ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಪದ್ಮ ಪ್ರಶಸ್ತಿಗಳು-2027 ಕ್ಕಾಗಿ ನಾಮನಿರ್ದೇಶನ ಸಲ್ಲಿಕೆ ಅವಧಿಯು ಜುಲೈ 31, 2026 ರವರೆಗೆ ಇರುತ್ತದೆ

प्रविष्टि तिथि: 05 JUN 2026 3:44PM by PIB Bengaluru

2027ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪ್ರಶಸ್ತಿ-2027 ಕ್ಕಾಗಿ ನಾಮನಿರ್ದೇಶನಗಳು ಮತ್ತು ಶಿಫಾರಸುಗಳ ಸಲ್ಲಿಕೆಯು ಮಾರ್ಚ್ 15, 2026 ರಿಂದ ಪ್ರಾರಂಭವಾಗಿದೆ. ಪದ್ಮ ಪ್ರಶಸ್ತಿಗಳ ನಾಮನಿರ್ದೇಶನಕ್ಕೆ ಜುಲೈ 31, 2026 ಕೊನೆಯ ದಿನಾಂಕವಾಗಿದೆ. ಪದ್ಮ ಪ್ರಶಸ್ತಿಗಳಿಗಾಗಿನ ನಾಮನಿರ್ದೇಶನಗಳು ಮತ್ತು ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ (https://awards.gov.in) ಮೂಲಕ ಆನ್ ಲೈನ್ ನಲ್ಲಿ ಮಾತ್ರ ಸ್ವೀಕರಿಸಲಾಗುತ್ತದೆ.

ಪದ್ಮ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾಗವೆ. 1954 ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಈ ಪ್ರಶಸ್ತಿಯು 'ವಿಶಿಷ್ಟ ಕಾರ್ಯ'ವನ್ನು ಗುರುತಿಸಲು  ಉದ್ದೇಶಿಸಿದ್ದು ಮತ್ತು ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಮುಂತಾದ ಎಲ್ಲಾ ಕ್ಷೇತ್ರಗಳು/ವಿಷಯಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು/ಸೇವೆಗಾಗಿ ನೀಡಲಾಗುತ್ತದೆ. ಜಾತಿ, ಉದ್ಯೋಗ, ಹುದ್ದೆ ಅಥವಾ ಲಿಂಗದ ಭೇದವಿಲ್ಲದೆ ಎಲ್ಲಾ ವ್ಯಕ್ತಿಗಳು ಈ ಪ್ರಶಸ್ತಿಗಳಿಗೆ ಅರ್ಹರಾಗಿದ್ದಾರೆ. ವೈದ್ಯರು ಮತ್ತು ವಿಜ್ಞಾನಿಗಳನ್ನು ಹೊರತುಪಡಿಸಿ, ಸಾರ್ವಜನಿಕ ವಲಯದ ಉದ್ಯಮಗಳಲ್ಲಿ   ಕೆಲಸ ಮಾಡುವವರು ಸೇರಿದಂತೆ ಸರ್ಕಾರಿ ನೌಕರರು ಪದ್ಮ ಪ್ರಶಸ್ತಿಗಳಿಗೆ ಅರ್ಹರಲ್ಲ.

ಪದ್ಮ ಪ್ರಶಸ್ತಿಗಳನ್ನು "ಜನರ ಪದ್ಮ" ಆಗಿ ಪರಿವರ್ತಿಸಲು ಸರ್ಕಾರ ಬದ್ಧವಾಗಿದೆ. ಆದ್ದರಿಂದ, ಸ್ವಯಂ ನಾಮನಿರ್ದೇಶನ ಸೇರಿದಂತೆ ನಾಮನಿರ್ದೇಶನಗಳು ಮತ್ತು ಶಿಫಾರಸುಗಳನ್ನು ಮಾಡಲು ಎಲ್ಲಾ ನಾಗರಿಕರಲ್ಲಿ ವಿನಂತಿಸಲಾಗಿದೆ. ಮಹಿಳೆಯರು, ಸಮಾಜದ ದುರ್ಬಲ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು, ವಿಶೇಷಚೇತನರು ಮತ್ತು ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವವರ ಪೈಕಿ, ಅವರ ಶ್ರೇಷ್ಠತೆ ಮತ್ತು ಸಾಧನೆಗಳು ನಿಜವಾಗಿಯೂ ಗುರುತಿಸಲ್ಪಡಲು ಅರ್ಹವಾಗಿರುವಂತಹ ಪ್ರತಿಭಾವಂತ ವ್ಯಕ್ತಿಗಳನ್ನು ಗುರುತಿಸಲು ಸಂಘಟಿತ ಪ್ರಯತ್ನಗಳನ್ನು ಮಾಡಬಹುದು.

ನಾಮನಿರ್ದೇಶನಗಳು ಮತ್ತು ಶಿಫಾರಸುಗಳು ಮೇಲೆ ತಿಳಿಸಿದ ಪೋರ್ಟಲ್ ನಲ್ಲಿ ಲಭ್ಯವಿರುವ ನಮೂನೆಯಲ್ಲಿ ನಿರ್ದಿಷ್ಟಪಡಿಸಿದ ಎಲ್ಲಾ ಸಂಬಂಧಿತ ವಿವರಗಳನ್ನು ಒಳಗೊಂಡಿರಬೇಕು ಮತ್ತು ಶಿಫಾರಸು ಮಾಡಲ್ಪಟ್ಟ ವ್ಯಕ್ತಿಯು ತನ್ನ ಕ್ಷೇತ್ರ ಮತ್ತು ವಿಷಯದಲ್ಲಿ ಮಾಡಿದ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು ಮತ್ತು ಸೇವೆಯನ್ನು ಸ್ಪಷ್ಟವಾಗಿ ಬಿಂಬಿಸಬೇಕು.

ಈ ಕುರಿತಾದ ವಿವರಗಳು ಗೃಹ ವ್ಯವಹಾರಗಳ ಸಚಿವಾಲಯದ ಜಾಲತಾಣ (https://mha.gov.in) 'ಪ್ರಶಸ್ತಿಗಳು ಮತ್ತು ಪದಕಗಳು' (Awards and Medals) ಶೀರ್ಷಿಕೆಯ ಅಡಿಯಲ್ಲಿ ಮತ್ತು ಪದ್ಮ ಪ್ರಶಸ್ತಿಗಳ ಪೋರ್ಟಲ್ ನಲ್ಲಿ (https://padmaawards.gov.in) ಲಭ್ಯವಿವೆ. ಈ ಪ್ರಶಸ್ತಿಗಳಿಗೆ ಸಂಬಂಧಿಸಿದ ಕಾನೂನುಗಳು ಮತ್ತು ನಿಯಮಗಳು https://padmaawards.gov.in/AboutAwards.aspx ಲಿಂಕ್‌ ನೊಂದಿಗೆ ಜಾಲತಾಣದಲ್ಲಿ ಲಭ್ಯವಿವೆ.

 

*****


(रिलीज़ आईडी: 2269330) आगंतुक पटल : 13
इस विज्ञप्ति को इन भाषाओं में पढ़ें: Tamil , English , Urdu , हिन्दी , Marathi , Bengali , Assamese , Gujarati , Malayalam