ಪ್ರಧಾನ ಮಂತ್ರಿಯವರ ಕಛೇರಿ
ಎಸ್ ಎ ಎಫ್ ಎಫ್ ಮಹಿಳಾ ಚಾಂಪಿಯನ್ ಶಿಪ್ 2026 ಜಯಿಸಿರುವ ಭಾರತೀಯ ಮಹಿಳಾ ಫುಟ್‌ಬಾಲ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
प्रविष्टि तिथि:
07 JUN 2026 1:58PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣ ಏಷ್ಯಾ ಫುಟ್ಬಾಲ್ ಒಕ್ಕೂಟ (ಸ್ಯಾಫ್ - ಎಸ್ ಎ ಎಫ್ ಎಫ್) ಮಹಿಳಾ ಫುಟ್ಬಾಲ್ ಚಾಂಪಿಯನ್ ಶಿಪ್ 2026 ಜಯಿಸಿರುವ ಭಾರತೀಯ ಮಹಿಳಾ ಫುಟ್‌ಬಾಲ್ ತಂಡವನ್ನು ಅಭಿನಂದಿಸಿದ್ದಾರೆ. ಪಂದ್ಯಾವಳಿಯಾದ್ಯಂತ ವನಿತೆಯರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ ಎಂದು ಪ್ರಧಾನಮಂತ್ರಿ ಬಣ್ಣಿಸಿದ್ದಾರೆ.
ಈ ಸಾಧನೆಯು ಮುಂಬರುವ ದಿನಗಳಲ್ಲಿ ಹೆಚ್ಚಿನ ಯುವಕರು ಫುಟ್ಬಾಲ್ ಆಟದಲ್ಲಿ ತೊಡಗಿಕೊಳ್ಳಲು ಹುರಿದುಂಬಿಸಲಿದೆ ಎಂದು ಹೇಳಿರುವ ಶ್ರೀ ಮೋದಿ ಅವರು, ತಂಡದ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಸಿದ್ದಾರೆ.
ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:
"ಎಸ್ ಎ ಎಫ್ ಎಫ್ ಮಹಿಳಾ ಚಾಂಪಿಯನ್ ಶಿಪ್ 2026 ಗೆದ್ದಿರುವ ಭಾರತದ ಮಹಿಳಾ ಫುಟ್ ಬಾಲ್ ತಂಡಕ್ಕೆ ಅಭಿನಂದನೆಗಳು. ಅವರು ಪಂದ್ಯಾವಳಿಯುದ್ದಕ್ಕೂ ಅತ್ಯುತ್ತಮವಾಗಿ ಆಡಿದ್ದಾರೆ. ಇದು ಮುಂಬರುವ ದಿನಗಳಲ್ಲಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಫುಟ್‌ಬಾಲ್ ಆಟದಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುತ್ತದೆ. ತಂಡದ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು."
*****
(रिलीज़ आईडी: 2270095)
आगंतुक पटल : 4