ರಾಷ್ಟ್ರಪತಿಗಳ ಕಾರ್ಯಾಲಯ
ಭಾರತದ ರಾಷ್ಟ್ರಪತಿ ಅವರಿಂದ ಈದ್ - ಉಜ್ - ಜುಹಾ ಮುನ್ನಾದಿನದಂದು ಶುಭಾಶಯ
प्रविष्टि तिथि:
27 MAY 2026 6:39PM by PIB Bengaluru
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಈದ್-ಉಜ್-ಜುಹಾ ಮುನ್ನಾ ದಿನದಂದು ಸಹ ನಾಗರಿಕರಿಗೆ ಶುಭಾಶಯ ಕೋರಿದ್ದಾರೆ.
ರಾಷ್ಟ್ರಪತಿಗಳು ತಮ್ಮ ಸಂದೇಶದಲ್ಲಿ, “ಈದ್ – ಉಜ್ - ಜುಹಾ ಅಂಗವಾಗಿ, ದೇಶವಾಸಿಗಳು, ವಿದೇಶಗಳಲ್ಲಿ ನೆಲೆಸಿರುವ ಎಲ್ಲಾ ಸಹ ನಾಗರಿಕರು ಮತ್ತು ಭಾರತೀಯರಿಗೆ, ವಿಶೇಷವಾಗಿ ನಮ್ಮ ಮುಸ್ಲಿಂ ಸಹೋದರ ಸಹೋದರಿಯರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು ಮತ್ತು ಶುಭ ಹಾರೈಕೆಗಳು.
ಈ ಹಬ್ಬವು ಭಕ್ತಿ, ತ್ಯಾಗ ಮತ್ತು ನಿಸ್ವಾರ್ಥತೆಯ ಸಂಕೇತವಾಗಿದೆ. ಇದು ಮಾನವೀಯತೆಯ ಸೇವೆಗೆ, ವಿಶೇಷವಾಗಿ ದುರ್ಬಲರಿಗೆ ಸೇವೆ ಸಲ್ಲಿಸಲು ನಮಗೆ ಪ್ರೇರಣೆ ನೀಡುತ್ತದೆ.
ಈ ಸಂದರ್ಭದಲ್ಲಿ, ಸಮಾಜದಲ್ಲಿ ಪ್ರೀತಿ ಮತ್ತು ಸಾಮರಸ್ಯ ಉತ್ತೇಜಿಸುವ ನಮ್ಮ ಸಂಕಲ್ಪವನ್ನು ಬಲಪಡಿಸೋಣ.”
ರಾಷ್ಟ್ರಪತಿ ಅವರ ಸಂದೇಶವನ್ನು ನೋಡಲು ದಯವಿಟ್ಟು ಇಲ್ಲಿ ಕ್ಲಿಕ್ ಮಾಡಿ -
*****
(रिलीज़ आईडी: 2266079)
आगंतुक पटल : 47
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Bengali
,
Punjabi
,
Gujarati
,
Tamil
,
Telugu
,
Malayalam