ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಫಿಲಿಪ್ಪೀನ್ಸ್ ನ ಮಿಂಡನಾವೊದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿ ಮತ್ತು ಹಾನಿಯ ಬಗ್ಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ

प्रविष्टि तिथि: 08 JUN 2026 7:25PM by PIB Bengaluru

ಪಿಲಿಪ್ಪೀನ್ಸ್ ನ ಮಿಂಡನಾವೊದಲ್ಲಿ ಇಂದು ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿ ಮತ್ತು ಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದುಃಖ ವ್ಯಕ್ತಪಡಿಸಿದ್ದಾರೆ. ದುಃಖತಪ್ತ ಕುಟುಂಬಗಳಿಗೆ ಪ್ರಧಾನಮಂತ್ರಿ ಅವರು ಹೃದಯಾಂತರಾಳದ ಸಂತಾಪ ಸೂಚಿಸಿದರು ಮತ್ತು ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.

ಭಾರತವು ಫಿಲಿಪ್ಪೀನ್ಸ್ ಸರ್ಕಾರ ಮತ್ತು ಜನರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ ಎಂದು ಶ್ರೀ ನರೇಂದ್ರ ಮೋದಿ ಅವರು ದೃಢಪಡಿಸಿದರು.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ:

"ಫಿಲಿಪ್ಪೀನ್ಸ್ ನ ಮಿಂಡನಾವೊದಲ್ಲಿ ಇಂದು ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿ ಮತ್ತು ಹಾನಿಯಿಂದ ದುಃಖಿತನಾಗಿದ್ದೇನೆ. ದುಃಖತಪ್ತ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಮತ್ತು ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಭಾರತವು ಪಿಲಿಪ್ಪೀನ್ಸ್ ಸರ್ಕಾರ ಮತ್ತು ಜನತೆಯೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ.

@bongbongmarcos"

 

*****


(रिलीज़ आईडी: 2270757) आगंतुक पटल : 7
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Assamese , Bengali , Punjabi , Gujarati , Odia , Tamil , Telugu , Malayalam