ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರಿಂದ ದಮನ್ ನ ನಮೋ ವಿಮಾನ ನಿಲ್ದಾಣದಲ್ಲಿ ಆಧುನಿಕ ಟರ್ಮಿನಲ್ ಕಟ್ಟಡ ಉದ್ಘಾಟನೆ

प्रविष्टि तिथि: 05 JUN 2026 10:18PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಜೆ ದಮನ್ ನ ನಮೋ ವಿಮಾನ ನಿಲ್ದಾಣದಲ್ಲಿ ಆಧುನಿಕ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು.

ಈ ಹೊಸ ಸೌಲಭ್ಯವು ಕೇಂದ್ರಾಡಳಿತ ಪ್ರದೇಶದ ಹೆಚ್ಚುತ್ತಿರುವ ಮೂಲಸೌಕರ್ಯ ಅಗತ್ಯಗಳನ್ನು ಪರಿಣಾಮಕಾರಿಯಾಗಿ ಪೂರೈಸಲಿದೆ ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ. ಟರ್ಮಿನಲ್ ಕಟ್ಟಡವು ಈ ಪ್ರದೇಶದಲ್ಲಿ ಪ್ರವಾಸೋದ್ಯಮ ಮತ್ತು ವಾಣಿಜ್ಯ ಚಟುವಟಿಕೆಗಳನ್ನು ಗಮನಾರ್ಹವಾಗಿ ಉತ್ತೇಜಿಸಲಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. 

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

"ದಮನ್ ನ ನಮೋ ವಿಮಾನ ನಿಲ್ದಾಣದ ಆಧುನಿಕ ಟರ್ಮಿನಲ್ ಕಟ್ಟಡವು ಈ ಕೇಂದ್ರಾಡಳಿತ ಪ್ರದೇಶದ ಹೆಚ್ಚುತ್ತಿರುವ ಮೂಲಸೌಕರ್ಯ ಅಗತ್ಯಗಳನ್ನು ಪೂರೈಸಲಿದೆ. ಇದು ಪ್ರವಾಸೋದ್ಯಮ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಉತ್ತೇಜನ ನೀಡಲಿದೆ. ಇಂದು ಸಂಜೆ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದುದು ಹರ್ಷದಾಯಕ."

 

*****


(रिलीज़ आईडी: 2269703) आगंतुक पटल : 9
इस विज्ञप्ति को इन भाषाओं में पढ़ें: English , Urdu , हिन्दी , Bengali , Gujarati , Tamil , Malayalam