ಪ್ರಧಾನ ಮಂತ್ರಿಯವರ ಕಛೇರಿ
ಗುಜರಾತ್ ರಾಜ್ಯದ ಹಜೀರಾದಲ್ಲಿ ಆಯೋಜಿಸಲಾದ ಪ್ರದರ್ಶನದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
प्रविष्टि तिथि:
05 JUN 2026 10:08PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಹಜೀರಾದಲ್ಲಿ ಆಯೋಜಿಸಲಾದ ಪ್ರದರ್ಶನದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಅವರು ‘ಮೇಕ್ ಇನ್ ಇಂಡಿಯಾ’ ಉಪಕ್ರಮದ ಅಡಿಯಲ್ಲಿ ದೇಶದ ರಕ್ಷಣಾ ಕ್ಷೇತ್ರದಲ್ಲಿ ಬೆಳೆಯುತ್ತಿರುವ ಸಾಮರ್ಥ್ಯಗಳನ್ನು ವೀಕ್ಷಿಸಿದರು.
ಈ ಪ್ರದರ್ಶನವು ರಕ್ಷಣಾ ಕ್ಷೇತ್ರದಲ್ಲಿ ಸ್ವದೇಶೀಕರಣ ಮತ್ತು ಸ್ವಾವಲಂಬನೆ ಉತ್ತೇಜಿಸಲು ಕೈಗೊಳ್ಳಲಾಗುತ್ತಿರುವ ಉದ್ದೇಶಿತ ಪ್ರಯತ್ನಗಳ ಅತ್ಯುತ್ತಮ ಉದಾಹರಣೆಯಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಬಣ್ಣಿಸಿದರು,
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ಗುಜರಾತಿನ ಹಜೀರಾದಲ್ಲಿ ಆಯೋಜಿಸಲಾದ ಪ್ರದರ್ಶನದಲ್ಲಿ ಭಾಗವಹಿಸುವ ಅವಕಾಶ ದೊರೆಯಿತು. ಅಲ್ಲಿ ‘ಮೇಕ್ ಇನ್ ಇಂಡಿಯಾ’ ಉಪಕ್ರಮದ ಅಡಿಯಲ್ಲಿ ದೇಶದ ರಕ್ಷಣಾ ಕ್ಷೇತ್ರದಲ್ಲಿ ಬೆಳೆಯುತ್ತಿರುವ ಸಾಮರ್ಥ್ಯಗಳನ್ನು ವೀಕ್ಷಿಸಿದೆ. ಈ ಪ್ರದರ್ಶನವು ರಕ್ಷಣಾ ಕ್ಷೇತ್ರದಲ್ಲಿ ಸ್ವದೇಶೀಕರಣವನ್ನು ಉತ್ತೇಜಿಸಲು ನಾವು ಕೈಗೊಳ್ಳುತ್ತಿರುವ ಪ್ರಯತ್ನಗಳ ಅತ್ಯುತ್ತಮ ಉದಾಹರಣೆಯಾಗಿದೆ.”
*****
(रिलीज़ आईडी: 2269710)
आगंतुक पटल : 7