ಪ್ರಧಾನ ಮಂತ್ರಿಯವರ ಕಛೇರಿ
ಪಿಎಂ ಸ್ವನಿಧಿ (PM SVANidhi) ಯೋಜನೆಯ 6 ವರ್ಷಗಳ ಸಾಧನೆಯನ್ನು ಶ್ಲಾಘಿಸಿ ಮತ್ತು ಫಲಾನುಭವಿಗಳಿಗೆ ಶುಭ ಹಾರೈಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
01 JUN 2026 12:21PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಿಎಂ ಸ್ವನಿಧಿ (PM SVANidhi) ಯೋಜನೆಯ 6 ವರ್ಷಗಳ ಯಶಸ್ಸನ್ನು ಶ್ಲಾಘಿಸಿದ್ದಾರೆ ಮತ್ತು ದೇಶಾದ್ಯಂತ ಇರುವ ಬೀದಿ ಬದಿ ವ್ಯಾಪಾರಿಗಳ ಜೀವನವನ್ನು ಬದಲಾಯಿಸುವಲ್ಲಿ ಈ ಯೋಜನೆಯು ವಹಿಸಿರುವ ಪಾತ್ರವನ್ನು ಒತ್ತಿಹೇಳಿದ್ದಾರೆ.
ಈ ಯೋಜನೆಯು ಅಡಮಾನ ರಹಿತ ಸಾಲ, ಆರ್ಥಿಕ ಒಳಗೊಳ್ಳುವಿಕೆ ಮತ್ತು ಅಸಂಖ್ಯಾತ ಬೀದಿ ಬದಿ ವ್ಯಾಪಾರಿಗಳಿಗೆ ಬೆಳವಣಿಗೆಗೆ ಹೊಸ ಅವಕಾಶಗಳ ಲಭ್ಯತೆಯನ್ನು ಖಾತ್ರಿಪಡಿಸಿದೆ. ʻಪಿಎಂ ಸ್ವನಿಧಿʼ ಎಂಬುದು ನಂಬಿಕೆ, ಘನತೆ ಮತ್ತು ಸಬಲೀಕರಣದಲ್ಲಿ ಬೇರೂರಿರುವ ಯೋಜನೆಯಾಗಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.
ಎಲ್ಲಾ ಫಲಾನುಭವಿಗಳಿಗೆ ಶುಭ ಹಾರೈಸಿದ ಪ್ರಧಾನಮಂತ್ರಿಯವರು, ಅವರ ದೃಢ ನಿಶ್ಚಯ ಮತ್ತು ಉದ್ಯಮಶೀಲತೆಯನ್ನು ಶ್ಲಾಘಿಸಿದ್ದಾರೆ, ರಾಷ್ಟ್ರದ ಆರ್ಥಿಕತೆಯನ್ನು ಬಲಪಡಿಸಲು ಅವರ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಹೇಳಿದ್ದಾರೆ.
ಈ ಕುರಿತು ʻಎಕ್ಸ್ʼ ವೇದಿಕೆಯಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದಾರೆ:
"ಅಡಮಾನ ರಹಿತ ಸಾಲ, ಆರ್ಥಿಕ ಒಳಗೊಳ್ಳುವಿಕೆ ಮತ್ತು ಬೆಳವಣಿಗೆಗೆ ಹೊಸ ಅವಕಾಶಗಳ ಪ್ರವೇಶವನ್ನು ಖಾತ್ರಿಪಡಿಸುವ ಮೂಲಕ ಅಸಂಖ್ಯಾತ ಬೀದಿ ಬದಿ ವ್ಯಾಪಾರಿಗಳ ಜೀವನವನ್ನು ಪರಿವರ್ತಿಸಿದ ಯೋಜನೆಯಾದ #6YearsofPMSVANidhi ಇಂದು ನಾವು ಆಚರಿಸುತ್ತಿದ್ದೇವೆ. ಈ ಯೋಜನೆಯು ನಂಬಿಕೆ, ಘನತೆ ಮತ್ತು ಸಬಲೀಕರಣಕ್ಕೆ ಸಂಬಂಧಿಸಿದೆ. ತಮ್ಮ ದೃಢ ನಿಶ್ಚಯ ಮತ್ತು ಉದ್ಯಮಶೀಲತೆಯ ಮೂಲಕ ನಮ್ಮ ದೇಶದ ಆರ್ಥಿಕತೆಯ ಬಲವರ್ಧನೆ ಮುಂದುವರಿಸಿರುವ ಎಲ್ಲಾ ಫಲಾನುಭವಿಗಳಿಗೆ ನನ್ನ ಶುಭ ಹಾರೈಕೆಗಳು."
*****
(ಪ್ರಕಟಣೆ ಐ.ಡಿ.: 2267421)
ವಿಸಿಟರ್ ಕೌಂಟರ್ : 16
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Tamil
,
Telugu
,
Malayalam