ಪ್ರಧಾನ ಮಂತ್ರಿಯವರ ಕಛೇರಿ
ಭಾರತ-ಒಮಾನ್ ʻಸಿಇಪಿಎʼ ಮತ್ತು ಅದರ ಪ್ರಯೋಜನಗಳ ಕುರಿತು ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
01 JUN 2026 12:52PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಬರೆದಿರುವ ಲೇಖನವನ್ನು ಹಂಚಿಕೊಂಡಿದ್ದಾರೆ.
ಭಾರತ-ಒಮಾನ್ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ಭಾರತೀಯ ರಫ್ತುದಾರರಿಗೆ ಮಾರುಕಟ್ಟೆಗಳನ್ನು ವೈವಿಧ್ಯಮಯಗೊಳಿಸಲು, ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸಲು, ರೈತರ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಉಭಯ ದೇಶಗಳ ನಡುವೆ ಪರಸ್ಪರ ಹಂಚಿಕೊಂಡ ಸಮೃದ್ಧಿಯನ್ನು ಉತ್ತೇಜಿಸಲು ಹೇಗೆ ಅವಕಾಶವನ್ನು ನೀಡುತ್ತದೆ ಎಂಬುದನ್ನು ಲೇಖನವು ಉಲ್ಲೇಖಿಸುತ್ತದೆ. ಅಭಿವೃದ್ಧಿ ಹೊಂದಿದ ರಾಷ್ಟ್ರಗಳೊಂದಿಗೆ ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕುವ ಸರ್ಕಾರದ ಪ್ರಯತ್ನಗಳು ಪ್ರತಿಯೊಬ್ಬ ಭಾರತೀಯನ ಜೀವನವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಅದು ಒತ್ತಿಹೇಳುತ್ತದೆ.
ಪ್ರಧಾನ ಮಂತ್ರಿಗಳ ಕಾರ್ಯಾಲಯ ಈ ಕುರಿತು ʻಎಕ್ಸ್ʼ ವೇದಿಕೆಯಲ್ಲಿ ಹೀಗೆ ಹೇಳಿದೆ:
"ಈ ಲೇಖನದಲ್ಲಿ, ಭಾರತ-ಒಮಾನ್ ನಡುವಿನ ʻಸಿಇಪಿಎʼ ಭಾರತೀಯ ರಫ್ತುದಾರರಿಗೆ ಮಾರುಕಟ್ಟೆಗಳನ್ನು ವೈವಿಧ್ಯಮಯಗೊಳಿಸಲು, ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸಲು, ರೈತರ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಉಭಯ ದೇಶಗಳ ನಡುವೆ ಪರಸ್ಪರ ಹಂಚಿಕೊಂಡ ಸಮೃದ್ಧಿಯನ್ನು ಉತ್ತೇಜಿಸಲು ಹೇಗೆ ಅವಕಾಶವನ್ನು ನೀಡುತ್ತದೆ ಎಂಬುದನ್ನು ಕೇಂದ್ರ ಸಚಿವರಾದ ಶ್ರೀ @PiyushGoyal ಅವರು ಉಲ್ಲೇಖಿಸಿದ್ದಾರೆ.
ಅಭಿವೃದ್ಧಿ ಹೊಂದಿದ ರಾಷ್ಟ್ರಗಳೊಂದಿಗೆ ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕುವ ಸರ್ಕಾರದ ಪ್ರಯತ್ನಗಳು ಪ್ರತಿಯೊಬ್ಬ ಭಾರತೀಯನ ಜೀವನವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಲೇಖನದಲ್ಲಿ ಒತ್ತಿ ಹೇಳಿದ್ದಾರೆ.
*****
(ಪ್ರಕಟಣೆ ಐ.ಡಿ.: 2267454)
ವಿಸಿಟರ್ ಕೌಂಟರ್ : 11
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Telugu
,
Malayalam