ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕೋಲ್ಕತ್ತಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ


ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ

प्रविष्टि तिथि: 25 JUN 2026 11:13AM by PIB Bengaluru

ಕೋಲ್ಕತ್ತಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ.

ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡಲು ರಾಜ್ಯ ಸರ್ಕಾರವು ದಿನದ 24 ಗಂಟೆಗಳ ಕಾಲ ಶ್ರಮಿಸುತ್ತಿದೆ ಎಂದು ಶ್ರೀ ಮೋದಿಯವರು ಭರವಸೆ ನೀಡಿದ್ದಾರೆ.

ಮೃತರ ನಿಕಟ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಪ್ರಧಾನಿಯವರು ಘೋಷಿಸಿದ್ದಾರೆ.

ಶ್ರೀ ಮೋದಿಯವರು X ನಲ್ಲಿ ಪೋಸ್ಟ್ ಮಾಡಿ;

ನಿನ್ನೆ ಕೋಲ್ಕತ್ತಾದಲ್ಲಿ ನಡೆದ ಅಪಘಾತ ದುಃಖಕರವಾಗಿದೆ. ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯ ಸಿಗುವಂತೆ ನೋಡಿಕೊಳ್ಳಲು ರಾಜ್ಯ ಸರ್ಕಾರ ಹಗಲಿರುಳು ಶ್ರಮಿಸುತ್ತಿದೆ: ಪ್ರಧಾನಮಂತ್ರಿ @narendramodi

 

*****


(रिलीज़ आईडी: 2277761) आगंतुक पटल : 10
इस विज्ञप्ति को इन भाषाओं में पढ़ें: Malayalam , English , Urdu , Marathi , हिन्दी , Manipuri , Bengali , Bengali-TR , Assamese , Gujarati , Tamil , Telugu