ಪ್ರಧಾನ ಮಂತ್ರಿಯವರ ಕಛೇರಿ
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿದೋಣಿ ಮುಳುಗಿ ಸಂಭವಿಸಿದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ
ಪರಿಹಾರ ಘೋಷಣೆ ಮಾಡಿದ ಪ್ರಧಾನಮಂತ್ರಿ
प्रविष्टि तिथि:
13 JUL 2026 9:47PM by PIB Bengaluru
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿದೋಣಿ ಮುಳುಗಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ದುಃಖದ ಸಮಯದಲ್ಲಿ ಪ್ರಧಾನಮಂತ್ರಿ ಅವರು ದುಃಖತಪ್ತ ಕುಟುಂಬಗಳಿಗೆ ತಮ್ಮ ಆಲೋಚನೆಗಳನ್ನು ತಿಳಿಸಿದರು ಮತ್ತು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಪ್ರಧಾನಿ ಘೋಷಿಸಿದರು. ಇದೇ ವೇಳೆ ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು ಎಂದು ತಿಳಿಸಿದರು.
ಪ್ರಧಾನಮಂತ್ರಿ ಕಾರ್ಯಾಲಯ ಈ ಬಗ್ಗೆ ಎಕ್ಸ್‌ನಲ್ಲಿಹಂಚಿಕೊಂಡಿದೆ;
‘ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ದೋಣಿ ಮುಳುಗಿ ಸಂಭವಿಸಿದ ಜೀವಹಾನಿ ತೀವ್ರ ನೋವಿನಿಂದ ಕೂಡಿದೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ದುಃಖತಪ್ತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ.
"ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಹಾಗೆಯೇ ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಮಂತ್ರಿ @narendramodi”
*****
(रिलीज़ आईडी: 2284966)
आगंतुक पटल : 18
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam