ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಹಾಡ್‌ಪುರ ಗ್ರಾಮದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರೊಂದಿಗೆ ಸಂತಾಲಿ ಜಹೇರಾ ಮತ್ತು ಹೋ ಜಹೇರಾಗಳಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

प्रविष्टि तिथि: 20 JUN 2026 8:51PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪಹಾಡ್‌ಪುರ ಗ್ರಾಮದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರೊಂದಿಗೆ ಸಂತಾಲಿ ಜಹೇರಾ ಮತ್ತು ಹೋ ಜಹೇರಾಗಳಿಗೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದ್ದಾರೆ.

ಬುಡಕಟ್ಟು ಸಮುದಾಯಗಳು ಪಾಲಿಸಿಕೊಂಡು ಬಂದಿರುವ ಆಳವಾದ ಆಧ್ಯಾತ್ಮಿಕ ಸಂಪ್ರದಾಯಗಳು ಮತ್ತು ಪ್ರಕೃತಿಯೊಂದಿಗಿನ ಸಾಮರಸ್ಯದ ಸಂಬಂಧವನ್ನು ಈ ಪವಿತ್ರ ತೋಪುಗಳು (sacred groves) ಬಿಂಬಿಸುತ್ತವೆ ಎಂದು ಪ್ರಧಾನಮಂತ್ರಿಯವರು ಹೇಳಿದ್ದಾರೆ.

ಇಂತಹ ಆಚಾರ-ವಿಚಾರಗಳು ಮತ್ತು ಸಂಪ್ರದಾಯಗಳು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗಗಳಾಗಿವೆ ಎಂದು ಶ್ರೀ ಮೋದಿಯವರು ಉಲ್ಲೇಖಿಸಿದ್ದಾರೆ.

ಭವಿಷ್ಯದ ಪೀಳಿಗೆಗಾಗಿ ಈ ಕಾಲಾತೀತ ಸಂಪ್ರದಾಯಗಳನ್ನು ಸಂರಕ್ಷಿಸಲು ಮತ್ತು ಉತ್ತೇಜಿಸಲು ಇರುವ ಬದ್ಧತೆಯನ್ನು ಪ್ರಧಾನಮಂತ್ರಿಯವರು ಪುನರುಚ್ಚರಿಸಿದ್ದಾರೆ.

ಪ್ರಧಾನಮಂತ್ರಿಯವರು X ನಲ್ಲಿ ಹೀಗೆ ಬರೆದಿದ್ದಾರೆ;

"ರಾಷ್ಟ್ರಪತಿಯವರ ಜೊತೆಗೂಡಿ ಪಹಾಡ್‌ಪುರ ಗ್ರಾಮದ ಸಂತಾಲಿ ಜಹೇರಾ ಮತ್ತು ಹೋ ಜಹೇರಾಗಳಿಗೆ ತೆರಳಿದ್ದೆ.

ನಮ್ಮ ಬುಡಕಟ್ಟು ಸಮುದಾಯಗಳು ಪಾಲಿಸಿಕೊಂಡು ಬಂದಿರುವ ಆಳವಾದ ಆಧ್ಯಾತ್ಮಿಕ ಸಂಪ್ರದಾಯಗಳು ಮತ್ತು ಪ್ರಕೃತಿಯೊಂದಿಗಿನ ಸಾಮರಸ್ಯದ ಸಂಬಂಧವನ್ನು ಬಿಂಬಿಸುವ ಈ ಪವಿತ್ರ ತೋಪುಗಳಿಗೆ ಗೌರವ ನಮನಗಳನ್ನು ಸಲ್ಲಿಸಿದೆ.

ಇಂತಹ ಆಚಾರ-ವಿಚಾರಗಳು ಮತ್ತು ಸಂಪ್ರದಾಯಗಳು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿವೆ.

ಭವಿಷ್ಯದ ಪೀಳಿಗೆಗಾಗಿ ಈ ಕಾಲಾತೀತ ಸಂಪ್ರದಾಯಗಳನ್ನು ಸಂರಕ್ಷಿಸಲು ಮತ್ತು ಉತ್ತೇಜಿಸಲು ನಾವು ಬದ್ಧರಾಗಿದ್ದೇವೆ.

@rashtrapatibhvn"

 

*****


(रिलीज़ आईडी: 2276640) आगंतुक पटल : 8
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Assamese , Punjabi , Gujarati , Odia , Tamil , Malayalam