ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಚಾರ್ಟರ್ಡ್ ಅಕೌಂಟೆಂಟ್ಸ್ ದಿನದಂದು ಚಾರ್ಟರ್ಡ್ ಅಕೌಂಟೆಂಟ್ ಸಮುದಾಯದ ಸಹೋದರರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ

प्रविष्टि तिथि: 01 JUL 2026 12:50PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಚಾರ್ಟರ್ಡ್ ಅಕೌಂಟೆಂಟ್ಸ್ ದಿನದ ಶುಭ ಸಂದರ್ಭದಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಸಮುದಾಯಕ್ಕೆ ಶುಭಾಶಯ ಕೋರಿದ್ದಾರೆ. ಚಾರ್ಟರ್ಡ್ ಅಕೌಂಟೆಂಟ್‌ಗಳು ಭಾರತದ ಆರ್ಥಿಕತೆಯಲ್ಲಿ ಸುದೀರ್ಘಕಾಲದಿಂದ ವಿಶ್ವಾಸಾರ್ಹ ಪಾಲುದಾರರಾಗಿದ್ದಾರೆ ಎಂದು ಶ್ರೀ ಮೋದಿಯವರು ಹೇಳಿದರು. ಪಾರದರ್ಶಕತೆ ಮತ್ತು ವೃತ್ತಿಪರ ಶ್ರೇಷ್ಠತೆಗೆ ತಮ್ಮ ಬದ್ಧತೆಯ ಮೂಲಕ, ಅವರು ದೇಶದ ಹಣಕಾಸು ವ್ಯವಸ್ಥೆಯನ್ನು ಬಲಪಡಿಸಿ, ವ್ಯವಹಾರಗಳನ್ನು ಬೆಂಬಲಿಸಿದ್ದಾರೆ. ಅವರು ಉದ್ಯಮಶೀಲತೆಯನ್ನು ಪ್ರೋತ್ಸಾಹಿಸಿ, ಹೂಡಿಕೆದಾರರಲ್ಲಿ ವಿಶ್ವಾಸವನ್ನು ಹೆಚ್ಚಿಸಿದ್ದಾರೆ ಎಂದು ಶ್ರೀ ಮೋದಿಯವರು ಹೇಳಿದ್ದಾರೆ.

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

ಇಡೀ ಚಾರ್ಟರ್ಡ್ ಅಕೌಂಟೆಂಟ್ ಭ್ರಾತೃತ್ವ ಸಮುದಾಯಕ್ಕೆ ಚಾರ್ಟರ್ಡ್ ಅಕೌಂಟೆಂಟ್‌ಗಳ ದಿನದ ಶುಭಾಶಯಗಳು. ಅವರು ಭಾರತದ ಆರ್ಥಿಕತೆಯಲ್ಲಿ ದೀರ್ಘಕಾಲದಿಂದ ವಿಶ್ವಾಸಾರ್ಹ ಪಾಲುದಾರರಾಗಿದ್ದು, ಪಾರದರ್ಶಕತೆ ಮತ್ತು ವೃತ್ತಿಪರ ಶ್ರೇಷ್ಠತೆಗೆ ಅವರ ಬದ್ಧತೆಯ ಮೂಲಕ, ನಮ್ಮ ಹಣಕಾಸು ವ್ಯವಸ್ಥೆಗಳನ್ನು ಬಲಪಡಿಸಿ, ವ್ಯವಹಾರಗಳನ್ನು ಬೆಂಬಲಿಸಿ, ಉದ್ಯಮಶೀಲತೆಯನ್ನು ಪ್ರೋತ್ಸಾಹಿಸಿದ್ದಾರೆ, ಹೂಡಿಕೆದಾರರಲ್ಲಿ ವಿಶ್ವಾಸವನ್ನು ಹೆಚ್ಚಿಸಿದ್ದಾರೆ. ಅವರ ಪರಿಣತಿಯು ಆರ್ಥಿಕ ಬೆಳವಣಿಗೆ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಗಮನಾರ್ಹವಾಗಿ ಕೊಡುಗೆ ನೀಡುತ್ತದೆ. ನಾವು ವಿಕಸಿತ ಭಾರತದತ್ತ ದಾಪುಗಾಲು ಹಾಕುತ್ತಿರುವ ಈ ಶುಭ ಸಂದರ್ಭದಲ್ಲಿ, ಅವರ ಪ್ರಯತ್ನಗಳು ಉದ್ಯಮಕ್ಕೆ ಅಭಿವೃದ್ಧಿ ತರುವ ಮತ್ತು ಎಲ್ಲರಿಗೂ ಅವಕಾಶಗಳನ್ನು ನೀಡುವ ವಾತಾವರಣವನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ.

 

*****


(रिलीज़ आईडी: 2279776) आगंतुक पटल : 10
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Bengali-TR , Assamese , Manipuri , Gujarati , Odia , Tamil , Telugu , Malayalam