ರಾಜ್ಯಸಭಾ ಕಾರ್ಯಾಲಯ
ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಮಾಣ ವಚನ ಬೋಧಿಸಿದ ರಾಜ್ಯ ಸಭಾಧ್ಯಕ್ಷರಾದ ಶ್ರೀ ಸಿ.ಪಿ. ರಾಧಾಕೃಷ್ಣನ್
प्रविष्टि तिथि:
29 JUN 2026 1:43PM by PIB Bengaluru
ಗೌರವಾನ್ವಿತ ರಾಜ್ಯಸಭಾಧ್ಯಕ್ಷರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಸಂಸತ್ ಭವನದಲ್ಲಿಂದು ರಾಜ್ಯಸಭೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ಮರು ಆಯ್ಕೆಯಾದ ಸದಸ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಶ್ರೀ ಮಲ್ಲಿಕಾರ್ಜುನ ಖರ್ಗೆ ಹಿಂದಿಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ರಾಜ್ಯಸಭೆಯ ಉಪ ಸಭಾಪತಿ ಶ್ರೀ ಹರಿವಂಶ್; ರಾಜ್ಯಸಭೆಯ ಸಭಾನಾಯಕ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಶ್ರೀ ಜಗತ್ ಪ್ರಕಾಶ್ ನಡ್ಡಾ; ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾದ ಶ್ರೀ ಕಿರಣ್ ರಿಜಿಜು; ಕಾನೂನು ಮತ್ತು ನ್ಯಾಯ ರಾಜ್ಯ ಖಾತೆ ಸಚಿವರಾದ ಶ್ರೀ ಅರ್ಜುನ್ ರಾಮ್ ಮೇಘವಾಲ್; ವಾರ್ತಾ ಮತ್ತು ಪ್ರಸಾರ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ಶ್ರೀ ಎಲ್. ಮುರುಗನ್; ರಾಜ್ಯ ಸಭೆಯ ಸದಸ್ಯರಾದ ಶ್ರೀಮತಿ ಸೋನಿಯಾ ಗಾಂಧಿ, ಶ್ರೀ ಜೈರಾಮ್ ರಮೇಶ್, ಶ್ರೀ ಮುಕುಲ್ ವಾಸ್ನಿಕ್, ಡಾ. ಸೈಯದ್ ನಾಸೀರ್ ಹುಸೇನ್; ಲೋಕಸಭೆಯ ಸದಸ್ಯರಾದ ಶ್ರೀಮತಿ ಪ್ರಿಯಾಂಕಾ ಗಾಂಧಿ, ಶ್ರೀ ಕೆ.ಸಿ. ವೇಣುಗೋಪಾಲ್; ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಶ್ರೀ ಪಿ.ಸಿ. ಮೋದಿ ಮತ್ತು ಸಚಿವಾಲಯದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


*****
(रिलीज़ आईडी: 2278983)
आगंतुक पटल : 11