್ಯಾಷನಲ್ ಫ್ಲೋರೆನ್ಸ್ ನೈಟಿಂಗೇಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ರಾಷ್ಟ್ರಪತಿಗಳು ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗಳು- 2026 ಕುರಿತ ತಮ್ಮ ಸಂದೇಶದಲ್ಲಿ,  ”ಈ ಸಂದರ್ಭವು ದೇಶಕ್ಕೆ ಸಹಾನುಭೂತಿ ಮತ್ತು ಅಚಲ ಬದ್ಧತೆಯಿಂದ ಸೇವೆ ಸಲ್ಲಿಸುವ ನರ್ಸಿಂಗ್ ಸಿಬ್ಬಂದಿ ಮತ್ತು ಆರೋಗ್ಯ ವೃತ್ತಿಪರರ ಅಮೂಲ್ಯ ಕೊಡುಗೆಗೆ ಸೂಕ್ತವಾದ ಗೌರವವಾಗಿದೆ. ನರ್ಸಿಂಗ್ ಸಿಬ್ಬಂದಿ ಅತ್ಯುನ್ನತ ಗುಣಮಟ್ಟದ ಸೇವೆಯನ್ನು ಪ್ರದರ್ಶಿಸುತ್ತಾರೆ ಮತ್ತು ಆಗಾಗ್ಗೆ ಅತ್ಯಂತ ಸವಾಲಿನ ಸಂದರ್ಭಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ. ಅವರು ಕರ್ತವ್ಯಕ್ಕೆ ಅವರ ಸ್ಪೂರ್ತಿದಾಯಕ ನಿಷ್ಠೆ ಮತ್ತು ರೋಗಿಗಳ ಆರೈಕೆಯ ಅತ್ಯುನ್ನತ ಗುಣಮಟ್ಟವನ್ನು ಎತ್ತಿಹಿಡಿಯುವಲ್ಲಿ ಅವರ ಅವಿರತ ಪ್ರಯತ್ನಗಳಿಗಾಗಿ ನಾನು ಎಲ್ಲಾ ಪ್ರಶಸ್ತಿ ಪುರಸ್ಕೃತರನ್ನು ಶ್ಲಾಘಿಸುತ್ತೇನೆ.’’

ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು 1973ರಲ್ಲಿ ನ್ಯಾಷನಲ್ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗಳನ್ನು ಸ್ಥಾಪಿಸಿತು, ನರ್ಸಿಂಗ್ ಸಿಬ್ಬಂದಿ ಸಮಾಜಕ್ಕೆ ಸಲ್ಲಿಸಿದ ಶ್ರೇಷ್ಠ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು.

Please click here to see the list of awardees

 

*****


(ಪ್ರಕಟಣೆ ಐ.ಡಿ.: 2260231) ವಿಸಿಟರ್ ಕೌಂಟರ್ : 15
ಪ್ರಕಟಣೆಯನ್ನು ಇದರಲ್ಲಿ ಓದಿ: Telugu , English , Urdu , हिन्दी , Marathi , Bengali , Bengali-TR , Punjabi , Gujarati , Tamil , Malayalam