ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕತಾರ್ ನ ಅಮೀರ್ ಜತೆ ಪ್ರಧಾನಮಂತ್ರಿ ಮಾತುಕತೆ


ಕತಾರ್ ನ ಅಮೀರ್ ಅವರ  ತಂದೆ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ

ಭಾರತ-ಕತಾರ್ ಸಂಬಂಧಗಳನ್ನು ಬಲಪಡಿಸುವಲ್ಲಿ ಅಮೀರ್ ರ ತಂದೆ ಅವರ ದಾರ್ಶನಿಕ ನಾಯಕತ್ವ ಮತ್ತು ಕೊಡುಗೆಯನ್ನು ಸ್ಮರಿಸಿದ ಪ್ರಧಾನಮಂತ್ರಿ

ಅಮೀರ್ ತಂದೆಯ ಪರಂಪರೆ ಮುಂದುವರಿಸುವ ತಮ್ಮ ಸಂಕಲ್ಪವನ್ನು ಪುನರುಚ್ಚರಿಸಿದ ಇಬ್ಬರು ನಾಯಕರು

प्रविष्टि तिथि: 16 JUL 2026 9:37PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕತಾರ್ ರಾಜ್ಯದ ಅಮೀರ್ ಘನತೆವೆತ್ತ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.

ಕತಾರ್ ನ  ಅಮೀರ್ ರ ತಂದೆ ಘನತೆವೆತ್ತ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ ಅವರ ನಿಧನಕ್ಕೆ ಪ್ರಧಾನಮಂತ್ರಿ ತಮ್ಮ ಹೃತ್ಪೂರ್ವಕ ಸಂತಾಪ ಸೂಚಿಸಿದರು.

ಆಧುನಿಕ ಕತಾರ್ ನ ಮುಖ್ಯ ವಾಸ್ತುಶಿಲ್ಪಿಯಾಗಿ ಅಮೀರರ ತಂದೆ ಅವರ ಮಹತ್ವದ ಕೊಡುಗೆಗಳನ್ನು ಸ್ಮರಿಸಿಕೊಂಡ ಪ್ರಧಾನಮಂತ್ರಿ,  ಅವರ ದಾರ್ಶನಿಕ ನಾಯಕತ್ವಕ್ಕೆ ಗೌರವ ನಮನ ಸಲ್ಲಿಸಿದರು ಮತ್ತು ಕಳೆದ ಕೆಲವು ವರ್ಷಗಳಿಂದೀಚೆಗೆ ಭಾರತ-ಕತಾರ್ ಸಂಬಂಧಗಳನ್ನು ಬಲವರ್ಧನೆಗೊಳಿಸುವಲ್ಲಿ ಅವರ ಪ್ರಮುಖ ಪಾತ್ರವನ್ನು ಹಾಗೂ ಕತಾರ್ ನಲ್ಲಿ ಭಾರತ ಮತ್ತು ಭಾರತೀಯ ಸಮುದಾಯದ ಬಗ್ಗೆ ಅವರ ಆಳವಾದ ಪ್ರೀತಿಯನ್ನು ಸ್ಮರಿಸಿದರು.

ಕತಾರ್ ನ ಅಮೀರ್ ಅವರು ಪ್ರಧಾನಮಂತ್ರಿಯವರ ಕರೆಗೆ ಧನ್ಯವಾದ ಅರ್ಪಿಸಿದರು ಮತ್ತು ಈ ಕಷ್ಟದ ಸಮಯದಲ್ಲಿ ನೆರವಿನ ಮಾತುಗಳಿಗೆ ತಮ್ಮ ಕೃತಜ್ಞತೆಯನ್ನು ಸಲ್ಲಿಸಿದರು.

ಅಮೀರ್ ರ ತಂದೆಯ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ಮತ್ತು ಭಾರತ-ಕತಾರ್ ಕಾರ್ಯತಾಂತ್ರಿಕ ಪಾಲುದಾರಿಕೆ ಮತ್ತು ಜನರ ನಡುವಿನ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ತಮ್ಮ ಸಂಕಲ್ಪವನ್ನು ಇಬ್ಬರೂ ನಾಯಕರು ಪುನರುಚ್ಚರಿಸಿದರು.

ಜತೆಗೆ ಉಭಯ ನಾಯಕರು ನಿಕಟ ಸಂಪರ್ಕದಲ್ಲಿರಲು ಒಪ್ಪಿಕೊಂಡರು.

 

*****


(रिलीज़ आईडी: 2285737) आगंतुक पटल : 6
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam