ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಅಮೆರಿಕಾ ಸಂಯುಕ್ತ ಸಂಸ್ಥಾನದ 250ನೇ ಸ್ವಾತಂತ್ರ್ಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ

प्रविष्टि तिथि: 04 JUL 2026 9:40PM by PIB Bengaluru

ಅಮೆರಿಕದ ಅಧ್ಯಕ್ಷರಾದ ಶ್ರೀ ಡೊನಾಲ್ಡ್ ಜೆ. ಟ್ರಂಪ್ ಮತ್ತು ಅಮೆರಿಕದ ಜನರಿಗೆ ದೇಶದ ಸ್ವಾತಂತ್ರ್ಯದ 250ನೇ ವಾರ್ಷಿಕೋತ್ಸವದ ಐತಿಹಾಸಿಕ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶುಭ ಕೋರಿದ್ದಾರೆ. ಭಾರತ ಮತ್ತು ಅಮೆರಿಕ ಪಾಲುದಾರಿಕೆಯ ಶಕ್ತಿಯನ್ನು ಶ್ರೀ ಮೋದಿ ಒತ್ತಿ ಹೇಳಿದರು. ಈ ಎರಡು ಪ್ರಜಾಪ್ರಭುತ್ವಗಳ ನಡುವಿನ ಸಂಬಂಧವು ಕಾರ್ಯತಂತ್ರದ ಪಾಲುದಾರಿಕೆಯನ್ನು ಮೀರಿ, ಪ್ರಜಾಪ್ರಭುತ್ವದ ಹಂಚಿಕೆಯ ಮೌಲ್ಯಗಳು, ಕಾನೂನಿನ ಆಳ್ವಿಕೆ ಮತ್ತು ಜನರ ಅಪರಿಮಿತ ಸಾಮರ್ಥ್ಯದ ಮೇಲಿನ ನಂಬಿಕೆಯಾಗಿದೆ ಎಂದು ಅವರು ಹೇಳಿದರು.

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

1.4 ಶತಕೋಟಿ ಭಾರತೀಯರ ಪರವಾಗಿ, ಅಧ್ಯಕ್ಷರಾದ ಟ್ರಂಪ್ ಮತ್ತು ಅಮೆರಿಕದ ಜನರಿಗೆ ನಿಮ್ಮ ಸ್ವಾತಂತ್ರ್ಯದ 250ನೇ ಐತಿಹಾಸಿಕ ವಾರ್ಷಿಕೋತ್ಸವದಂದು ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಭಾರತ ಮತ್ತು ಅಮೆರಿಕಾ ಸಂಯುಕ್ತ ಸಂಸ್ಥಾನಗಳು ಕಾರ್ಯತಂತ್ರದ ಪಾಲುದಾರಿಕೆಯನ್ನು ಮಾತ್ರವಲ್ಲದೆ, ಪ್ರಜಾಪ್ರಭುತ್ವ, ಕಾನೂನು ಮತ್ತು ನಮ್ಮ ಜನರ ಅಪರಿಮಿತ ಸಾಮರ್ಥ್ಯದಲ್ಲಿನ ನಮ್ಮ ನಂಬಿಕೆಯನ್ನು ಹಂಚಿಕೊಳ್ಳುತ್ತವೆ.  ಇದು ಎರಡೂ ದೇಶಗಳ ಸ್ನೇಹವನ್ನು ಜಾಗತಿಕ ಒಳಿತಿಗಾಗಿ ಒಂದು ಶಕ್ತಿಯನ್ನಾಗಿ ಮಾರ್ಪಡಿಸುತ್ತದೆ.

ಮುಂದಿನ 250 ವರ್ಷಗಳು ಅಮೆರಿಕಕ್ಕೆ ಇನ್ನೂ ಹೆಚ್ಚಿನ ಸಮೃದ್ಧಿ, ಶಾಂತಿ ಮತ್ತು ಪ್ರಗತಿಯನ್ನು ತರಲಿ ಮತ್ತು ಭಾರತ ಮತ್ತು ಅಮೇರಿಕೆಯ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿ.

@POTUS

@realDonaldTrump

 

*****


(रिलीज़ आईडी: 2281601) आगंतुक पटल : 2
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam