ಪ್ರಧಾನ ಮಂತ್ರಿಯವರ ಕಛೇರಿ
ಕುವೈತ್ ಅಮೀರ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತುಕತೆ
ಪಶ್ಚಿಮ ಏಷ್ಯಾದ ಪರಿಸ್ಥಿತಿ ಕುರಿತು ಉಭಯ ನಾಯಕರಿಂದ ಅಭಿಪ್ರಾಯ ವಿನಿಮಯ
ಕುವೈತ್ ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ಮೇಲಿನ ದಾಳಿಗೆ ಭಾರತದ ತೀವ್ರ ಖಂಡನೆ - ಪ್ರಧಾನಮಂತ್ರಿ ಪುನರುಚ್ಚಾರ
ಉದ್ವಿಗ್ನತೆ ಶಮನಕ್ಕೆ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಪ್ರಧಾನಮಂತ್ರಿ ಪುನರ್ ಕರೆ
ಕುವೈತ್ ನಲ್ಲಿರುವ ಭಾರತೀಯ ಸಮುದಾಯದ ಯೋಗಕ್ಷೇಮ ಮತ್ತು ಸುರಕ್ಷತೆಗೆ ವೈಯಕ್ತಿಕ ಗಮನ ಹರಿಸಿರುವ ಘನತೆವೆತ್ತ ಅಮೀರ್ ಅವರಿಗೆ ಪ್ರಧಾನಮಂತ್ರಿ ಕೃತಜ್ಞತೆ
प्रविष्टि तिथि:
09 JUN 2026 3:36PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕುವೈತ್ ಅಮೀರ್ ಮಾನ್ಯ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್ ಸಬಾಹ್ ಅವರೊಂದಿಗೆ ಇಂದು ದೂರವಾಣಿ ಸಂಭಾಷಣೆ ನಡೆಸಿದರು.
ಪಶ್ಚಿಮ ಏಷ್ಯಾದಲ್ಲಿನ ಪ್ರಸ್ತುತದ ಭದ್ರತಾ ಪರಿಸ್ಥಿತಿಯ ಕುರಿತು ಎರಡೂ ದೇಶಗಳ ನಾಯಕರು ಅಭಿಪ್ರಾಯ ವಿನಿಮಯ ಮಾಡಿಕೊಂಡರು.
ಹೆಚ್ಚುತ್ತಿರುವ ಉದ್ವಿಗ್ನತೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಪ್ರಧಾನಮಂತ್ರಿಗಳು ಕುವೈತ್ ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ಮೇಲಿನ ದಾಳಿಗಳನ್ನು ಭಾರತ ಬಲವಾಗಿ ಖಂಡಿಸುತ್ತದೆ ಎಂದು ಪುನರುಚ್ಚರಿಸಿದರು.
ಶಾಂತಿ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸಲು, ಉದ್ವಿಗ್ನತೆ ಶಮನಕ್ಕೆ ಮಾತುಕತೆ ಮತ್ತು ರಾಜತಾಂತ್ರಿಕ ಸಂಧಾನದ ಕರೆಯನ್ನು ಪ್ರಧಾನಮಂತ್ರಿ ಪುನರುಚ್ಚರಿಸಿದರು.
ಕುವೈತ್ ನಲ್ಲಿರುವ ಬೃಹತ್ ಭಾರತೀಯ ಸಮುದಾಯದ ನಿರಂತರ ಯೋಗಕ್ಷೇಮ ಮತ್ತು ಸುರಕ್ಷತೆಗೆ ವೈಯಕ್ತಿಕ ಗಮನ ಹರಿಸಿರುವ ಘನತೆವೆತ್ತ ಅಮೀರ್ ಅವರಿಗೆ ಪ್ರಧಾನಮಂತ್ರಿ ಕೃತಜ್ಞತೆ ಸಲ್ಲಿಸಿದರು.
*****
(रिलीज़ आईडी: 2270766)
आगंतुक पटल : 7