ಪ್ರಧಾನ ಮಂತ್ರಿಯವರ ಕಛೇರಿ
ಜನಪ್ರಿಯ ಗಾಯಕಿ ಸುಮನ್ ಕಲ್ಯಾಣ್‌ಪುರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
01 JUN 2026 12:45PM by PIB Bengaluru
ಜನಪ್ರಿಯ ಗಾಯಕಿ ಶ್ರೀಮತಿ ಸುಮನ್ ಕಲ್ಯಾಣ್‌ಪುರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಪ್ರಸಿದ್ಧ ಗಾಯಕಿ ಸುಮನ್ ಕಲ್ಯಾಣ್‌ಪುರ್ ಅವರ ನಿಧನದಿಂದ ತಮಗೆ ತೀವ್ರ ನೋವಾಗಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು. ಅವರ ಸುಮಧುರ ಧ್ವನಿ ಮತ್ತು ಭಾವಪೂರ್ಣ ಗಾಯನವು ಭಾರತದ ಸಾಂಸ್ಕೃತಿಕ ಜಗತ್ತನ್ನು ಶ್ರೀಮಂತಗೊಳಿಸಿದೆ ಹಾಗೂ ತಮ್ಮ ಹಾಡುಗಳ ಮೂಲಕ ಅವರು ಭಾರತೀಯ ಚಿತ್ರರಂಗದ ಸಂಗೀತ ಪ್ರೇಮಿಗಳು ಮತ್ತು ಅಭಿಮಾನಿಗಳ ಹೃದಯದಲ್ಲಿ ವಿಶೇಷ ಸ್ಥಾನವನ್ನು ಸೃಷ್ಟಿಸಿದ್ದಾರೆ ಎಂದು ಅವರು ಸ್ಮರಿಸಿದರು.
ಎಕ್ಸ ಜಾಲತಾಣದಲ್ಲಿ ಶ್ರೀ ಮೋದಿ ಹೀಗೆ ಹೇಳಿದ್ದಾರೆ;
“ಜನಪ್ರಿಯ ಗಾಯಕಿ ಸುಮನ್ ಕಲ್ಯಾಣ್‌ಪುರ್ ಅವರ ನಿಧನದಿಂದ ತೀವ್ರ ನೋವಾಗಿದೆ. ಅವರ ಮಧುರ ಧ್ವನಿ ಮತ್ತು ಭಾವಪೂರ್ಣ ಗಾಯನವು ನಮ್ಮ ಸಾಂಸ್ಕೃತಿಕ ಜಗತ್ತನ್ನು ಶ್ರೀಮಂತಗೊಳಿಸಿತ್ತು. ತಮ್ಮ ಹಾಡುಗಳ ಮೂಲಕ ಅವರು ಭಾರತೀಯ ಚಿತ್ರರಂಗದ ಸಂಗೀತ ಪ್ರೇಮಿಗಳು ಮತ್ತು ಅಭಿಮಾನಿಗಳ ಹೃದಯದಲ್ಲಿ ವಿಶೇಷ ಸ್ಥಾನವನ್ನು ಸೃಷ್ಟಿಸಿದ್ದಾರೆ. ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.”
*****
(ಪ್ರಕಟಣೆ ಐ.ಡಿ.: 2267450)
ವಿಸಿಟರ್ ಕೌಂಟರ್ : 13
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Bengali-TR
,
Manipuri
,
Assamese
,
Punjabi
,
Gujarati
,
Tamil
,
Telugu
,
Malayalam