ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಇರಾನ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಮಾತುಕತೆ


ಪಶ್ಚಿಮ ಏಷ್ಯಾದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಅಧ್ಯಕ್ಷರಾದ ಪೆಜೆಷ್ಕಿಯನ್ ಅವರು ಪ್ರಧಾನಮಂತ್ರಿ ಅವರಿಗೆ ವಿವರಿಸಿದರು

ತಲುಪಿದ ತಿಳಿವಳಿಕೆಯನ್ನು ಸ್ವಾಗತಿಸಿದ ಪ್ರಧಾನಮಂತ್ರಿ, ಶಾಶ್ವತ ಶಾಂತಿ ಮತ್ತು ಸ್ಥಿರತೆಗಾಗಿ ನಿರಂತರ ಪ್ರಯತ್ನಗಳ ಅಗತ್ಯವನ್ನು ಪುನರುಚ್ಚರಿಸಿದರು

प्रविष्टि तिथि: 30 JUN 2026 9:33PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇರಾನ್ ಇಸ್ಲಾಮಿಕ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಡಾ. ಮಸೂದ್ ಪೆಜೆಷ್ಕಿಯಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ಅಧ್ಯಕ್ಷರಾದ ಪೆಝೆಷ್ಕಿಯಾನ್ ಅವರು ಪಶ್ಚಿಮ ಏಷ್ಯಾದ ಇತ್ತೀಚಿನ ಬೆಳವಣಿಗೆಗಳು ಮತ್ತು ಮುಂದಿನ ಮಾರ್ಗೋಪಾಯಗಳ ಬಗ್ಗೆ ಪ್ರಧಾನಮಂತ್ರಿ ಅವರಿಗೆ ವಿವರಿಸಿದರು.

ಈ ಒಪ್ಪಂದವನ್ನು ಸ್ವಾಗತಿಸಿದ ಪ್ರಧಾನಮಂತ್ರಿ ಅವರು, ಎಲ್ಲಾ ಸಮಸ್ಯೆಗಳನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಪರಿಹರಿಸಬೇಕು ಎಂಬ ಭಾರತದ ಸ್ಥಿರ ನಿಲುವನ್ನು ಪುನರುಚ್ಚರಿಸಿದರು.

ಈ ಪ್ರದೇಶದಲ್ಲಿ ಶಾಶ್ವತ ಶಾಂತಿ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ನೌಕಾಯಾನ ಮತ್ತು ವಾಣಿಜ್ಯದ ಸ್ವಾತಂತ್ರ್ಯವನ್ನು ರಕ್ಷಿಸಲು ನಿರಂತರ ಪ್ರಯತ್ನಗಳ ಅಗತ್ಯವನ್ನು ಪ್ರಧಾನಿ ಪುನರುಚ್ಚರಿಸಿದರು.

 

*****


(रिलीज़ आईडी: 2279808) आगंतुक पटल : 5
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Malayalam