ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗುಜರಾತ್‌ನ ಸೂರತ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ


ಪಿ ಎಂ ಎನ್ ಆರ್ ಎಫ್ ನಿಂದ ಪರಿಹಾರ ಪ್ರಕಟಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 02 JUN 2026 7:12PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಸೂರತ್ ಜಿಲ್ಲೆಯಲ್ಲಿ ಸಂಭವಿಸಿದ ದುರಂತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಅವರು ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಅಧಿಕಾರಿಗಳು ಅಪಘಾತ ಸ್ಥಳದಲ್ಲಿ ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದ್ದಾರೆ.

ಪ್ರತಿಯೊಬ್ಬ ಮೃತರ ಹತ್ತಿರದ ಸಂಬಂಧಿಕರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ ಎಂ ಎನ್ ಆರ್ ಎಫ್) ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಪ್ರಧಾನಮಂತ್ರಿ ಘೋಷಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು ಎಂದು ಶ್ರೀ ನರೇಂದ್ರ ಮೋದಿ ಅವರು ಉಲ್ಲೇಖಿಸಿದರು.

ಪ್ರಧಾನಮಂತ್ರಿ ಅವರು ತಮ್ಮ  X ಪೋಸ್ಟ್ ನಲ್ಲಿ  ಹೀಗೆ ಹೇಳಿದ್ದಾರೆ:

“ಗುಜರಾತ್‌ನ ಸೂರತ್ ಜಿಲ್ಲೆಯಲ್ಲಿ ನಡೆದ ಅಪಘಾತದ ಬಗ್ಗೆ ಕೇಳಿ ತೀವ್ರ ದುಃಖವುಂಟಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿವೆ ಮತ್ತು ಅಧಿಕಾರಿಗಳು ಅಪಘಾತ ಸ್ಥಳದಲ್ಲಿ ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗಿಸುತ್ತಿದ್ದಾರೆ.

ಮೃತರ ಎಲ್ಲಾ ಸಂಬಂಧಿಕರಿಗೆ ಪಿಎಂಎನ್ ಆರ್ ಎಫ್ ನಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು: ಪ್ರಧಾನಮಂತ್ರಿ’’

 

*****


(ಪ್ರಕಟಣೆ ಐ.ಡಿ.: 2268312) ವಿಸಿಟರ್ ಕೌಂಟರ್ : 47
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Bengali , Assamese , Manipuri , Punjabi , Gujarati , Tamil , Telugu , Malayalam