ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಿಶ್ವ ಪರಿಸರ ದಿನದ ಅಂಗವಾಗಿ ‘ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನದಡಿ ಸೂರತ್‌ನಲ್ಲಿ ಗಿಡ ನೆಟ್ಟ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 05 JUN 2026 10:11PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಶ್ವ ಪರಿಸರ ದಿನದ ಅಂಗವಾಗಿ ‘ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನದಡಿ ಸೂರತ್‌ನಲ್ಲಿ ಒಂದು ಗಿಡವನ್ನು ನೆಟ್ಟರು.

ಪ್ರಕೃತಿಯನ್ನು ಹಸಿರಾಗಿಸುವ ಮತ್ತು ಮುಂದಿನ ಪೀಳಿಗೆಗಳಿಗಾಗಿ ಅದನ್ನು ಸಂರಕ್ಷಿಸುವ ನಮ್ಮ ಸಾಮೂಹಿಕ ಸಂಕಲ್ಪವನ್ನು ಪುನರುಚ್ಚರಿಸಲು ಎಲ್ಲರೂ ಒಂದಾಗಿ ಕೆಲಸ ಮಾಡಬೇಕೆಂದು ಪ್ರಧಾನಮಂತ್ರಿಯವರು ಕರೆ ನೀಡಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“ವಿಶ್ವ ಪರಿಸರ ದಿನದಂದು ‘ತಾಯಿಯ ಹೆಸರಿನಲ್ಲಿ ಒಂದು ವೃಕ್ಷ’ ಅಭಿಯಾನದಡಿ ಸೂರತ್‌ನಲ್ಲಿ ಗಿಡ ನೆಡುವ ಸೌಭಾಗ್ಯ ನನಗೆ ದೊರೆಯಿತು. ಬನ್ನಿ, ನಾವೆಲ್ಲರೂ ಸೇರಿ ಪ್ರಕೃತಿಯನ್ನು ಹಸಿರಾಗಿಸುವ ಹಾಗೂ ಮುಂದಿನ ಪೀಳಿಗೆಗಳಿಗಾಗಿ ಅದನ್ನು ಸಂರಕ್ಷಿಸುವ ನಮ್ಮ ಸಂಕಲ್ಪವನ್ನು ಪುನರುಚ್ಚರಿಸೋಣ.”

 

*****


(ಪ್ರಕಟಣೆ ಐ.ಡಿ.: 2269805) ವಿಸಿಟರ್ ಕೌಂಟರ್ : 75
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam