ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಹಾರಾಷ್ಟ್ರದ ಪರ್ಭಾನಿಯಲ್ಲಿ ಗೋಡೆ ಕುಸಿದು ಸಂಭವಿಸಿದ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ

प्रविष्टि तिथि: 20 JUN 2026 6:53PM by PIB Bengaluru

ಮಹಾರಾಷ್ಟ್ರದ ಪರ್ಭಾನಿಯಲ್ಲಿ ಗೋಡೆ ಕುಸಿದ ಪರಿಣಾಮವಾಗಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಈ ದುರ್ಘಟನೆಯಲ್ಲಿ ಜೀವಹಾನಿಯಾಗಿರುವುದು ತೀವ್ರ ಬೇಸರ ತಂದಿದೆ ಎಂದು ಪ್ರಧಾನಮಂತ್ರಿಯವರು ಹೇಳಿದ್ದಾರೆ. ತಮ್ಮ ಆತ್ಮೀಯರನ್ನು ಕಳೆದುಕೊಂಡವರ ದುಃಖದಲ್ಲಿ ತಾವು ಭಾಗಿಯಾಗಿದ್ದು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಪ್ರಧಾನಮಂತ್ರಿ ಕಾರ್ಯಾಲಯವು X ನಲ್ಲಿ ಹೀಗೆ ಬರೆದಿದೆ;

"ಮಹಾರಾಷ್ಟ್ರದ ಪರ್ಭಾನಿಯಲ್ಲಿ ಗೋಡೆ ಕುಸಿದ ಕಾರಣ ಜೀವಹಾನಿಯಾಗಿರುವುದು ತೀವ್ರ ಬೇಸರ ತಂದಿದೆ. ಈ ದುರ್ಘಟನೆಯಲ್ಲಿ ತಮ್ಮ ಆತ್ಮೀಯರನ್ನು ಕಳೆದುಕೊಂಡವರೊಂದಿಗೆ ನನ್ನ ಭಾವನೆಗಳಿವೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ: ಪ್ರಧಾನಮಂತ್ರಿ @narendramodi"

 

*****


(रिलीज़ आईडी: 2276568) आगंतुक पटल : 3
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Telugu , Malayalam