ಪ್ರಧಾನ ಮಂತ್ರಿಯವರ ಕಛೇರಿ
ಉತ್ತರ ಪ್ರದೇಶದ ಬದಾಯೂನ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
17 JUN 2026 4:32PM by PIB Bengaluru
ಉತ್ತರ ಪ್ರದೇಶದ ಬದಾಯೂನ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರು ಹಾರೈಸಿದ್ದಾರೆ.
ಪ್ರಧಾನ ಮಂತ್ರಿಗಳ ಕಚೇರಿಯ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ಉತ್ತರ ಪ್ರದೇಶದ ಬದಾಯೂನ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳನ್ನು ಸಲ್ಲಿಸುತ್ತೇನೆ. ಗಾಯಗೊಂಡಿರುವವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi"
*****
(रिलीज़ आईडी: 2274365)
आगंतुक पटल : 2