ಪ್ರಧಾನ ಮಂತ್ರಿಯವರ ಕಛೇರಿ
ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಮೇಜರ್ ಜನರಲ್ ಭುವನ್ ಚಂದ್ರ ಖಂಡೂರಿ (ನಿವೃತ್ತ) ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
19 MAY 2026 1:31PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಮೇಜರ್ ಜನರಲ್ ಭುವನ್ ಚಂದ್ರ ಖಂಡೂರಿ (ನಿವೃತ್ತ) ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೇಜರ್ ಜನರಲ್ ಖಂಡೂರಿ ಅವರು ಸಶಸ್ತ್ರ ಪಡೆಗಳಿಂದ ರಾಜಕೀಯ ಕ್ಷೇತ್ರದವರೆಗೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ, ಅದಕ್ಕಾಗಿ ಅವರನ್ನು ಸದಾ ಸ್ಮರಿಸಲಾಗುವುದು ಎಂದು ಪ್ರಧಾನಮಂತ್ರಿ ಹೇಳಿದರು. ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಉತ್ತರಾಖಂಡದ ಅಭಿವೃದ್ಧಿಗೆ ಅವರ ಅಚಲ ಸಮರ್ಪಣೆಯನ್ನು ಒತ್ತಿ ಹೇಳಿದ ಶ್ರೀ ನರೇಂದ್ರ ಮೋದಿ ಅವರು, ಕೇಂದ್ರ ಸಚಿವರಾಗಿ ಅವರ ಅಧಿಕಾರಾವಧಿ ನಿಜವಾಗಿಯೂ ಸ್ಪೂರ್ತಿದಾಯಕ ಎಂದು ಬಣ್ಣಿಸಿದರು. ದೇಶಾದ್ಯಂತ ಸಂಪರ್ಕವನ್ನು ಗಮನಾರ್ಹವಾಗಿ ಸುಧಾರಿಸುವ ನಿಟ್ಟಿನಲ್ಲಿ ಅವರ ದಣಿವರಿಯದ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು.
ಈ ದುಃಖದ ಸಮಯದಲ್ಲಿ ಅಗಲಿದ ನಾಯಕನ ಕುಟುಂಬ ಮತ್ತು ಬೆಂಬಲಿಗರಿಗೆ ಪ್ರಧಾನಮಂತ್ರಿ ಅವರು ತಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ:
"उत्तराखंड के पूर्व मुख्यमंत्री मेजर जनरल भुवन चंद्र खण्डूडी (सेवानिवृत्त) जी के निधन से अत्यंत दुख हुआ है। सशस्त्र बलों से लेकर राजनीतिक जगत में उन्होंने बहुमूल्य योगदान दिया, जिसके लिए उन्हें सदैव याद किया जाएगा। उत्तराखंड के विकास के लिए वे हमेशा समर्पित रहे, जो मुख्यमंत्री के रूप में उनके कार्यकाल में भी साफ तौर पर दिखा। केंद्रीय मंत्री के रूप में भी उनका कार्यकाल हर किसी को प्रेरित करने वाला है। देशभर में कनेक्टिविटी की बेहतरी के लिए उन्होंने निरंतर अथक प्रयास किए। शोक की इस घड़ी में मेरी संवेदनाएं उनके परिजनों और समर्थकों के साथ हैं। ओम शांति!"
*****
(ಪ್ರಕಟಣೆ ಐ.ಡಿ.: 2262767)
ವಿಸಿಟರ್ ಕೌಂಟರ್ : 5