ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗ್ರಾಹಕರ ದೂರುಗಳ ಸಂಪೂರ್ಣ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸುವ ‘ಇ-ಜಾಗೃತಿ’ ಕುರಿತು ಲೇಖನವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

प्रविष्टि तिथि: 04 JUL 2026 2:03PM by PIB Bengaluru

ಗ್ರಾಹಕರ ದೂರುಗಳ ಸಂಪೂರ್ಣ ಪ್ರಕ್ರಿಯೆಗಳನ್ನು ಡಿಜಿಟಲೀಕರಣಗೊಳಿಸುವ ಮೂಲಕ ಹಲವು ಸವಾಲುಗಳಿಗೆ ಪರಿಹಾರ ಒದಗಿಸುತ್ತಿರುವ ‘ಇ-ಜಾಗೃತಿ’ ಕುರಿತು ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು ಬರೆದ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ. "ಸಂಬಂಧಪಟ್ಟ ವಿವಿಧ ಪಾಲುದಾರರೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಿದ ಬಳಿಕ ಇ-ಜಾಗೃತಿ ವ್ಯವಸ್ಥೆಯನ್ನು ಮತ್ತಷ್ಟು ಪರಿಷ್ಕರಿಸಲಾಗಿದೆ. ಇದರೊಂದಿಗೆ ಗ್ರಾಹಕ ನ್ಯಾಯ ವ್ಯವಸ್ಥೆಯೂ ರಚನಾತ್ಮಕ ಡಿಜಿಟಲ್ ಸುಧಾರಣೆಗೆ ಒಳಗಾಗುತ್ತಿರುವ ಕ್ಷೇತ್ರಗಳಲ್ಲಿ ಒಂದಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ" ಎಂದು ಶ್ರೀ ಮೋದಿ ಹೇಳಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

“ಈ ಲೇಖನದಲ್ಲಿ ಕೇಂದ್ರ ಸಚಿವರಾದ ಶ್ರೀ @JoshiPralhad ಅವರು, ಗ್ರಾಹಕರ ದೂರುಗಳ ಸಂಪೂರ್ಣ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸುವ ಮೂಲಕ ಇ-ಜಾಗೃತಿ ಹೇಗೆ ಅನೇಕ ಸವಾಲುಗಳನ್ನು ನಿವಾರಿಸುತ್ತದೆ ಎಂಬುದನ್ನು ವಿವರಿಸಿದ್ದಾರೆ.

ವಿವಿಧ ಪಾಲುದಾರರೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಿದ ಬಳಿಕ ಇ-ಜಾಗೃತಿ ವ್ಯವಸ್ಥೆಯನ್ನು ಮತ್ತಷ್ಟು ಪರಿಷ್ಕರಿಸಲಾಗಿದೆ. ಇದರೊಂದಿಗೆ ಗ್ರಾಹಕ ನ್ಯಾಯ ವ್ಯವಸ್ಥೆಯೂ ರಚನಾತ್ಮಕ ಡಿಜಿಟಲ್ ಸುಧಾರಣೆಗೆ ಒಳಗಾಗುತ್ತಿರುವ ಕ್ಷೇತ್ರಗಳಲ್ಲಿ ಒಂದಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.”

https://livemint.com/opinion/columns/ejagriti-reimagining-consumer-justice-for-a-digital-india-pralhad-joshi-11783001218221.html

 

*****


(रिलीज़ आईडी: 2281908) आगंतुक पटल : 10
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Bengali-TR , Manipuri , Assamese , Punjabi , Gujarati , Odia , Tamil , Telugu , Malayalam