ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಹಾರಾಷ್ಟ್ರದ ಸೋಲಾಪುರ ಗ್ರಾಮಾಂತರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಪರಿಹಾರ ಘೋಷಣೆ ಮಾಡಿದ ಪ್ರಧಾನಮಂತ್ರಿ

प्रविष्टि तिथि: 14 JUN 2026 11:40PM by PIB Bengaluru

ಮಹಾರಾಷ್ಟ್ರದ ಸೋಲಾಪುರ ಗ್ರಾಮಾಂತರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ದುಃಖದ ಸಮಯದಲ್ಲಿ ಶ್ರೀ ನರೇಂದ್ರ ಮೋದಿ ಅವರು ದುಃಖತಪ್ತ ಕುಟುಂಬಗಳಿಗೆ ತಮ್ಮ ಆಲೋಚನೆಗಳನ್ನು ತಿಳಿಸಿದರು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.

ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಪ್ರಧಾನಮಂತ್ರಿ ಘೋಷಿಸಿದರು. ಹಾಗೆಯೇ ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ಪ್ರಧಾನ ಮಂತ್ರಿಗಳ ಕಾರ್ಯಾಲಯ ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ;

"ಮಹಾರಾಷ್ಟ್ರದ ಸೋಲಾಪುರ ಗ್ರಾಮಾಂತರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ದುಃಖತಪ್ತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂ.ಗಳ ಹಾಗೂ ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರ ನೀಡಲಾಗುವುದು: ಪ್ರಧಾನಮಂತ್ರಿ @narendramodi"

 

*****


(रिलीज़ आईडी: 2272913) आगंतुक पटल : 11
इस विज्ञप्ति को इन भाषाओं में पढ़ें: English , Urdu , हिन्दी , Manipuri , Bengali , Bengali-TR , Assamese , Punjabi , Gujarati , Malayalam