ಪ್ರಧಾನ ಮಂತ್ರಿಯವರ ಕಛೇರಿ
ರೈತರ ಕಲ್ಯಾಣ, ಆಧುನಿಕ ಕೃಷಿ ಸೌಲಭ್ಯಗಳು ಮತ್ತು ಕೃಷಿ ವಲಯದ ಸಬಲೀಕರಣಕ್ಕೆ ಸರ್ಕಾರದ ಬದ್ಧತೆ ವಿವರಿಸಿರುವ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
11 JUN 2026 4:19PM by PIB Bengaluru
ದೇಶದ ಆಹಾರ ಭದ್ರತೆ, ಪೋಷಣೆ ಮತ್ತು ಸಮೃದ್ಧಿಗೆ ನಮ್ಮ ರೈತ ಸಹೋದರ ಸಹೋದರಿಯರೇ ಆಧಾರಸ್ತಂಭಗಳಾಗಿದ್ದು ಅವರ ಜೀವನವನ್ನು ಸುಲಲಿತಗೊಳಿಸಲು ಸರ್ಕಾರವು ಯಾವ ಅವಕಾಶವನ್ನೂ ಕೈಚೆಲ್ಲುವುದಿಲ್ಲ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒತ್ತಿ ಹೇಳಿದ್ದಾರೆ. ಪಿಎಂ-ಕಿಸಾನ್ ಸಮ್ಮಾನ್ ನಿಧಿ ಮತ್ತು ಫಸಲ್ ಬಿಮಾ ಯೋಜನೆಯಂತಹ ಉಪಕ್ರಮಗಳು ಕೃಷಿಕರ ಆದಾಯವನ್ನು ಭದ್ರಪಡಿಸುತ್ತಾ ಕೃಷಿಯನ್ನು ಸಬಲೀಕರಣಗೊಳಿಸುತ್ತಿವೆ ಎಂದು ಹೇಳಿರುವ ಅವರು, ಪಿಎಂ-ಕುಸುಮ್ ಯೋಜನೆಯು ಸೌರಶಕ್ತಿಯು ಸುಲಭವಾಗಿ ದೊರೆಯುವಂತೆ ಮಾಡುತ್ತಾ, ಕೃಷಿ ವೆಚ್ಚವನ್ನು ತಗ್ಗಿಸಿದೆ ಎಂದು ತಿಳಿಸಿದ್ದಾರೆ.
ರೈತರು, ಜಾನುವಾರು ಸಾಕಣೆದಾರರು ಮತ್ತು ಮೀನುಗಾರರಿಗೆ ಸುಲಭ ಮತ್ತು ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಹೆಚ್ಚು ಪ್ರಯೋಜನಕಾರಿಯಾಗಿದೆ ಶ್ರೀ ಮೋದಿ ಅವರು ಗಮನಸೆಳೆದಿದ್ದಾರೆ. 'ಬೀಜದಿಂದ ಮಾರುಕಟ್ಟೆಗೆ' ಉಪಕ್ರಮವು ಅವರ ಬೆಳೆಗಳಿಗೆ ನ್ಯಾಯಯುತ ಬೆಲೆಯನ್ನು ಪರಿಣಾಮಕಾರಿಯಾಗಿ ಖಾತರಿಪಡಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ರೈತರ ಕಲ್ಯಾಣವು ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದ್ದು, ಆಧುನಿಕ ಕೃಷಿ ಸೌಲಭ್ಯಗಳನ್ನು ಒದಗಿಸುವತ್ತ ನಿರಂತರ ಒತ್ತು ನೀಡಲಾಗುತ್ತಿದೆ ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ. ಡ್ರೋನ್ ಗಳು, ಮಣ್ಣಿನ ಆರೋಗ್ಯ ಕಾರ್ಡ್ ಗಳು ಮತ್ತು ನೈಸರ್ಗಿಕ ಗೊಬ್ಬರಗಳಿಗೆ ಸಂಬಂಧಿಸಿದ ಅಭಿಯಾನಗಳು ರೈತರು ತಮ್ಮ ಬೆಳೆ ಇಳುವರಿಯನ್ನು ಹೆಚ್ಚಿಸಲು ಹೆಚ್ಚು ನೆರವಾಗಿವೆ ಎಂದು ಅವರು ವಿವರಿಸಿದ್ದಾರೆ.
ಪ್ರಧಾನಮಂತ್ರಿಯವರು ಸರಣಿ ಎಕ್ಸ್ ಪೋಸ್ಟ್‌ಗಳಲ್ಲಿ ಹೀಗೆ ಹಂಚಿಕೊಂಡಿದ್ದಾರೆ:
"हमारे किसान भाई-बहन देश की अन्न सुरक्षा, पोषण और समृद्धि के आधारस्तंभ हैं। उनके जीवन को अधिक से अधिक आसान बनाने के लिए हमारी सरकार कोई कोर-कसर नहीं छोड़ रही है। पीएम-किसान सम्मान निधि और फसल बीमा योजना जैसी कई पहल उनकी आय की सुरक्षा के साथ-साथ खेती को अधिक सशक्त बना रही हैं। पीएम-कुसुम योजना से जहां खेती के लिए उन्हें सौर ऊर्जा सुलभ हुई है, वहीं इससे खेती पर होने वाला खर्च भी कम हुआ है
#12YearsOfKisanSamriddhi"
"खेती सहित अन्य जरूरतों के लिए कम ब्याज पर आसानी से ऋण उपलब्ध कराने में किसान क्रेडिट कार्ड किसानों, पशुपालकों और मछुआरों के बहुत काम आ रहा है। उनकी फसलों को उचित मूल्य दिलाने के लिए ‘बीज से बाजार तक’ की हमारी पहल भी बहुत कारगर साबित हो रही है।
#12YearsOfKisanSamriddhi"
"किसानों का कल्याण हमारी सर्वोच्च प्राथमिकताओं में है। इसलिए उन्हें कृषि से जुड़ी आधुनिक सुविधाएं उपलब्ध कराने पर हमारा निरंतर जोर रहा है। ड्रोन, सॉयल हेल्थ कार्ड और प्राकृतिक खाद से जुड़े अभियानों से भी किसानों को फसल की उत्पादकता बढ़ाने में मदद मिल रही है।
#12YearsOfKisanSamriddhi"
*****
(ಪ್ರಕಟಣೆ ಐ.ಡಿ.: 2271905)
ವಿಸಿಟರ್ ಕೌಂಟರ್ : 54
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Bengali-TR
,
Manipuri
,
Assamese
,
Punjabi
,
Gujarati
,
Odia
,
Telugu
,
Malayalam