ಗೃಹ ವ್ಯವಹಾರಗಳ ಸಚಿವಾಲಯ
ಕೇಂದ್ರ ಗೃಹ ಕಾರ್ಯದರ್ಶಿ ನೇತೃತ್ವದಲ್ಲಿ ಉನ್ನತ ಮಟ್ಟದ ಪರಿಶೀಲನಾ ಸಭೆ: 2026ರ ನೀಟ್ ಮರುಪರೀಕ್ಷೆಯ ಭದ್ರತೆ ಮತ್ತು ಸಿದ್ಧತೆಗಳ ಪರಿಶೀಲನೆ
प्रविष्टि तिथि:
15 JUN 2026 8:58PM by PIB Bengaluru
ಕೇಂದ್ರ ಗೃಹ ಕಾರ್ಯದರ್ಶಿಗಳು ಇಂದು 2026ರ ನೀಟ್ ಯುಜಿ ಮರುಪರೀಕ್ಷೆಗಾಗಿ ರಾಜ್ಯ ಸರ್ಕಾರಗಳು ಮಾಡಿಕೊಂಡಿರುವ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು. ಈ ಉನ್ನತ ಮಟ್ಟದ ಸಭೆಯಲ್ಲಿ ವಿದ್ಯಾರ್ಥಿಗಳ ಅನುಕೂಲ, ಭದ್ರತಾ ವ್ಯವಸ್ಥೆಗಳು ಮತ್ತು ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ಬಗ್ಗೆ ವಿಶೇಷ ಗಮನ ಹರಿಸಲಾಯಿತು.
ಈ ಪ್ರಮುಖ ಸಭೆಯಲ್ಲಿ ರೈಲ್ವೆ ಮಂಡಳಿಯ ಅಧ್ಯಕ್ಷರು; ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಾರ್ಯದರ್ಶಿ; ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ; ಅಂಚೆ ಇಲಾಖೆಯ ಕಾರ್ಯದರ್ಶಿ; ಸಿ ಆರ್ ಪಿ ಎಫ್, ಸಿ ಐ ಎಸ್ ಎಫ್, ಬಿಸಿಎಎಸ್ ಮತ್ತು ಎನ್ ಟಿ ಎ ಸಂಸ್ಥೆಗಳ ಮಹಾನಿರ್ದೇಶಕರು; ಹಾಗೂ ರಕ್ಷಣಾ ಸಚಿವಾಲಯ ಮತ್ತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪರೀಕ್ಷೆಯ ಭದ್ರತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮತ್ತು ಯಾವುದೇ ಲೋಪದೋಷಗಳಿಲ್ಲದೆ ಅತ್ಯಂತ ವ್ಯವಸ್ಥಿತವಾಗಿ ಪರೀಕ್ಷೆಯನ್ನು ನಡೆಸುವಂತೆ ಕೇಂದ್ರ ಗೃಹ ಕಾರ್ಯದರ್ಶಿಗಳು ಎಲ್ಲಾ ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರೀಯ ಸಂಸ್ಥೆಗಳಿಗೆ ನಿರ್ದೇಶನ ನೀಡಿದರು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಸುಗಮ ಪ್ರಯಾಣಕ್ಕೆ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿನಂತಿಸಲಾಯಿತು. ಇದಕ್ಕೆ ರೈಲ್ವೆ ಮಂಡಳಿಯ ಅಧ್ಯಕ್ಷರು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
*****
(रिलीज़ आईडी: 2273287)
आगंतुक पटल : 20