ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದಮನ್‌ನಲ್ಲಿ ನಮೋ ಆಸ್ಪತ್ರೆಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

प्रविष्टि तिथि: 05 JUN 2026 10:25PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಮನ್‌ನಲ್ಲಿ ನಮೋ ಆಸ್ಪತ್ರೆಯನ್ನು ಉದ್ಘಾಟಿಸಿದರು. ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ ಈ ಆಸ್ಪತ್ರೆಯನ್ನು ಆರಂಭಿಸಲಾಗಿದೆ ಎಂದು ಅವರು ತಿಳಿಸಿದರು. ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಈ ಆಸ್ಪತ್ರೆ ಕೇಂದ್ರಾಡಳಿತ ಪ್ರದೇಶವಾದ ದಮನ್ ನ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಆರೋಗ್ಯ ಸೇವೆಗಳ ಅಗತ್ಯಗಳನ್ನು ಪೂರೈಸುವಲ್ಲಿ ಮಹತ್ತರ ಪಾತ್ರ ವಹಿಸಲಿದೆ ಎಂದು ಅವರು ಹೇಳಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

"ಜನರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಒದಗಿಸುವ ನಮ್ಮ ಪ್ರಯತ್ನಗಳ ಭಾಗವಾಗಿ ದಮನ್‌ನ ನಮೋ ಆಸ್ಪತ್ರೆಯನ್ನು ಉದ್ಘಾಟಿಸಲಾಗಿದೆ. ಇದು ಆಧುನಿಕ ಸೌಲಭ್ಯಗಳನ್ನು ಹೊಂದಿದ್ದು, ಕೇಂದ್ರಾಡಳಿತ ಪ್ರದೇಶ ದಮನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಆರೋಗ್ಯ ಸೇವೆಗಳ ಅಗತ್ಯಗಳನ್ನು ಪೂರೈಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ."

 

*****


(रिलीज़ आईडी: 2269841) आगंतुक पटल : 2
इस विज्ञप्ति को इन भाषाओं में पढ़ें: Malayalam , English , Urdu , हिन्दी , Bengali , Assamese , Gujarati , Tamil