ಪ್ರಧಾನ ಮಂತ್ರಿಯವರ ಕಛೇರಿ
ಲಕ್ನೋದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಪರಿಹಾರ ಘೋಷಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
22 JUN 2026 6:37PM by PIB Bengaluru
ಉತ್ತರಪ್ರದೇಶದ ಲಕ್ನೋದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿಯವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ಪ್ರಗತಿಯಲ್ಲಿದ್ದು, ಅಧಿಕಾರಿಗಳು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವನ್ನು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಮೃತರ ವಾರಸುದಾರರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್) ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50,000 ರೂ.ಗಳ ಪರಿಹಾರವನ್ನು ಪ್ರಧಾನಮಂತ್ರಿ ಪ್ರಕಟಿಸಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:
“ಉತ್ತರಪ್ರದೇಶದ ಲಕ್ನೋದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಜೀವಹಾನಿಯಿಂದ ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ರಕ್ಷಣಾ ಕಾರ್ಯಾಚರಣೆಗಳು ಪ್ರಗತಿಯಲ್ಲಿದ್ದು, ಅಧಿಕಾರಿಗಳು ಸಾಧ್ಯವಿರುವ ಎಲ್ಲ ನೆರವನ್ನು ನೀಡುತ್ತಿದ್ದಾರೆ.
ಮೃತರ ವಾರಸುದಾರರಿಗೆ ಪಿ ಎಂ ಎನ್ ಆರ್ ಎಫ್ ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು: ಪ್ರಧಾನಮಂತ್ರಿ @narendramodi”
*****
(ಪ್ರಕಟಣೆ ಐ.ಡಿ.: 2276941)
ವಿಸಿಟರ್ ಕೌಂಟರ್ : 49
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Telugu
,
Malayalam