ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವೆನೆಜುವೆಲಾದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ ಆದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

प्रविष्टि तिथि: 25 JUN 2026 11:01AM by PIB Bengaluru

ವೆನೆಜುವೆಲಾದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಭಾರತೀಯರ ಪರವಾಗಿ ಸಂತಾಪ ಸೂಚಿಸಿದ ಶ್ರೀ ಮೋದಿ ಅವರು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿ, ದುರಂತದಿಂದ ಬಾಧಿತರಾದ ಎಲ್ಲರೊಂದಿಗೆ ತಾವು ಬೆಂಬಲವಾಗಿ ನಿಲ್ಲುವುದಾಗಿ ತಮ್ಮ ನಿಲುವನ್ನು ವ್ಯಕ್ತಪಡಿಸಿದರು.

ಆ ದೇಶದ ಕಷ್ಟದ ಸಮಯದಲ್ಲಿ ಭಾರತ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ಸಿದ್ಧವಿದೆ ಎಂದು ಪ್ರಧಾನಮಂತ್ರಿ ಅವರು ಪುನರುಚ್ಚರಿಸಿದರು.

ಶ್ರೀ ಮೋದಿಯವರು X ನಲ್ಲಿ ಪೋಸ್ಟ್ ಮಾಡಿ;

ವೆನೆಜುವೆಲಾದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ ಉಂಟಾದ ವಿನಾಶದಿಂದ ತೀವ್ರ ದುಃಖಿತನಾಗಿದ್ದೇನೆ.

ಭಾರತೀಯರ ಪರವಾಗಿ, ವೆನೆಜುವೆಲಾ ಸರ್ಕಾರ ಮತ್ತು ಜನರಿಗೆ, ವಿಶೇಷವಾಗಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾವು ಪ್ರಾರ್ಥಿಸುತ್ತೇವೆ ಮತ್ತು ಈ ಕಷ್ಟದ ಸಮಯದಲ್ಲಿ ಎಲ್ಲಾ ಪೀಡಿತ ಜನತೆಯೊಂದಿಗೆ ನಾವು ಜೊತೆಗೆ ನಿಲ್ಲುತ್ತೇವೆ.

ಭಾರತವು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ಸಿದ್ಧವಾಗಿದೆ.

 

*****


(रिलीज़ आईडी: 2277778) आगंतुक पटल : 7
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Bengali-TR , Assamese , Manipuri , Gujarati , Tamil , Telugu , Malayalam