ಪ್ರಧಾನ ಮಂತ್ರಿಯವರ ಕಛೇರಿ
ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
प्रविष्टि तिथि:
28 JUN 2026 10:38AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಶ್ರೀ ಪಿ.ವಿ.ನರಸಿಂಹ ರಾವ್ ಅವರು ನಮ್ಮ ರಾಷ್ಟ್ರದ ಇತಿಹಾಸದ ನಿರ್ಣಾಯಕ ಹಂತದಲ್ಲಿ ಭಾರತದ ಪ್ರಗತಿಗೆ ಶಾಶ್ವತ ಕೊಡುಗೆಗಳನ್ನು ನೀಡಿದ್ದಾರೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ:
ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನಗಳು. ಅವರು ನಮ್ಮ ರಾಷ್ಟ್ರದ ಇತಿಹಾಸದ ನಿರ್ಣಾಯಕ ಹಂತದಲ್ಲಿ ಭಾರತದ ಪ್ರಗತಿಗೆ ಶಾಶ್ವತ ಕೊಡುಗೆಗಳನ್ನು ನೀಡಿದ್ದಾರೆ. ಅವರು ಸಮರ್ಥ ಆಡಳಿತಗಾರರಾಗಿ ಛಾಪು ಮೂಡಿಸಿದ್ದಾರೆ. ಅವರು ಪ್ರಖ್ಯಾತ ವಿದ್ವಾಂಸರಾಗಿದ್ದರು, ಭಾರತದ ವೈವಿಧ್ಯಮಯ ಸಂಸ್ಕೃತಿಯ ಬಗ್ಗೆ ಅಪಾರ ಜ್ಞಾನ ಮತ್ತು ತಿಳುವಳಿಕೆಯನ್ನು ಹೊಂದಿದ್ದರು.
*****
(रिलीज़ आईडी: 2278719)
आगंतुक पटल : 7
इस विज्ञप्ति को इन भाषाओं में पढ़ें:
Malayalam
,
English
,
Urdu
,
Marathi
,
हिन्दी
,
Bengali
,
Bengali-TR
,
Assamese
,
Manipuri
,
Punjabi
,
Gujarati
,
Odia
,
Tamil
,
Telugu