ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಜಪಾನ್ ವಿದೇಶಾಂಗ ವ್ಯವಹಾರಗಳ ಸಚಿವರು
ಪ್ರಕಟಣಾ ದಿನಾಂಕ:
26 MAY 2026 7:59PM by PIB Bengaluru
ಜಪಾನ್‌ನ ವಿದೇಶಾಂಗ ವ್ಯವಹಾರಗಳ ಸಚಿವರಾದ ಶ್ರೀ ತೋಶಿಮಿಟ್ಸು ಮೊಟೆಗಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಇಂಡೋ-ಪೆಸಿಫಿಕ್ ಮತ್ತು ಅದರಾಚೆಗೆ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಮುನ್ನಡೆಸುವಲ್ಲಿ ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯು ವಹಿಸಬಹುದಾದ ಪ್ರಮುಖ ಪಾತ್ರವನ್ನು ಶ್ರೀ ಮೋದಿ ಪುನರುಚ್ಚರಿಸಿದರು.
ಭಾರತ ಮತ್ತು ಜಪಾನ್ ನಡುವಿನ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಬಗ್ಗೆ ಉಭಯ ನಾಯಕರು ಚರ್ಚಿಸಿದರು.
ಪ್ರಧಾನಮಂತ್ರಿ ಅವರು ತಮ್ಮ ʻಎಕ್ಸ್ʼ ಖಾತೆಯಲ್ಲಿ ಈ ಬಗ್ಗೆ ಈ ರೀತಿ ರೀತಿ ಹೇಳಿದ್ದಾರೆ:
"ಜಪಾನ್‌ನ ವಿದೇಶಾಂಗ ವ್ಯವಹಾರಗಳ ಸಚಿವರಾದ ಶ್ರೀ ತೋಶಿಮಿಟ್ಸು ಮೊಟೆಗಿ ಅವರನ್ನು ಬರಮಾಡಿಕೊಳ್ಳಲು ಸಂತೋಷವಾಗಿದೆ. ಇಂಡೋ-ಪೆಸಿಫಿಕ್ ಮತ್ತು ಅದರಾಚೆಗೆ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಮುನ್ನಡೆಸುವಲ್ಲಿ ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಸಹಭಾಗಿತ್ವದ ಪ್ರಮುಖ ಪಾತ್ರವನ್ನು ಪುನರುಚ್ಚರಿಸಲಾಯಿತು.
@moteging"
*****
(ಪ್ರಕಟಣೆ ಐ.ಡಿ.: 2265738)
ವಿಸಿಟರ್ ಕೌಂಟರ್ : 9
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Tamil
,
Telugu
,
Malayalam