ಪ್ರಧಾನ ಮಂತ್ರಿಯವರ ಕಛೇರಿ
ಹಿರಿಯ ನಟ ಶ್ರೀ ಸಲೀಂ ಕುಮಾರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
07 JUN 2026 1:52PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಿರಿಯ ನಟ ಶ್ರೀ ಸಲೀಂ ಕುಮಾರ್ ಅವರ ನಿಧನದ ಬಗ್ಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ತಮ್ಮ ವಿಶಿಷ್ಟ ಹಾಗೂ ಯಶಸ್ವಿ ವೃತ್ತಿಜೀವನದ ಅವಧಿಯಲ್ಲಿ ಅವರು ವಿವಿಧ ರೀತಿಯ ಪಾತ್ರಗಳಲ್ಲಿ ತಮ್ಮ ಬಹುಮುಖ ಪ್ರತಿಭೆ ಮತ್ತು ಮರೆಯಲಾಗದ ಅಭಿನಯದ ಮೂಲಕ ವಿಶಿಷ್ಟ ಛಾಪು ಮೂಡಿಸಿದ್ದಾರೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.
ಈ ದುಃಖದ ಸಂದರ್ಭದಲ್ಲಿ ಹಿರಿಯ ನಟರ ಕುಟುಂಬ ಸದಸ್ಯರು ಹಾಗೂ ಅವರ ಅಸಂಖ್ಯಾತ ಅಭಿಮಾನಿಗಳ ದುಃಖದಲ್ಲಿ ಭಾಗಿಯಾಗುತ್ತಿದ್ದು ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದೇನೆ ಎಂದು ಶ್ರೀ ಮೋದಿ ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ:
“ಹಿರಿಯ ನಟ ಶ್ರೀ ಸಲೀಂ ಕುಮಾರ್ ಅವರ ನಿಧನ ವಾರ್ತೆ ಕೇಳಿ ನನಗೆ ತೀವ್ರ ದುಃಖವಾಗಿದೆ. ತಮ್ಮ ವಿಶಿಷ್ಟ ವೃತ್ತಿಜೀವನದ ಅವಧಿಯಲ್ಲಿ ಅವರು ವಿವಿಧ ರೀತಿಯ ಪಾತ್ರಗಳಲ್ಲಿ ತಮ್ಮ ಬಹುಮುಖ ಪ್ರತಿಭೆ ಮತ್ತು ಸ್ಮರಣೀಯ ಅಭಿನಯದ ಮೂಲಕ ವಿಶೇಷ ಗುರುತು ಮೂಡಿಸಿದ್ದರು. ಈ ದುಃಖದ ಘಳಿಗೆಯಲ್ಲಿ ಅವರ ಕುಟುಂಬ ಸದಸ್ಯರು ಹಾಗೂ ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.”
*****
(ಪ್ರಕಟಣೆ ಐ.ಡಿ.: 2270100)
ವಿಸಿಟರ್ ಕೌಂಟರ್ : 71
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Bengali-TR
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam