ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

22ನೇ ಏಷ್ಯನ್ ಯು20 ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ಸ್ ನಲ್ಲಿ 19 ಪದಕಗಳನ್ನು ಗೆದ್ದ ಭಾರತೀಯ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ

ಪ್ರಕಟಣಾ ದಿನಾಂಕ: 01 JUN 2026 12:47PM by PIB Bengaluru

22ನೇ ಏಷ್ಯನ್ ಯು20 ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ಸ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದರು.

ಚಾಂಪಿಯನ್ ಶಿಪ್ಸ್ ನಲ್ಲಿ 10 ಚಿನ್ನದ ಪದಕಗಳು ಸೇರಿದಂತೆ ಒಟ್ಟು 19 ಪದಕಗಳನ್ನು ಗೆದ್ದ ಭಾರತೀಯ ತಂಡವನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.

ಈ ಸಾಧನೆಯು ಭಾರತದ ಯುವ ಕ್ರೀಡಾಪಟುಗಳ ದೃಢಸಂಕಲ್ಪ ಮತ್ತು ಉತ್ಕೃಷ್ಟತೆಯನ್ನು ಪ್ರದರ್ಶಿಸುತ್ತದೆ ಎಂದು ಪ್ರಧಾನಮಂತ್ರಿಯವರು ಹೇಳಿದರು.

ಈ ಸಾಧನೆಗಳು ಮುಂಬರುವ ವರ್ಷಗಳಲ್ಲಿ ಇನ್ನು ಹೆಚ್ಚಿನ ಯುವ ಭಾರತೀಯರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಲಿ ಎಂದು ಅವರು ಆಶಾಭಾವನೆ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿಯವರು ಎಕ್ಸ್  ನಲ್ಲಿ ಹೀಗೆ ಬರೆದಿದ್ದಾರೆ;

“22ನೇ ಏಷ್ಯನ್ ಯು20 ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ಸ್ ನಲ್ಲಿ 10 ಚಿನ್ನ ಸೇರಿದಂತೆ 19 ಪದಕಗಳನ್ನು ಗೆದ್ದ ಭಾರತೀಯ ತಂಡಕ್ಕೆ ಅಭಿನಂದನೆಗಳು. ಈ ಅತ್ಯುತ್ತಮ ಪ್ರದರ್ಶನವು ಭಾರತದ ಯುವ ಕ್ರೀಡಾಪಟುಗಳ ದೃಢಸಂಕಲ್ಪ ಮತ್ತು ಉತ್ಕೃಷ್ಟತೆಯನ್ನು ಪ್ರದರ್ಶಿಸುತ್ತದೆ. ಈ ಸಾಧನೆಗಳು ಮುಂಬರುವ ವರ್ಷಗಳಲ್ಲಿ ಇನ್ನು ಹೆಚ್ಚಿನ ಯುವ ಭಾರತೀಯರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಲಿ.”

 

*****

 


(ಪ್ರಕಟಣೆ ಐ.ಡಿ.: 2267452) ವಿಸಿಟರ್ ಕೌಂಟರ್ : 11