ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಭಾರತಿರಾಜ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
11 JUN 2026 3:18PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಭಾರತಿರಾಜ ಅವರ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ತಮಿಳು ಚಿತ್ರರಂಗವನ್ನು ರೂಪಾಂತರಿಸಿದ ಜಗತ್ತಿನ ಅತ್ಯುನ್ನತ ವ್ಯಕ್ತಿ ಎಂದು ಪ್ರಧಾನಮಂತ್ರಿ ಸ್ಮರಿಸಿದ್ದಾರೆ.
ವಿಶೇಷವಾಗಿ ಗ್ರಾಮೀಣ ಜೀವನದ ಚಿತ್ರಣವನ್ನು ಅವರು ಅದ್ಭುತವಾಗಿ ಚಿತ್ರೀಕರಿಸಿದ್ದರು ಎಂದು ಶ್ರೀ ಮೋದಿ ಅವರು ಬಣ್ಣಿಸಿದ್ದಾರೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪ ಸೂಚಿಸಿ ಓಂ ಶಾಂತಿ ಎಂದು ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ಶ್ರೀ ಭಾರತಿರಾಜ ಅವರ ನಿಧನ ಅತ್ಯಂತ ದುಃಖಕರ. ತಮಿಳು ಚಿತ್ರರಂಗವನ್ನು ರೂಪಾಂತರಿಸಿದ ಚಲನಚಿತ್ರ ನೀಡಿದ ಅತ್ಯುನ್ನತ ವ್ಯಕ್ತಿಯಾಗಿದ್ದರು. ವಿಶೇಷವಾಗಿ ಗ್ರಾಮೀಣ ಜೀವನದ ಚಿತ್ರೀಕರಣ ಗಮನಾರ್ಹವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ."
*****
(रिलीज़ आईडी: 2271717)
आगंतुक पटल : 6
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Bengali-TR
,
Assamese
,
Punjabi
,
Gujarati
,
Tamil
,
Telugu