ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ
ರಾಷ್ಟ್ರೀಯ ಕ್ರೀಡಾ ಮಂಡಳಿಯ ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸರ್ಕಾರ
ರಾಷ್ಟ್ರೀಯ ಕ್ರೀಡಾ ಮಂಡಳಿಯು ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳಿಗೆ ಮಾನ್ಯತೆ ನೀಡುವ ಮತ್ತು ಆಡಳಿತಾತ್ಮಕ, ಆರ್ಥಿಕ ಹಾಗೂ ನೈತಿಕ ಮಾನದಂಡಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳುವ ಕೇಂದ್ರ ಪ್ರಾಧಿಕಾರವಾಗಿ ಕಾರ್ಯನಿರ್ವಹಿಸಲಿದೆ
प्रविष्टि तिथि:
23 JUN 2026 1:00PM by PIB Bengaluru
ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ರಾಷ್ಟ್ರೀಯ ಕ್ರೀಡಾ ಮಂಡಳಿಯ ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ರಾಷ್ಟ್ರೀಯ ಕ್ರೀಡಾ ಆಡಳಿತ ಕಾಯ್ದೆ 2025 ಮತ್ತು ರಾಷ್ಟ್ರೀಯ ಕ್ರೀಡಾ ಆಡಳಿತ (ರಾಷ್ಟ್ರೀಯ ಕ್ರೀಡಾ ಮಂಡಳಿ) ನಿಯಮಗಳು 2026ರ ನಿಬಂಧನೆಗಳ ಅನ್ವಯ ಈ ಆಯ್ಕೆಯನ್ನು ಮಾಡಲಾಗುವುದು.
'ರಾಷ್ಟ್ರೀಯ ಕ್ರೀಡಾ ಮಂಡಳಿಯ (ಹುಡುಕಾಟ ಮತ್ತು ಆಯ್ಕೆ ಸಮಿತಿ) ನಿಯಮಗಳು-2026'ರ ನಿಯಮ 3(3)ರ ಅಡಿಯಲ್ಲಿ ರಚಿಸಲಾದ ಹುಡುಕಾಟ ಮತ್ತು ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ, ಸಾರ್ವಜನಿಕ ಆಡಳಿತ, ಕ್ರೀಡಾ ಆಡಳಿತ, ಕ್ರೀಡಾ ಕಾನೂನು ಮತ್ತು ಇತರ ಸಂಬಂಧಿತ ಕ್ಷೇತ್ರಗಳಲ್ಲಿ ಜ್ಞಾನ ಅಥವಾ ಪ್ರಾಯೋಗಿಕ ಅನುಭವ ಹೊಂದಿರುವ, ಸಮರ್ಥ ವ್ಯಕ್ತಿಗಳನ್ನು ಕೇಂದ್ರ ಸರ್ಕಾರವು ಅಧ್ಯಕ್ಷರು ಮತ್ತು ಸದಸ್ಯರಾಗಿ ನೇಮಕ ಮಾಡಲಿದೆ.
ರಾಷ್ಟ್ರೀಯ ಕ್ರೀಡಾ ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರ ವೇತನ ಹಾಗೂ ನೇಮಕಾತಿಯ ಇತರ ನಿಯಮಗಳು ಮತ್ತು ಷರತ್ತುಗಳು ರಾಷ್ಟ್ರೀಯ ಕ್ರೀಡಾ ಆಡಳಿತ (ರಾಷ್ಟ್ರೀಯ ಕ್ರೀಡಾ ಮಂಡಳಿ) ನಿಯಮಗಳು 2026ರ ನಿಬಂಧನೆಗಳಿಗೆ ಒಳಪಟ್ಟಿರುತ್ತವೆ.
ರಾಷ್ಟ್ರೀಯ ಕ್ರೀಡಾ ಮಂಡಳಿಯು ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳಿಗೆ ಮಾನ್ಯತೆ ನೀಡುವ ಮತ್ತು ಆಡಳಿತಾತ್ಮಕ, ಆರ್ಥಿಕ ಹಾಗೂ ನೈತಿಕ ಮಾನದಂಡಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳುವ ಕೇಂದ್ರ ಪ್ರಾಧಿಕಾರವಾಗಿ ಕಾರ್ಯನಿರ್ವಹಿಸಲಿದೆ.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಪೋರ್ಟಲ್ https://sports.yas.gov.in/application_app ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಜುಲೈ 2026.
*****
(रिलीज़ आईडी: 2276966)
आगंतुक पटल : 9