ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಕತಾರ್ ನ ಅಮೀರ್ ದೂರವಾಣಿ ಕರೆ
ಕತಾರ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಭಾರತೀಯ ಪ್ರಜೆಗಳ ಪ್ರಾಣಹಾನಿಗೆ ಕತಾರ್ ನ ಅಮೀರ್ ಸಂತಾಪ ವ್ಯಕ್ತಪಡಿಸಿದ್ದಾರೆ
ಗಾಯಗೊಂಡವರಿಗೆ ತ್ವರಿತ ವೈದ್ಯಕೀಯ ಸಹಾಯಕ್ಕಾಗಿ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ
ತಮ್ಮ ನಾಗರಿಕರ ಯೋಗಕ್ಷೇಮ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಬದ್ಧತೆಯನ್ನು ಉಭಯ ನಾಯಕರು ಪುನರುಚ್ಚರಿಸಿದರು
ಪಶ್ಚಿಮ ಏಷ್ಯಾದಲ್ಲಿನ ಶಾಂತಿ ಪ್ರಯತ್ನಗಳಲ್ಲಿ ಕತಾರ್ ನ ಸಕಾರಾತ್ಮಕ ಕೊಡುಗೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ
ದ್ವಿಪಕ್ಷೀಯ ಸಹಕಾರವನ್ನು ವಿಸ್ತರಿಸುವ ಬದ್ಧತೆಯನ್ನು ಉಭಯ ನಾಯಕರು ಪುನರುಚ್ಚರಿಸಿದರು
ಪ್ರಕಟಣಾ ದಿನಾಂಕ:
23 JUN 2026 10:34PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕತಾರ್ ದೇಶದ ಅಮೀರ್ ಘನತೆವೆತ್ತ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.
ಜೂನ್ 21ರಂದು ಕತಾರ್ ನ ರಾಸ್ ಲಫಾನ್ ಕೈಗಾರಿಕಾ ನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡ ಬಗ್ಗೆ ಕತಾರ್ ನ ಅಮೀರ್ ಸಂತಾಪ ವ್ಯಕ್ತಪಡಿಸಿದರು ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.
ಸಂತ್ರಸ್ತ ಕುಟುಂಬಗಳ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದಕ್ಕಾಗಿ ಪ್ರಧಾನಮಂತ್ರಿ ಅವರು ಅವರಿಗೆ ಧನ್ಯವಾದ ಅರ್ಪಿಸಿದರು ಮತ್ತು ಗಾಯಗೊಂಡವರಿಗೆ ತ್ವರಿತ ವೈದ್ಯಕೀಯ ನೆರವು ನೀಡಿದ್ದಕ್ಕಾಗಿ ಮೆಚ್ಚುಗೆ ವ್ಯಕ್ತಪಡಿಸಿದರು.
ತಮ್ಮ ನಾಗರಿಕರ ಯೋಗಕ್ಷೇಮ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಬದ್ಧತೆಯನ್ನು ಉಭಯ ನಾಯಕರು ಪುನರುಚ್ಚರಿಸಿದರು ಮತ್ತು ಪರಸ್ಪರರ ಬೆಂಬಲ ಮತ್ತು ಒಗ್ಗಟ್ಟನ್ನು ಪ್ರತಿಪಾದಿಸಿದರು.
ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಚರ್ಚಿಸುವಾಗ, ಶಾಂತಿ ಪ್ರಯತ್ನಗಳಲ್ಲಿ ಕತಾರ್ ನ ಸಕಾರಾತ್ಮಕ ಕೊಡುಗೆಗೆ ಪ್ರಧಾನಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು ಮತ್ತು ಅವು ಈ ಪ್ರದೇಶದಲ್ಲಿ ಶಾಶ್ವತ ಶಾಂತಿ ಮತ್ತು ಸ್ಥಿರತೆಗೆ ಕಾರಣವಾಗುತ್ತವೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು.
ಉಭಯ ನಾಯಕರು ಎಲ್ಲಾ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ವಿಸ್ತರಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.
ಹಾಗೆಯೇ ಅವರು ನಿಕಟ ಸಂಪರ್ಕದಲ್ಲಿರಲು ಸಮ್ಮತಿಸಿದರು.
*****
(ಪ್ರಕಟಣೆ ಐ.ಡಿ.: 2277361)
ವಿಸಿಟರ್ ಕೌಂಟರ್ : 40
ಪ್ರಕಟಣೆಯನ್ನು ಇದರಲ್ಲಿ ಓದಿ:
Bengali
,
English
,
Urdu
,
Marathi
,
हिन्दी
,
Manipuri
,
Assamese
,
Punjabi
,
Gujarati
,
Odia
,
Telugu
,
Malayalam