ಪ್ರಧಾನ ಮಂತ್ರಿಯವರ ಕಛೇರಿ
ಪರಮಪೂಜ್ಯ ದಲೈ ಲಾಮಾ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಮಂತ್ರಿ
प्रविष्टि तिथि:
06 JUL 2026 12:53PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಪರಮಪೂಜ್ಯ ದಲೈ ಲಾಮಾ ಅವರಿಗೆ ಜನುಮದಿನದ ಶುಭಾಶಯಗಳನ್ನು ಕೋರಿದ್ದಾರೆ. ಪರಮಪೂಜ್ಯ ದಲೈ ಲಾಮಾ ಅವರ ಶಾಂತಿ ಮತ್ತು ಸಾಮರಸ್ಯದ ಸಂದೇಶವು ವಿಶ್ವದಾದ್ಯಂತ ಜನರಿಗೆ ಮಾರ್ಗದರ್ಶಕ ಶಕ್ತಿಯಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿ ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದ್ದಾರೆ.
“ಪರಮಪೂಜ್ಯ ದಲೈ ಲಾಮಾ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರ ಶಾಂತಿ ಮತ್ತು ಸಾಮರಸ್ಯದ ಸಂದೇಶವು ವಿಶ್ವದಾದ್ಯಂತ ಜನರಿಗೆ ಮಾರ್ಗದರ್ಶಕ ಶಕ್ತಿಯಾಗಿದೆ. ಅವರ ನೈತಿಕ ಮತ್ತು ಆಧ್ಯಾತ್ಮಿಕ ಶಕ್ತಿ ಮತ್ತು ಜಾಗತಿಕ ಒಳಿತಿಗಾಗಿನ ಅವರ ಬದ್ಧತೆ ಶ್ಲಾಘನೀಯ. ಅವರು ದೀರ್ಘಕಾಲ ಮತ್ತು ಆರೋಗ್ಯಕರ ಜೀವನ ನಡೆಸಲೆಂದು ಹಾರೈಸುತ್ತೇನೆ’’.
@DalaiLama
*****
(रिलीज़ आईडी: 2281633)
आगंतुक पटल : 11
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Bengali-TR
,
Assamese
,
Manipuri
,
Punjabi
,
Gujarati
,
Tamil
,
Telugu
,
Malayalam