ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಜನಸಂಖ್ಯಾ ಬದಲಾವಣೆಗಳ ಕುರಿತಾದ ಉನ್ನತ ಮಟ್ಟದ ಸಮಿತಿಯು ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರನ್ನು ಭೇಟಿ ಮಾಡಿತು


ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ವಾಸ್ತವಿಕ ವಿವರಗಳನ್ನು ನೇರವಾಗಿ ಪಡೆದುಕೊಳ್ಳಲು ವಿವಿಧ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಭೇಟಿ ನೀಡುವ ತನ್ನ ನಿರ್ಧಾರಗಳ ಕುರಿತು ಉನ್ನತ ಮಟ್ಟದ ಸಮಿತಿಯು ಗೃಹ ಸಚಿವರಿಗೆ ಮಾಹಿತಿ ನೀಡಿತು

ಜನಸಂಖ್ಯಾ ಬದಲಾವಣೆಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಪ್ರತಿಕ್ರಿಯೆಗಳನ್ನು ಪಡೆಯಲು ಸಮಿತಿಯು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳೊಂದಿಗೂ ಸಂವಾದ ನಡೆಸಲಿದೆ

ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ನೀಡುವ ಭೇಟಿಗಳನ್ನು ಹೆಚ್ಚು ಅರ್ಥಪೂರ್ಣ ಮತ್ತು ಸಂವಾದಾತ್ಮಕವಾಗಿಸಲು, ಆಯಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಂದ ಮುಂಚಿತವಾಗಿಯೇ ಸಂಬಂಧಿತ ಮಾಹಿತಿಯನ್ನು ಪಡೆಯಲು ವಿವರವಾದ ಪ್ರಶ್ನಾವಳಿಯನ್ನು ಸಿದ್ಧಪಡಿಸಲಾಗಿದೆ ಎಂದೂ ಉನ್ನತ ಮಟ್ಟದ ಸಮಿತಿಯು ತಿಳಿಸಿದೆ

ಉನ್ನತ ಮಟ್ಟದ ಸಮಿತಿಯು ರೂಪಿಸಿರುವ ಕಾರ್ಯತಂತ್ರವನ್ನು ಶ್ಲಾಘಿಸಿದ ಕೇಂದ್ರ ಗೃಹ ಸಚಿವರು, ಸಮಿತಿಗೆ ಸಾಧ್ಯವಿರುವ ಎಲ್ಲಾ ನೆರವನ್ನು ನೀಡುವಂತೆ ಗೃಹ ಕಾರ್ಯದರ್ಶಿಯವರಿಗೆ ನಿರ್ದೇಶನ ನೀಡಿದರು

ಉನ್ನತ ಮಟ್ಟದ ಸಮಿತಿಯು ತನ್ನ ಶಿಫಾರಸುಗಳನ್ನು ಆದಷ್ಟು ಬೇಗ ನೀಡುವಂತೆ ಗೃಹ ಸಚಿವರು ಸೂಚಿಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 15 ಆಗಸ್ಟ್ 2025 ರಂದು "ಉನ್ನತಾಧಿಕಾರದ ಜನಸಂಖ್ಯಾ ಮಿಷನ್" ಅನ್ನು ಘೋಷಿಸಿದ್ದರು

ಅಕ್ರಮ ವಲಸೆ ಮತ್ತು ಇತರ ಅಸಹಜ ಕಾರಣಗಳಿಂದ ಉಂಟಾಗುವ ಜನಸಂಖ್ಯಾ ಬದಲಾವಣೆಗಳನ್ನು ಅಧ್ಯಯನ ಮಾಡಲು ಮತ್ತು ಈ ಜನಸಂಖ್ಯಾ ಬದಲಾವಣೆಗಳನ್ನು ಎದುರಿಸಲು ಕ್ರಮಗಳನ್ನು ಸೂಚಿಸಲು ಭಾರತ ಸರ್ಕಾರವು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ

प्रविष्टि तिथि: 01 JUL 2026 3:17PM by PIB Bengaluru

ಜನಸಂಖ್ಯಾ ಬದಲಾವಣೆಗಳ ಕುರಿತಾದ ಉನ್ನತ ಮಟ್ಟದ ಸಮಿತಿಯು ನವದೆಹಲಿಯಲ್ಲಿರುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿ ಸಭೆ ನಡೆಸಿತು.

ರಾಜ್ಯ ಸರ್ಕಾರಗಳು/ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳಿಂದ ವಾಸ್ತವಿಕ ವಿವರಗಳನ್ನು ನೇರವಾಗಿ ಪಡೆದುಕೊಳ್ಳಲು ವಿವಿಧ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಭೇಟಿ ನೀಡುವ ಮತ್ತು ಜನಸಂಖ್ಯಾ ಬದಲಾವಣೆಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಪ್ರತಿಕ್ರಿಯೆಗಳನ್ನು ಪಡೆಯಲು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳೊಂದಿಗೆ ಸಂವಾದ ನಡೆಸುವ ತನ್ನ ನಿರ್ಧಾರಗಳ ಕುರಿತು ಉನ್ನತ ಮಟ್ಟದ ಸಮಿತಿಯು ಕೇಂದ್ರ ಗೃಹ ಸಚಿವರಿಗೆ ಮಾಹಿತಿ ನೀಡಿತು. ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ನೀಡುವ ಭೇಟಿಗಳನ್ನು ಹೆಚ್ಚು ಅರ್ಥಪೂರ್ಣ ಮತ್ತು ಸಂವಾದಾತ್ಮಕವಾಗಿಸಲು, ಆಯಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಂದ ಮುಂಚಿತವಾಗಿಯೇ ಸಂಬಂಧಿತ ಮಾಹಿತಿಯನ್ನು ಪಡೆಯಲು ವಿವರವಾದ ಪ್ರಶ್ನಾವಳಿಯನ್ನು ಸಿದ್ಧಪಡಿಸಲಾಗಿದೆ ಎಂದೂ ಉನ್ನತ ಮಟ್ಟದ ಸಮಿತಿಯು ತಿಳಿಸಿತು.

ಉನ್ನತ ಮಟ್ಟದ ಸಮಿತಿಯು ರೂಪಿಸಿರುವ ಕಾರ್ಯತಂತ್ರವನ್ನು ಶ್ಲಾಘಿಸಿದ ಕೇಂದ್ರ ಗೃಹ ಸಚಿವರು, ಸಮಿತಿಯ ದೈನಂದಿನ ಕಾರ್ಯಕಲಾಪಗಳಲ್ಲಿ ಮತ್ತು ಅವರ ಭೇಟಿಗಳ ಸಮಯದಲ್ಲಿ ಸಾಧ್ಯವಿರುವ ಎಲ್ಲಾ ನೆರವನ್ನು ಒದಗಿಸುವಂತೆ ಗೃಹ ಕಾರ್ಯದರ್ಶಿಯವರಿಗೆ ನಿರ್ದೇಶನ ನೀಡಿದರು. ಉನ್ನತ ಮಟ್ಟದ ಸಮಿತಿಯು ತನ್ನ ಶಿಫಾರಸುಗಳನ್ನು ಆದಷ್ಟು ಬೇಗ ನೀಡುವಂತೆ ಕೇಂದ್ರ ಗೃಹ ಸಚಿವರು ಸೂಚಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 15 ಆಗಸ್ಟ್ 2025 ರಂದು "ಉನ್ನತಾಧಿಕಾರದ ಜನಸಂಖ್ಯಾ ಮಿಷನ್" ಅನ್ನು ಘೋಷಿಸಿದ್ದರು. ಅಕ್ರಮ ವಲಸೆ ಮತ್ತು ಇತರ ಅಸಹಜ ಕಾರಣಗಳಿಂದ ಉಂಟಾಗುವ ಜನಸಂಖ್ಯಾ ಬದಲಾವಣೆಗಳನ್ನು ಅಧ್ಯಯನ ಮಾಡಲು ಮತ್ತು ಜನಸಂಖ್ಯಾ ಬದಲಾವಣೆಗಳನ್ನು ಎದುರಿಸಲು ಕ್ರಮಗಳನ್ನು ಸೂಚಿಸಲು ಭಾರತ ಸರ್ಕಾರವು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.

ನಿವೃತ್ತ ನ್ಯಾಯಮೂರ್ತಿ ಪ್ರಕಾಶ್ ಪ್ರಭಾಕರ್ ನಾವ್ಲೇಕರ್ ಅವರು ಸಮಿತಿಯ ಅಧ್ಯಕ್ಷರಾಗಿದ್ದಾರೆ. ಜನಗಣತಿ ಆಯುಕ್ತರ ಜೊತೆಗೆ, ಮೂವರು ಗಣ್ಯ ವ್ಯಕ್ತಿಗಳಾದ ಶ್ರೀ ದುರ್ಗಾ ಶಂಕರ್ ಮಿಶ್ರಾ (ನಿವೃತ್ತ ಐಎಎಸ್), ಶ್ರೀ ಬಾಲಾಜಿ ಶ್ರೀವಾಸ್ತವ (ನಿವೃತ್ತ ಐಪಿಎಸ್) ಮತ್ತು ಡಾ. ಶಮಿಕಾ ರವಿ (ಪಿಎಂಇಎಸಿ - ಪ್ರಧಾನಮಂತ್ರಿಯವರ ಆರ್ಥಿಕ ಸಲಹಾ ಮಂಡಳಿಯ ಸದಸ್ಯರು) ಈ ಉನ್ನತ ಮಟ್ಟದ ಸಮಿತಿಯ ಸದಸ್ಯರಾಗಿದ್ದಾರೆ.

ಉನ್ನತ ಮಟ್ಟದ ಸಮಿತಿಯು ಅಕ್ರಮ ವಲಸೆ ಮತ್ತು ಇತರ ಅಸಹಜ ಕಾರಣಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಸಂಭವಿಸುತ್ತಿರುವ ಜನಸಂಖ್ಯಾ ಬದಲಾವಣೆಗಳನ್ನು ವೈಜ್ಞಾನಿಕವಾಗಿ ಮೌಲ್ಯಮಾಪನ ಮಾಡುತ್ತದೆ, ಅವುಗಳ ಕಾರಣಗಳನ್ನು ವಿಶ್ಲೇಷಿಸುತ್ತದೆ ಮತ್ತು ಸೂಕ್ತವಾದ ನೀತಿ, ಶಾಸಕಾಂಗ ಮತ್ತು ಆಡಳಿತಾತ್ಮಕ ಕ್ರಮಗಳನ್ನು ಶಿಫಾರಸು ಮಾಡುತ್ತದೆ.

 

*****

 


(रिलीज़ आईडी: 2279897) आगंतुक पटल : 16
इस विज्ञप्ति को इन भाषाओं में पढ़ें: English , हिन्दी , Punjabi , Urdu , Marathi , Assamese , Bengali , Bengali-TR , Manipuri , Gujarati , Odia , Tamil , Telugu , Malayalam